Weather update: ಕರಾವಳಿಯಲ್ಲಿ ತಾಪಮಾನ ಹೆಚ್ಚಳ : ಮಂಗಳೂರಲ್ಲಿ ಬೀಸಿದ ಬಿಸಿಗಾಳಿ

ಮಂಗಳೂರು: (Weather update) ಮಳೆಗಾಲ, ಚಳಿಗಾಲ ಮುಗಿದು ಇದೀಗ ಬೇಸಿಗೆ ಕಾಲ ಆರಂಭವಾಗಿದೆ. ಅರಬ್ಬೀ ಸಮುದ್ರದ ಮೇಲೆ ಆಂಟಿಸೈಕ್ಲೋನ್‌ ಗಾಳಿ ಬೀಸಿದ ಪರಿಣಾಮ ಕರಾವಳಿ ಪ್ರದೇಶದಾದ್ಯಂತ ಬಿಸಿ ಗಾಳಿ ಬೀಸಿದೆ. ಮಾರ್ಚ್‌- ಮೇ ತಿಂಗಳಲ್ಲಿ ಮಧ್ಯ ಹಾಗೂ ವಾಯುವ್ಯ ಭಾರತದ ಹಲವು ಪ್ರದೇಶದಲ್ಲಿ ಬಿಸಿಗಾಳಿ ಹೆಚ್ಚಿರುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಇದರ ಬೆನ್ನಲ್ಲೇ ಕರಾವಳಿಯ ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದಲ್ಲಿ ಬಿಸಿಗಾಳಿ ಬೀಸಿದೆ.

ದೇಶದಲ್ಲಿ ಇದೇ ಮೊದಲ ಬಾರಿಗೆ ಬೇಸಿಗೆಕಾಲದಲ್ಲಿ ಬೀಸಿದ ಬಿಸಿಗಾಳಿಯಾಗಿದೆ. ದಕ್ಷಿಣ ಕರಾವಳಿ ಪ್ರದೇಶಗಳಲ್ಲಿ ಬಿಸಿ ಗಾಳಿ ಅಪರೂಪವಾಗಿದ್ದು, ಈ ಬಾರಿ ಕರಾವಳಿ ಕರ್ನಾಟಕದಲ್ಲಿ ಹೆಚ್ಚಿನ ತಾಪಮಾನ ದಾಖಲಾಗಿದೆ. ಆಂಟಿಸೈಕ್ಲೋನ್‌ ನಿಂದಾಗಿ ಕರಾವಳಿಯಲ್ಲಿ ಬೆಚ್ಚಗಿನ ವಾತಾವರಣವಿರುತ್ತದೆ. ಆದರೆ ಇದೀಗ ಬೆಚ್ಚಗಿನ ವಾತಾವರಣ ಕಡಿಮೆಯಾಗಿದ್ದು, ತಾಪಮಾನ ಮತ್ತೆ ಕುಸಿಯಲು ಆರಂಭಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಇಂದಿನಿಂದ ರಾಜ್ಯದ ಕರಾವಳಿ ಪ್ರದೇಶದಲ್ಲಿ ಬಿಸಿ ಗಾಳಿ ಕಡಿಮೆಯಾಗುವ ನಿರೀಕ್ಷೆಯಿದ್ದು, ಪಶ್ಚಿಮ ಕರಾವಳಿಯ ಪ್ರದೇಶಗಳಲ್ಲಿ ಮಾರ್ಚ್‌ ನಲ್ಲಿ ಬಿಸಿ ಗಾಳಿ ಬೀಸುತ್ತದೆ. ಹಾಗೂ ಏಪ್ರಿಲ್‌ ಅಂತ್ಯದಲ್ಲಿ ಮೇ ಪ್ರಾರಂಭದಲ್ಲಿ ಪೂರ್ವ ಕರಾವಳಿಯಲ್ಲು ಬಿಸಿ ಗಾಳಿ ಬೀಸುವ ಸಾಧ್ಯತೆಯಿದೆ. ಗುಜರಾತ್, ಮಹಾರಾಷ್ಟ್ರ, ವಿದರ್ಭ, ಛತ್ತೀಸ್‌ಗಢ, ಒಡಿಶಾ, ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳದ ಹಲವು ಪ್ರದೇಶಗಳಲ್ಲಿ ಗರಿಷ್ಠ ತಾಪಮಾನವು 35-38 ಡಿಗ್ರಿ ಸೆಲ್ಸಿಯಸ್​ ಇರುತ್ತದೆ.

