ಸೋಮವಾರ, ಏಪ್ರಿಲ್ 28, 2025
HomeCoastal NewsUdupi Water Protest : ಉಡುಪಿಯಲ್ಲಿ ನೀರಿನ ಸಮಸ್ಯೆ : ಖಾಲಿ ಕೊಡ ಹಿಡಿದು ಗ್ರಾಮ...

Udupi Water Protest : ಉಡುಪಿಯಲ್ಲಿ ನೀರಿನ ಸಮಸ್ಯೆ : ಖಾಲಿ ಕೊಡ ಹಿಡಿದು ಗ್ರಾಮ ಪಂಚಾಯತ್‌ಗೆ ನುಗ್ಗಿದ ಮಹಿಳೆಯರು

- Advertisement -

ಉಡುಪಿ : (Udupi Water Protest) ಕುಡಿಯುವ ನೀರು ಪೂರೈಕೆ ಮಾಡುತ್ತಿದ್ದ ಬಜೆ ಡ್ಯಾಂನಲ್ಲಿ ನೀರಿನ ಕೊರತೆ ಉಂಟಾಗಿದೆ. ಇದರಿಂದಾಗಿ ಉಡುಪಿ ನಗರದಲ್ಲಿ ನೀರಿನ ಸಮಸ್ಯೆ ಎದುರಾಗಿದೆ. ಅದ್ರಲ್ಲೂ ಉಡುಪಿ ನಗರ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿಯೂ ನೀರಿನ ಕೊರತೆ ಕಂಡು ಬಂದಿದೆ. ಕಳೆದ ಎರಡು ತಿಂಗಳಲ್ಲಿ ಕೇವಲ ಮೂರು ಬಾರಿ ಮಾತ್ರವೇ ನೀರು ಕೊಡಲಾಗಿದೆ. ಇದರಿಂದ ಆಕ್ರೋಶಗೊಂಡ ಮಹಿಳೆಯರು ಖಾಲಿ ಕೊಡಗಳನ್ನು ಹಿಡಿದು ಗ್ರಾಮ ಪಂಚಾಯತ್‌ಗೆ ಮುತ್ತಿಗೆ ಹಾಕಿದ ಘಟನೆ ಉಡುಪಿ ನಗರದ ಅಂಬಲಪಾಡಿ ಗ್ರಾಮ ಪಂಚಾಯತ್‌ನಲ್ಲಿ ನಡೆದಿದೆ.

ಉಡುಪಿ ನಗರದ ಅಂಬಲಪಾಡಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಕಿದಿಯೂರು ಗ್ರಾಮದಲ್ಲಿನ ಮನೆಗಳಿಗೆ ಕಳೆದ ಎರಡು ತಿಂಗಳಿನಿಂದಲೂ ಸಮರ್ಪಕವಾಗಿ ನೀರು ಪೂರೈಕೆ ಆಗುತ್ತಿಲ್ಲ. ಈ ಕುರಿತು ಗ್ರಾಮ ಪಂಚಾಯತ್‌ ಅಧಿಕಾರಿಗಳು, ಸಿಬ್ಬಂಧಿಗಳ ಬಳಿ ಕೇಳಿದ್ರೆ ಸಮರ್ಪಕ ಉತ್ತರ ಸಿಗುತ್ತಿಲ್ಲ. ಇದರಿಂದ ಕೆರಳಿದ ಗ್ರಾಮಸ್ಥರು ಇಂದು ಗ್ರಾಮ ಪಂಚಾಯತ್‌ಗೆ ನುಗ್ಗಿದ್ದಾರೆ.

ಆರಂಭದಲ್ಲಿ ಕೊಡಗಳನ್ನು ಹಿಡಿದು ಗ್ರಾಮ ಪಂಚಾಯತ್‌ಗೆ ನುಗ್ಗಿದ ಮಹಿಳೆಯರು ಗ್ರಾಮ ಪಂಚಾಯತ್‌ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆಯಲ್ಲಿ ಗ್ರಾಮ ಪಂಚಾಯತ್‌ಗೆ ಆಗಮಿಸಿದ ಗ್ರಾಮ ಪಂಚಾಯತ್‌ ಅಧ್ಯಕ್ಷೆ ರೋಹಿಣಿ ಅವರ ಜೊತೆಗೆ ಧರಣಿ ನಿರತರು ವಾಗ್ವಾದ ನಡೆಸಿದ್ದಾರೆ. ಕಳೆದ ಎರಡು ತಿಂಗಳಿನಿಂದಲೂ ವಾರ್ಡ್‌ನಲ್ಲಿ ನೀರಿನ ಸಮಸ್ಯೆ ಇದ್ದರೂ ಕೂಡ ಗ್ರಾಮ ಪಂಚಾಯತ್‌ ಅಧ್ಯಕ್ಷರು ಒಮ್ಮೆಯೂ ಕೂಡ ಭೇಟಿ ನೀಡಿರಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : Santhekatte Highway problem : ಸಂತೆಕಟ್ಟೆ ಹೆದ್ದಾರಿ ಸಮಸ್ಯೆ : 3 ದಿನದಲ್ಲಿ ಪರಿಹಾರ ಹುಡುಕಿ, ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚನೆ

ಅಂತಿಮವಾಗಿ ಮೂರು ದಿನಗಳಿಗೊಮ್ಮೆ ನೀರು ಬಿಡುವುದಾಗಿ ಅಧ್ಯಕ್ಷರು ಗ್ರಾಮಸ್ಥರಿಗೆ ಭರವಸೆಯನ್ನು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಧರಣಿಯನ್ನು ಗ್ರಾಮಸ್ಥರು ಕೈಬಿಟ್ಟಿದ್ದಾರೆ. ರಂಜನ್‌ ಕಿದಿಯೂರು, ಯತಿರಾಜ್‌ ಕಿದಿಯೂರು, ಜನಾರ್ದನ ಕಿದಿಯೂರು, ದೇವರಾಜ್‌ ಕಿದಿಯೂರು, ಶಾರದಾ ಪೂಜಾರ್ತಿ, ಸುಮತಿ ಕಿದಿಯೂರು ಮುಂತಾದವರು ಉಪಸ್ಥಿತರಿದ್ದರು.

Udupi Water Protest: Water problem in Udupi: Women stormed the village panchayat with empty water bottles

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular