Violation of Code of Conduct : ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪ : ಕಾಂಗ್ರೆಸ್‌ ಅಭ್ಯರ್ಥಿ ಪ್ರಸಾದ್ ಕಾಂಚನ್ ವಿರುದ್ಧ ದೂರು ದಾಖಲು

ಉಡುಪಿ : (Violation of Code of Conduct) ವಿಧಾನಸಭೆ ಚುನಾವಣೆ ಹಿನ್ನಲೆ ನೀತಿ ಸಂಹಿತೆ ಜಾರಿಯಾಗಿದ್ದು, ಎಲ್ಲಾ ಕಡೆಗಳಲ್ಲಿ ಕಟ್ಟು ನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಜೊತೆಗೆ ಅಧಿಕಾರಿಗಳ ಮೇಲೆ ಹದ್ದಿನ ಕಣ್ಣಿಡಲಾಗಿದೆ. ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಅಧಿಕಾರಿಗಳು ಅಥವಾ ಇನ್ನಿತರ ವಿರುದ್ದ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಈ ನಿಟ್ಟಿನಿಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾದ ಪ್ರಸಾದ್‌ ಕಾಂಚನ್‌ ವಿರುದ್ದ ನೀತಿ ಸಂಹಿತೆ ಉಲ್ಲಂಘನೆಯಡಿಯಲ್ಲಿ ದೂರು ದಾಖಲಾಗಿದೆ.

ಪತ್ರಾಂಕಿತ ವ್ಯವಸ್ಥಾಪಕರು, ಉಪನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ, ಉಡುಪಿ ಜಿಲ್ಲೆ ಇವರು ಫ್ಲೈಯಿಂಗ್‌ ಸ್ಕ್ವ್ಯಾಡ್‌ ಟೀಮ್‌-2, 120-ಉಡುಪಿ ವಿಧಾನಸಭಾ ಕ್ಷೇತ್ರ ಇದರ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿಕೊಂಡಿದ್ದರುವ ರೋಶನ್‌ ಕುಮಾರ್‌ ಎನ್ನುವವರು ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಾಗಿದೆ.

ದೂರಿನ ಪ್ರಕಾರ, “ದಿನಾಂಕ 12/04/2023 ರಂದು ಬೆಳಿಗ್ಗೆ 11:15 ಗಂಟೆಗೆ ಉಡುಪಿ ತಾಲೂಕು ಚುನಾವಣಾ ಶಾಖೆಯಿಂದ ಬಂದ ಮಾಹಿತಿ ಆಧಾರದ ಮೇಲೆ ಮಧ್ಯಾಹ್ನ 12:45 ಗಂಟೆಗೆ ಉಡುಪಿ ತಾಲೂಕು ಮೂಡನಿಡಂಬೂರು ಗ್ರಾಮದ ನಾಯರ್‌ಕೆರೆ ರಸ್ತೆಯಲ್ಲಿರುವ ಕಾಂಗ್ರೆಸ್‌ ಭವನದ ಎದುರು ತೆಂಗಿನ ಗರಿಯ ಚಪ್ಪರದ ಎದುರಿನ ಎರಡು ಅಡಿಕೆ ಕಂಬಗಳಿಗೆ ಸುಮಾರು 9×3 ಅಡಿ ಉದ್ದಗಲದ ಎರಡು ಪ್ಲಾಸ್ಟಿಕ್‌ ಫ್ಲೆಕ್ಸ್‌ ಗಳನ್ನು ಅಳವಡಿಸಿದ್ದು, ಎರಡು ಫ್ಲೆಕ್ಸ್‌ಗಳಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರ ಬ್ಲಾಕ್‌ ಕಾಂಗ್ರೆ ಸ್‌ ಸಮಿತಿ, ಉಡುಪಿ-ಬ್ರಹ್ಮಾವರ ರವರ  ವತಿಯಿಂದ ‘ನಂ. 1  ಪ್ರತಿ  ಮನೆಗೆ 200 ಯುನಿಟ್‌ ಉಚಿತ  ವಿದ್ಯುತ್‌,’ ‘ಕಾಂಗ್ರೆಸ್‌ ಗ್ಯಾರಂಟಿ ಗೃಹಲಕ್ಷ್ಮಿ ಪ್ರತಿ ಯಜಮಾನಿಗೆ ಪ್ರತಿ ತಿಂಗಳು ರೂ 2,000’, ‘ಕಾಂಗ್ರೆಸ್‌ ಗ್ಯಾರಂಟಿ-3, ಅನ್ನಭಾಗ್ಯ ಪ್ರತಿ ತಿಂಗಳು ಪ್ರತಿ ವ್ಯಕ್ತಿಗೆ 10 K.G. ಅಕ್ಕಿ ಉಚಿತ’, ‘ಯುವನಿಧಿ ಪ್ರತಿ ತಿಂಗಳು ನಿರುದ್ಯೋಗ ಭತ್ಯೆ ರೂಪಾಯಿ 3000 ಪದವೀಧರರಿಗೆ, ರೂಪಾಯಿ 1500 ಡಿಪ್ಲೋಮಾ  ಪದವೀಧರರಿಗೆ ’ ಎಂಬುದಾಗಿ ನಮೂದಿಸಲಾಗಿದೆ.