ರಾಜಸ್ಥಾನ, ಮಧ್ಯಪ್ರದೇಶ ಮತ್ತು ಬಿಹಾರದ ರಾಜ್ಯಗಳಲ್ಲಿ 31-35 ಡಿಗ್ರಿ ಸೆಲ್ಸಿಯಸ್​, ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಉತ್ತರ ಪ್ರದೇಶ ಮತ್ತು ಈಶಾನ್ಯ ರಾಜ್ಯಗಳಲ್ಲಿ 28-31 ಡಿಗ್ರಿ ಸೆಲ್ಸಿಯಸ್​ ತಾಪಮಾನ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಬ್ಯೂರೋ ತಿಳಿಸಿದೆ. ಮಾ.5 ರಂದು ಗೋವಾದಲ್ಲಿ ಅತಿ ಹೆಚ್ಚಿನ 37.1 ಡಿಗ್ರಿ ಸೆಲ್ಸಿಯಸ್​ ತಾಪಮಾನ ದಾಖಲಾಗಿದ್ದು, ಸಾಮಾನ್ಯ ತಾಪಮಾನಕ್ಕಿಂತ 5 ಡಿಗ್ರಿ ಸೆಲ್ಸಿಯಸ್​ ಹೆಚ್ಚಾಗಿದೆ. ಇನ್ನು ಮುಂಬೈನಲ್ಲಿ 38.1 ಡಿಗ್ರಿ ಸೆಲ್ಸಿಯಸ್​, ಹೊನ್ನಾವರದಲ್ಲಿ 37.3 ಡಿಗ್ರಿ ಸೆಲ್ಸಿಯಸ್​, ಕನ್ನುರ್​​ನಲ್ಲಿ 37.6 ಡಿಗ್ರಿ ಸೆಲ್ಸಿಯಸ್​ ತಾಪಮಾನ ದಾಖಲಾಗಿದೆ.

ಇದನ್ನೂ ಓದಿ : ಉಡುಪಿ ಜಿಲ್ಲೆಯ ಗುಪ್ತ ರತ್ನ ಶ್ರೀ ಕಲ್ಲುಗಣಪತಿ

ವಾಯುವ್ಯ, ಪೂರ್ವ ಮತ್ತು ಈಶಾನ್ಯ ಭಾರತದ ಭಾಗಗಳಲ್ಲಿ, ಪಶ್ಚಿಮ ಕರಾವಳಿಯಲ್ಲಿ ಮತ್ತು ದೇಶದ ಉಳಿದ ಭಾಗಗಳಲ್ಲಿ ಸಾಮಾನ್ಯ ತಾಪಮಾನಕ್ಕಿಂತ 2-4 ಡಿಗ್ರಿ ಸೆಲ್ಸಿಯಸ್​ ಹೆಚ್ಚಾಗುವ ಸಾಧ್ಯತೆ ಇದೆ. ಫೆಬ್ರವರಿ ಮಧ್ಯದಿಂದಲೇ ದೇಶದ ಕೆಲವು ಭಾಗಗಳಲ್ಲಿ, ವಿಶೇಷವಾಗಿ ಪಶ್ಚಿಮ ಕರಾವಳಿಯ ರಾಜ್ಯಗಳಲ್ಲಿ ತಾಪಮಾನದಲ್ಲಿ ಏರಿಕೆ ಕಂಡಿದ್ದು, ಗುಜರಾತ್, ಮಹಾರಾಷ್ಟ್ರ, ಗೋವಾ ಮತ್ತು ಕರ್ನಾಟಕದ ಭಾಗಗಳಲ್ಲಿ ಸಾಮಾನ್ಯಕ್ಕಿಂತ 5-10 ಡಿಗ್ರಿ ಸೆಲ್ಸಿಯಸ್ ಹೆಚ್ಚು ತಾಪಮಾನ ದಾಖಲಾಗಿತ್ತು. ಇನ್ನೂ ಮಾರ್ಚ್​ನಿಂದ ಜೂನ್​ ತಿಂಗಳವರೆಗೂ ವಾಯುವ್ಯ ಭಾರತ, ಮಧ್ಯ, ಪೂರ್ವ ಮತ್ತು ಉತ್ತರದ ಬಯಲು ಪ್ರದೇಶಗಳಲ್ಲಿ ಸಾಮಾನ್ಯವಾಗಿ ಬಿಸಿ ಗಾಳಿ ಬೀಸುವ ಸಾಧ್ಯತೆ ಇದೆ.

Weather update: Increase in temperature on the coast: Hot wind blew in Mangalore

Comments are closed.