ಸೋಮವಾರ, ಏಪ್ರಿಲ್ 28, 2025
HomeCoastal NewsUdupi School Holiday: ಉಡುಪಿ ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

Udupi School Holiday: ಉಡುಪಿ ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

- Advertisement -

ಉಡುಪಿ : Udupi School Holiday: ಕಳೆದ ಮೂರು ದಿನಗಳಿಂದಲೂ ಉಡುಪಿ ಜಿಲ್ಲೆಯಲ್ಲಿ ಮಳೆರಾಯ ಅಬ್ಬರಿಸುತ್ತಿದ್ದಾನೆ. ಅದ್ರಲ್ಲೂ ಜುಲೈ ೫ರಂದು ಉಡುಪಿ ಜಿಲ್ಲೆಯಾದ್ಯಂತ ಭಾರೀ ಮಳೆಯ ಸುರಿಯಲಿದ್ದು, ಜಿಲ್ಲಾಡಳಿತ ಈಗಾಗಲೇ ರೆಡ್‌ ಅಲರ್ಟ್‌ ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಕೂರ್ಮರಾವ್‌ ಆದೇಶ ಹೊರಡಿಸಿದ್ದಾರೆ.

ಉಡುಪಿ ಜಿಲ್ಲೆಯ ಸರಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ. ಜುಲೈ 5 ರಂದು ರಾಜ್ಯದ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯಲಿದ್ದು, ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಮುನ್ನೆಚ್ಚರಿಕೆಯ ಕ್ರಮವಾಗಿ ಉಡುಪಿ ಜಿಲ್ಲಾಡಳಿತ ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಿದೆ.

ಉಡುಪಿ ಜಿಲ್ಲೆಯ ಬ್ರಹ್ಮಾವರ, ಕಾಪು, ಬೈಂದೂರು ತಾಲೂಕುಗಳಲ್ಲಿ ಇಂದು ಧಾರಾಕಾರ ಮಳೆ ಸುರಿದಿದೆ. ಈ ಹಿಂದೆ ಜಿಲ್ಲಾಡಳಿತ ಮಳೆಯನ್ನು ಆಧರಿಸಿ ಶಾಲೆಗಳಿಗೆ ರಜೆ ಘೋಷಣೆ ಮಾಡುವ ಜವಾಬ್ದಾರಿಯನ್ನು ಆಯಾಯ ತಹಶೀಲ್ದಾರ್‌ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ನೀಡಲಾಗಿತ್ತು. ಆದರೆ ರಾತ್ರಿಯ ವೇಳೆಯಲ್ಲಿ ಮಳೆಯ ಅಬ್ಬರ ಜೋರಾಗುತ್ತಿದ್ದಂತೆಯೇ ಜಿಲ್ಲಾಧಿಕಾರಿಗಳು ಎಲ್ಲಾ ತಾಲೂಕುಗಳ ಮಾಹಿತಿಯನ್ನು ಪಡೆದು ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಿದ್ದಾರೆ.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ವ್ಯಾಪಕ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳು ಬುಧವಾರ ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲೆ, ಪದವಿ ಪೂರ್ವ ಕಾಲೇಜು ಹಾಗೂ ಪದವಿ ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರ, ಉಳ್ಳಾಲ, ಮೂಡಬಿದ್ರೆ, ಮೂಲ್ಕಿ, ಬಂಟ್ವಾಳ ತಾಲೂಕುಗಳ ಶಾಲೆಗಳಿಗೆ ಮಂಗಳವಾರ ಕೂಡ ರಜೆಯನ್ನು ನೀಡಲಾಗಿತ್ತು. ಮಂಗಳವಾರ ಜಿಲ್ಲೆಯ ಸುಳ್ಯ, ಪುತ್ತೂರು, ಬಂಟ್ವಾಳ, ಕೊಕ್ಕಡ, ಮೂಡಬಿದಿರೆ, ಮೂಲ್ಕಿ, ಮಂಗಳೂರು ಸೇರದಂತೆ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿಯೂ ಭಾರೀ ಮಳೆ ಸುರಿದಿದೆ. ಈ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆಯನ್ನು ಮುಂದುವರಿಕೆ ಮಾಡಲಾಗಿದೆ.

ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕಡಲ್ಕೊರೆತ ಹೆಚ್ಚುತ್ತಿದೆ. ಸುರತ್ಕಲ್‌ ಬೀಚ್‌ನ ಬಳಿಯಲ್ಲಿ ಸಮುದ್ರದ ಬೋರ್ಗರೆತೆ ಆತಂಕವನ್ನು ಮೂಡಿಸಿದೆ. ಹೆಜಮಾಡಿ, ಉಳ್ಳಾಲ, ಪಡುಬಿದ್ರಿ, ಕಾಪು, ಕೋಡಿ ಮುಂತಾದ ಕಡೆಗಳಲ್ಲಿ ಕಡಲ್ಕೊರೆತ ಉಂಟಾಗಿದೆ. ಇನ್ನು ಕರಾವಳಿ ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಮೀನುಗಾರರು ಹಾಗೂ ಪ್ರವಾಸಿಗರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆಯನ್ನು ನೀಡಲಾಗಿದೆ. ನದಿ, ಸಮುದ್ರ ತೀರದಲ್ಲಿ ವಾಸಿಸುತ್ತಿರುವ ನಿವಾಸಿಗಳು ಎಚ್ಚರಿಕೆ ವಹಿಸಬೇಕಾಗಿದೆ. ಮಕ್ಕಳು ನದಿ, ಕೆರೆ, ಸಮುದ್ರ ತೀರಕ್ಕೆ ಹೋಗದಂತೆ ಪೋಷಕರು ಮುನ್ನೆಚ್ಚರಿಕೆಯನ್ನು ಕೈಗೊಳ್ಳುವಂತೆ ಜಿಲ್ಲಾಡಳಿತಗಳು ಮುನ್ನೆಚ್ಚರಿಕೆಯನ್ನು ನೀಡಿವೆ.

ಉಡುಪಿ ಜಿಲ್ಲೆಯಲ್ಲಿ ನಾಳೆ ಜಿಲ್ಲಾಡಳಿತ ರೆಡ್‌ ಅಲರ್ಟ್‌ ಘೋಷಿಸಿದ್ದು, ಶಾಲೆಗಳಿಗೆ ರಜೆ ನೀಡುವ ಅಧಿಕಾರವನ್ನು ತಹಶೀಲ್ದಾರ್‌ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ನೀಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರ, ಉಳ್ಳಾಲ, ಮೂಡಬಿದಿರೆ, ಮೂಲ್ಕಿ ಹಾಗೂ ಬಂಟ್ವಾಳ ತಾಲೂಕುಗಳಲ್ಲಿ ರಜೆ ಘೋಷಿಸಲಾಗಿತ್ತು. ಇಂದೂ ಕೂಡ ಮಳೆ ಮುಂದುವರಿಕೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಮತ್ತೆ ನಾಳೆ ಕೂಡ ಧಾರಾಕಾರವಾಗಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ಸಮುದ್ರದಲ್ಲಿ 3.5 – 4.1 ಮೀ. ಎತ್ತರದ ಅಲೆಗಳು ಏಳುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಮೀನುಗಾರರು, ಕಡಲತೀರದ ವಾಸಿಗಳು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ : Red Alert School Holiday: ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ರಜೆ : ರೆಡ್‌ ಅಲರ್ಟ್‌ ಘೋಷಣೆ

ಇದನ್ನೂ ಓದಿ : NEET Exam fraud : ನೀಟ್ ಪರೀಕ್ಷೆ ವಂಚನೆ : ಪರೀಕ್ಷೆ ವೇಳೆ ವೈದ್ಯಕೀಯ ವಿದ್ಯಾರ್ಥಿಗಳನ್ನು ವಂಚಿಸಿದ್ದಕ್ಕಾಗಿ ಏಮ್ಸ್ ವಿದ್ಯಾರ್ಥಿಗಳನ್ನು ಬಂಧಿಸಿದ ದೆಹಲಿ ಪೊಲೀಸರು

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular