Unethical Police Giri: ಮೂಲ್ಕಿಯಲ್ಲಿ ಯುವಕನಿಗೆ ಮಾರಣಾಂತಿಕ ಹಲ್ಲೆ

ಮೂಲ್ಕಿ: (Unethical Police Giri) ದಕ್ಷಿಣ ಕನ್ನಡ ಹಾಗೂ ಕರಾವಳಿ ಭಾಗದಲ್ಲಿ ದಿನದಿಂದ ದಿನಕ್ಕೆ ಅನೈತಿಕ ಪೊಲೀಸ್‌ ಗಿರಿ ಹೆಚ್ಚಾಗುತ್ತಿದ್ದು, ಅನ್ಯ ಕೋಮಿನ ಯುವಕನೋರ್ವನಿಗೆ ಹಿಂದೂ ಸಂಘಟನೆಯ ಕಾರ್ಯಕರ್ತರು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಮೂಲ್ಕಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕಳೆದ ಹದಿನೈದು ದಿನಗಳಲ್ಲಿ ಒಟ್ಟು ಆರು ಅನೈತಿಕ ಪೊಲೀಸ್‌ ಗಿರಿ (Unethical Police Giri) ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ದಿನದಿಂದ ದಿನಕ್ಕೆ ಪ್ರಕರಣಗಳು ಹೆಚ್ಚಾಗುತ್ತಿವೆ. ಕಳೆದ ಕೆಲವು ದಿನಗಳ ಹಿಂದೆ ಮಂಗಳೂರಿನ ಚಿನ್ನದ ಅಂಗಡಿಯೊಂದಕ್ಕೆ ದುಷ್ಕರ್ಮಿಗಳು ನುಗ್ಗಿ ಅಲ್ಲಿ ಕೆಲಸ ಮಾಡುತ್ತಿದ್ದ ಯುವಕನಿಗೆ ಥಳಿಸಿದ್ದಾರೆ. ನಂತರದಲ್ಲಿ ಮಂಗಳೂರಿನ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದು, ಕಳೆದ ಎರಡು ದಿನಗಳ ಹಿಂದೆ ಬಂಟ್ವಾಳ ತಾಲೂಕಿನಲ್ಲಿ ವ್ಯಕ್ತಿಯೋರ್ವರ ಮೇಲೆ ಸುಳ್ಳು ಆರೋಪ ಹೊರಿಸಿ ಭೀಕರವಾಗಿ ಹಲ್ಲೆ ನಡೆಸಿದ್ದಾರೆ.

ಇದಾದ ಮೇಲೆ ಸಿನಿಮಾ ವೀಕ್ಷಣೆಗೆಂದು ಬಂದಿದ್ದ ಜೋಡಿಯ ಮೇಲೆ ಬಜರಂಗದಳದ ಕಾರ್ಯಕರ್ತರು ಜೋಡಿಯನ್ನು ತಡೆದು ಪ್ರಶ್ನಿಸಿದ್ದಾರೆ. ಇದಾದ ಬಳಿಕ ಇದೇ ರೀತಿಯಲ್ಲಿ ಇನ್ನೊಂದು ಘಟನೆ ನಡೆದಿದ್ದು, ಬೆಂಗಳೂರಿಗೆ ಹೋಗುತ್ತಿದ್ದ ಜೋಡಿಯೊಂದನ್ನು ಬಜರಂಗದಳದ ಕಾರ್ಯಕರ್ತರು ತಡೆದು ಯುವತಿಯನ್ನು ತರಾಟೆಗೆ ತೆಗೆದುಕೊಂಡಿದ್ದರು.

ಇದನ್ನೂ ಓದಿ : Avatar 2: ಅವತಾರ್ 2 ಸಿನಿಮಾ ವೀಕ್ಷಣೆ ವೇಳೆ ಹೃದಯಾಘಾತದಿಂದ ಸಾವು

ಇದನ್ನೂ ಓದಿ : Attempt to murder case: ಪತ್ನಿಯೊಂದಿಗೆ ಜಗಳ: 2 ವರ್ಷದ ಮಗನನ್ನು ಬಾಲ್ಕನಿಯಿಂದ ಎಸೆದು ಬಳಿಕ ತಾನೂ ಜಿಗಿದ ವ್ಯಕ್ತಿ

ಇವೆಲ್ಲಾ ಘಟನೆಗಳು ನಡೆದ ಬಳಿಗ ಈಗ ಮತ್ತೊಂದು ಅನೈತಿಕ ಪೊಲೀಸ್‌ ಗಿರಿ ಪ್ರಕರಣ ನಡೆದಿದ್ದು, ಅನ್ಯ ಕೋಮಿನ ಯುವಕನೋರ್ವನಿಗೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಪದೇ ಪದೇ ಇಂತಹ ಘಟನೆಗಳು ಮರುಕಳಿಸುತ್ತಿದ್ದು, ಪೊಲೀಸ್‌ ಇಲಾಖೆ ಕೂಡಲೇ ಇದಕ್ಕೆ ಕಡಿವಾಣ ಹಾಕಲೇಬೇಕು. ಇಲ್ಲದೇ ಇದ್ದಲ್ಲಿ ಪರಿಸ್ಥಿತಿ ಕೈಮೀರುವ ಸಾಧ್ಯತೆಗಳಿವೆ.

(Unethical Police Giri) Unethical Police Giri is increasing day by day in Dakshina Kannada and coastal areas, the incident of fatal attack on a young man of a different tribe by the activists of a Hindu organization took place in the jurisdiction of Mulki Police Station.

Comments are closed.