Dr. K. Vidyakumari : ಉಡುಪಿ : ಬೀಚ್, ಜಲಪಾತಗಳಲ್ಲಿ ಸೆಲ್ಪಿ ನಿಷೇಧ : ಡಿಸಿ ಡಾ.ಕೆ. ವಿದ್ಯಾಕುಮಾರಿ

ಉಡುಪಿ : ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಜುಲೈ 25 ರಂದು ಶಾಲಾ ಮಕ್ಕಳ ಹಿತದೃಷ್ಟಿಯಿಂದ ಶಾಲಾ-ಕಾಲೇಜುಗಳಿಗೆ ರಜೆ (Dr. K. Vidyakumari) ಘೋಷಿಸಲಾಗಿದೆ. ಏಕೆಂದರೆ ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ (IMD) ಕರಾವಳಿ ಜಿಲ್ಲೆಗಳಾದ ಉಡುಪಿ ಹಾಗೂ ದಕ್ಷಿಣಕನ್ನಡಕ್ಕೆ ರೆಡ್ ಅಲರ್ಟ್ ನೀಡಿದೆ. ಇನ್ನು ನದಿ, ಸಮುದ್ರ ತೀರದಲ್ಲಿ ಹುಚ್ಚು ಸಾಹಸ ಮಾಡುವ ಪ್ರವಾಸಿಗರಿಗೆ ಜಿಲ್ಲಾಧಿಕಾರಿಗಳು ಮುನ್ಸೂಚನೆ ನೀಡಿದ್ದಾರೆ.

ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದ್ದು, ನದಿಗಳು, ಹಳ್ಳಗಳು, ತೋಡುಗಳು ತುಂಬಿ ಹರಿಯುತ್ತಿರುವ ಕಾರಣ, ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಯುವಜನರು, ಸಾರ್ವಜನಿಕರು ಮತ್ತು ಜಿಲ್ಲೆಗೆ ಆಗಮಿಸುವ ಪ್ರವಾಸಿಗರು, ಬೀಚ್‌ಗಳು, ನದಿಗಳು ಹಾಗೂ ಜಲಪಾತಗಳ ಬಳಿ ತೆರಳದಂತೆ ಹಾಗೂ ಫೋಟೋ ಮತ್ತು ವಿಡಿಯೋ ಚಿತ್ರೀಕರಣ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಿಗೆ ಮಂಗಳವಾರ ಬೆಳಗಿನ ಜಾವದವರೆಗೆ ಐಎಂಡಿ ರೆಡ್ ಅಲರ್ಟ್ ಘೋಷಿಸಿದೆ. ಮುಂದಿನ 24 ಗಂಟೆಗಳಲ್ಲಿ ಕರಾವಳಿ ಪ್ರದೇಶಗಳಲ್ಲಿ 200 ಮಿ.ಮೀ.ಗೂ ಹೆಚ್ಚು ಮಳೆಯಾಗುವ ನಿರೀಕ್ಷೆಯಿದೆ ಎಂದು ಇಲಾಖೆ ತಿಳಿಸಿದೆ. ಹವಾಮಾನ ಇಲಾಖೆಯು ಕರಾವಳಿ ಪ್ರದೇಶದಲ್ಲಿ ವಾಸಿಸುವ ಜನರಿಗೆ ಜಲಾವೃತವಾಗುವ ಪ್ರದೇಶಗಳನ್ನು ತಪ್ಪಿಸಲು ಎಚ್ಚರಿಕೆಯನ್ನು ನೀಡಿದೆ ಮತ್ತು ನಿರಂತರ ಮಳೆಯಿಂದ ಕುಸಿಯುವ ದುರ್ಬಲ ರಚನೆಗಳಿಂದ ದೂರವಿರಲು ಸೂಚಿಸಲಾಗಿದೆ.

ಇದನ್ನೂ ಓದಿ : Madras Eye : ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚುತ್ತಿರುವ ಮದ್ರಾಸ್‌ ಐ : ಮಕ್ಕಳನ್ನೇ ಟಾರ್ಗೆಟ್ ಮಾಡಿದ ಕೆಂಗಣ್ಣು ಬೇನೆ

ನಿರಂತರ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಪ್ರದೇಶಗಳು ಪ್ರವಾಹ ಮತ್ತು ಭೂಕುಸಿತವನ್ನು ಅನುಭವಿಸುತ್ತಿವೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಸ್ನಾನಘಟ್ಟ ಮುಳುಗಡೆಯಾಗಿದ್ದು, ಕುಮಾರಧಾರಾ ನದಿಯಲ್ಲಿ ಅಪಾಯದ ಮಟ್ಟಕ್ಕೆ ಏರಿಕೆಯಾಗಿದ್ದು, ಮಳೆ ಕಡಿಮೆಯಾಗುವವರೆಗೆ ಭಕ್ತರು ದೇಗುಲಕ್ಕೆ ಭೇಟಿ ನೀಡದಂತೆ ಸೂಚನೆ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Udupi : Selfie ban on beach, waterfalls : DC Dr.K. Vidyakumari

Comments are closed.