ಹಾಗೂ ಫ್ಲೆಕ್ಸನ ಕೆಳಭಾಗದಲ್ಲಿ ಉಡುಪಿ ವಿಧಾನ ಸಭಾ ಕ್ಷೇತ್ರದ ಸಂಭಾವ್ಯ ಕಾಂಗ್ರೆಸ್‌ ಅಭ್ಯರ್ಥಿ ಎಂದು ಬಿಂಬಿತ ಪ್ರಸಾದ್‌ರಾಜ್‌ ಕಾಂಚನ್‌ರವರ ಭಾವಚಿತ್ರವಿದ್ದು, ಪಕ್ಕದಲ್ಲಿ  ‘ಅಭಿವೃದ್ಧಿಗಾಗಿ ನಿಮ್ಮ ಮತ’ ಎಂಬುದಾಗಿ ನಮೂದಿಸಿರುವುದು ಕಂಡುಬಂದಿದೆ.  ಫ್ಲೆಕ್ಸ್‌ ಗಳನ್ನು ಅಳವಡಿಸಿರುವ ಬಗ್ಗೆ ಸಂಬಂಧಿಸಿದ ಪ್ರಾಧಿಕಾರದಿಂದ ಯಾವುದೇ ಪೂರ್ವಾನುಮತಿ ಪಡೆಯದೇ ಸಾರ್ವಜನಿಕರಿಗೆ ಪ್ರದರ್ಶಿತವಾಗುವಂತೆ ಫ್ಲೆಕ್ಸ್‌ ಗಳನ್ನು ಅಳವಡಿಸಿದ್ದು, ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಪಕ್ಷದ ಸಂಭಾವ್ಯ ಅಭ್ಯರ್ಥಿ ಪ್ರಸಾದ್‌ರಾಜ್‌ ಕಾಂಚನ್‌ ಹಾಗೂ ಅಧ್ಯಕ್ಷರು, ಬ್ಲಾಕ್‌ ಕಾಂಗ್ರೆಸ್‌ ಸಮಿತಿ, ಉಡುಪಿ-ಬ್ರಹ್ಮಾವರ ರವರು ಚಾಲ್ತಿಯಲ್ಲಿರುವ ಮಾದರಿ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿರುವುದಾಗಿದೆ.” ಎಂದು ಉಲ್ಲೇಖಿಸಲಾಗಿದೆ.

ಇದನ್ನೂ ಓದಿ : Bommai temple run : ಧರ್ಮಸ್ಥಳ ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಹಲವು ದೇಗುಲಗಳಿಗೆ ಸಿಎಂ ಬೊಮ್ಮಾಯಿ ಭೇಟಿ

ಈ ಹಿನ್ನಲೆಯಲ್ಲಿ ಈ ಬಗ್ಗೆ ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಸಾದ್‌ ಕಾಂಚನ್‌ ವಿರುದ್ದ ನೀತಿ ಸಂಹಿತೆ ಉಲ್ಲಂಘನೆಯಡಿಯಲ್ಲಿ ಪ್ರಕರಣ ದಾಖಲಾಗಿದೆ.

Violation of Code of Conduct: Alleged Violation of Election Code of Conduct: Complaint filed against Congress candidate Prasad Kanchan

Comments are closed.