ಕೋಟ : ಮಹಿಳಾ ಪ್ರಯಾಣಿಕರೊಬ್ಬರು ಬ್ಯಾಗ್ ನಲ್ಲಿ ಇರಿಸಿದ್ದ ಸುಮಾರು 20 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ನಡೆದಿರುವ ಘಟನೆ ಗೋವಾದಿಂದ ಪುತ್ತೂರಿನ ಕಡೆಗೆ ತೆರಳುತ್ತಿದ್ದ ಬಸ್ಸಿನಲ್ಲಿ (Goa Puttur KSRTC bus) ನಡೆದಿದೆ. ಈ ಕುರಿತು ಕೋಟ ಪೊಲೀಸ್ ಠಾಣೆಗೆ ಮಹಿಳೆಗೆ ದೂರು ನೀಡಿದ್ದಾರೆ.
ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಐರೋಡಿ ಗ್ರಾಮದ ನಿವಾಸಿಯಾಗಿರುವ ಸಂಗೀತಾ ಭಟ್ ಎಂಬವರು ಡಿಸೆಂಬರ್ 24 ರಂದು ಬೆಳಗ್ಗೆ 7.30 ರ ಸುಮಾರಿಗೆ ಗೋವಾದ ಪಣಜಿಯಿಂದ ಪುತ್ತೂರಿಗೆ ತೆರಳುತ್ತಿದ್ದ ಕೆಎಸ್ಆರ್ ಟಿಸಿ ಬಸ್ಸಿನಲ್ಲಿ ಪ್ರಯಾಣ ಬೆಳೆಸಿದ್ದರು. ತಮ್ಮ ಟ್ರಾಲಿ ಬ್ಯಾಗಿನಲ್ಲಿ ಬಟ್ಟೆ ಹಾಗೂ ಚಿನ್ನಾಭರಣವನ್ನು ಬಿಟ್ಟು ಬ್ಯಾಗ್ ಗೆ ಬೀಗ ಹಾಕಿದ್ದರು. ಆದರೆ ತಮ್ಮ ಪ್ರಯಾಣ ಮುಗಿಸಿ ಮಧ್ಯಾಹ್ನದ ವೇಳೆಯಲ್ಲಿ ಅವರು ಮಾಬುಕಳದಲ್ಲಿ ಇಳಿದಿದ್ದರು.
ಮರುದಿನ ತಮ್ಮ ಟ್ರಾಲಿ ಬ್ಯಾಗ್ ಪರಿಶೀಲನೆ ನಡೆಸಿದ ವೇಳೆಯಲ್ಲಿ ಅದರಲ್ಲಿ ಸುಮಾರು 18 ರಿಂದ 20 ಲಕ್ಷ ಮೌಲ್ಯದ ಚಿನ್ನಾಭರಣ ಕಳವಾಗಿರುವುದು ಗಮನಕ್ಕೆ ಬಂದಿದೆ. ಬಸ್ಸಿನಲ್ಲಿ ತಮ್ಮ ಸೀಟ್ ನ ಹಿಂಬದಿಯಲ್ಲಿ ಕುಳಿತಿದ್ದ ಇಬ್ಬರು ಹಿಂದಿ ಮಾತನಾಡುವ ವ್ಯಕ್ತಿಗಳ ಬಗ್ಗೆ ಅನುಮಾನ ಇರುವುದಾಗಿ ಸಂಗೀತಾ ಭಟ್ ಅವರು ಕೋಟ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲು ಮಾಡಿಕೊಂಡಿರುವ ಕೋಟ ಠಾಣೆಯ ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ.
ಇದನ್ನೂ ಓದಿ : Student hanging in hostel: ಹಾಸ್ಟೆಲ್ ಕೊಠಡಿಯಲ್ಲಿ ಕೈ ಕಟ್ಟಿ, ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿಯ ಶವ ಪತ್ತೆ
ಇದನ್ನೂ ಓದಿ : Man Dead in Gym: ಜಿಮ್ ನಲ್ಲಿ ಕಸರತ್ತು ಮಾಡುತ್ತಿರುವಾಗಲೇ ಕುಸಿದು ಬಿದ್ದು ವ್ಯಕ್ತಿ ಸಾವು
ಬ್ರಹ್ಮಾವರದಲ್ಲಿ ಅಪಘಾತ : ಇಬ್ಬರು ವಿದ್ಯಾರ್ಥಿಗಳ ಸಾವು
ಸಂಧ್ಯಾ ಕಾಲೇಜು ಮುಗಿಸಿ ಬೈಕಿನಲ್ಲಿ ವಾಪಾಸಾಗುತ್ತಿದ್ದ ವೇಳೆಯಲ್ಲಿ ಲಾರಿಯಡಿ ಸಿಲುಕಿ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪದ ದೂಪದಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಕೋಟದ ಸಮಿತ್ ಕುಮಾರ್ ಮತ್ತು ವಾಗೀಶ್ ಕೆದ್ಲಾಯ ಎಂಬವರೇ ಮೃತ ವಿದ್ಯಾರ್ಥಿಗಳು.
ಶಿವಮೊಗ್ಗ ಮೂಲದ ಸಮಿತ್ ಕುಮಾರ್ ಸಾಲಿಗ್ರಾಮದಲ್ಲಿ ವಾಸವಾಗಿದ್ದು, ಸಾಲಿಗ್ರಾಮ ಚಿತ್ರಪಾಡಿಯ ನಿವಾಸಿಯಾಗಿರುವ ವಾಗೀಶ್ ಕೆದ್ಲಾಯ ಅವರ ಜೊತೆಯಲ್ಲಿ ಉಡುಪಿಯ ಖಾಸಗಿ ಸಂಜೆ ಕಾಲೇಜಿನಲ್ಲಿ ಬಿಕಾಂ ವ್ಯಾಸಂಗ ಮಾಡುತ್ತಿದ್ದರು.
ಸಂಜೆ ೭.೩೦ರ ಸುಮಾರಿಗೆ ಕಾಲೇಜು ಮುಗಿಸಿ ವಾಪಾಸಾಗುತ್ತಿದ್ದ ವೇಳೆಯಲ್ಲಿ ಓವರ್ ಟೇಕ್ ಮಾಡುವ ಭರದಲ್ಲಿ ನಿಯಂತ್ರಣ ತಪ್ಪಿ ಬೈಕ್ ಟ್ರಕ್ ಗೆ ಢಿಕ್ಕಿ ಹೊಡೆದಿದೆ. ಈ ಹಿನ್ನೆಲೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಈ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : Inhuman incident in Bangalore: ಬೆಂಗಳೂರಿನಲ್ಲಿ ಅಮಾನವೀಯ ಘಟನೆ : ವ್ಯಕ್ತಿಯನ್ನು ರಸ್ತೆಯಲ್ಲಿ ಎಳೆದೊಯ್ದ ಬೈಕ್ ಸವಾರ
Woman Passengers gold jewelery worth 20 lakhs stolen in Goa Puttur KSRTC bus