Weather Report: ಕರಾವಳಿಯಲ್ಲಿ ಮುಂದುವರಿದ ಮಳೆರಾಯ: ದಕ್ಷಿಣ ರಾಜ್ಯಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: (Weather Report) ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುತ್ತಿದ್ದು, ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಸೇರಿದಂತೆ ಇಂದು ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕಳೆದ ಎರಡು ದಿನಗಳಿಂದ ಮಳೆ(Weather Report) ಕೊಂಚ ಕಡಿಮೆಯಾಗಿದ್ದು, ಮೋಡ ಕವಿದ ವಾತಾವರಣ ಮುಂದುವರೆದಿದೆ. ಇಂದು ಸಿಲಿಕಾನ್ ಸಿಟಿಯಲ್ಲಿ ತುಂತುರು ಮಳೆ ಸುರಿಯುವ ನಿರೀಕ್ಷೆಯಿದೆ. ಕರ್ನಾಟಕದ ಉತ್ತರ ಒಳನಾಡು, ಮಲೆನಾಡು, ಕರಾವಳಿಯ ಸುಮಾರು 20 ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಕರಾವಳಿ ಸೇರಿ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಸ್ವಲ್ಪ ಪ್ರಮಾಣದ ಮಳೆಯಾಗಲಿದ್ದು, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕದ ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕರ್ನಾಟಕದ ದಕ್ಷಿಣ ಒಳನಾಡಿನ ಕೊಡಗು, ಚಾಮರಾಜನಗರ, ಮೈಸೂರು, ಕೋಲಾರ, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕಾಗಿದ್ದು, ವ್ಯಾಪಕ ಮಳೆಯಾಗಲಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕರಾವಳಿ ಮಲೆನಾಡು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಮೈಸೂರು, ಮಂಡ್ಯ, ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ನಿರಂತರ ಮಳೆಯಾಗಲಿದ್ದು, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಬಹಳಷ್ಟು ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ : Karnataka rains: ರಾಜ್ಯದಲ್ಲಿ ಮುಂದುವರಿದ ಮಳೆ: ತಮಿಳುನಾಡಿನ ಶಾಲೆಗಳಿಗೆ ಇಂದು ರಜೆ ಘೋಷಣೆ

ಇದನ್ನೂ ಓದಿ : Paddy buying centre: ಭತ್ತ ಖರೀದಿ ಕೇಂದ್ರ ಆರಂಭ: ಜಿಲ್ಲಾಧಿಕಾರಿ ಕೂರ್ಮರಾವ್‌ ಎಂ

ಇಂದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದ್ದು, ಕೇರಳ, ತಮಿಳುನಾಡು, ಲಕ್ಷದ್ವೀಪ ಮತ್ತು ಅರುಣಾಚಲ ಪ್ರದೇಶದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣದ ರಾಜ್ಯಗಳಾದ ತಮಿಳುನಾಡು, ಕೇರಳ, ಪುದುಚೇರಿ ಮತ್ತು ಆಂಧ್ರಪ್ರದೇಶಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದ್ದು, ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ನವೆಂಬರ್ 20ರಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುಂಚಿತವಾಗಿ ತಿಳಿಸಿದೆ.

(Weather Report) Due to depression in the Bay of Bengal, most of the districts of Karnataka are receiving moderate rains, the Meteorological Department said that there will be thundershowers today including Dakshina Kannada, Udupi, Uttara Kannada, Dharwad, Gadag, Haveri, Koppal, Raichur, Bangalore Rural, Bangalore City.

Comments are closed.