Yellow alert : ಮುಂದಿನ 4 ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ : ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆಗಾಗಿ ಕಾಯುತ್ತಿದ್ದ ಸಮಯದಲ್ಲಿ, ವರುಣನ ಆಗಮನದಲ್ಲಿ ಕೊಂಚ (Yellow alert) ತಡವಾಗಿತ್ತು. ಆದರೆ ಕಳೆದ ವಾರದಿಂದ ಸತತವಾಗಿ ಸುರಿದ ಮಳೆಗೆ ನೆರೆ ಪ್ರವಾಹದಿಂದ ಜನ ತತ್ತರಿಸಿ ಹೋಗಿದ್ದಾರೆ. ಮಳೆಯ ಆಗಮನದಿಂದ ರೈತರು ಸಂತಸಗೊಂಡಿದ್ದು, ಕೆಲವೊಂದು ಕಡೆ ಮಳೆಯಿಂದಾಗಿ ಜನರ ಜೀವನ ಅಸ್ಥವ್ಯಸ್ಥವಾಗಿದೆ. ಇನ್ನು ರಾಜ್ಯದ ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಹಲವು ಪ್ರದೇಶಗಳಲ್ಲಿ ಮುಂದಿನ 4 ದಿನಗಳವರೆಗೂ ಭಾರಿ ಮಳೆಯಾಲಿದ್ದು, ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹವಾಮಾನ ಇಲಾಖೆ ಪ್ರಕಾರ, ದಕ್ಷಿಣಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡುಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಹೀಗಾಗಿ ಅತೀಯಾದ ಮಳೆಯಿಂದ ಉಂಟಾಗುವ ತೊಂದರೆಗಳ ಬಗೆ ಎಚ್ಚರಿಕೆ ಇರುವಂತೆ ಮುನ್ಸೂಚನೆ ನೀಡಲಾಗಿದೆ. ಈಗಾಗಲೇ ವರುಣನ ಆರ್ಭಟದಿಂದಾಗಿ ನೆರೆ ಪ್ರವಾಹದಿಂದ ಹಳ್ಳ ಕೊಳ್ಳ, ನದಿಗಳು ತುಂಬಿ ಪ್ರಾಣ ಹಾನಿ ಕೂಡ ಸಂಭವಿಸಿದೆ.

ಇದನ್ನೂ ಓದಿ : State Anganwadi Employees Association : ಬ್ರಹ್ಮಾವರ : ವಿವಿಧ ಬೇಡಿಕೆ ನಿಮಿತ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಂದ ಪ್ರತಿಭಟನೆ

ಇದನ್ನೂ ಓದಿ : Lakshmi Hebbalkar : ನೆರೆ ಸಂತ್ರಸ್ತರಿಗೆ ತಕ್ಷಣದಲ್ಲಿ ರಕ್ಷಣೆ ಒದಗಿಸಿ ಅಗತ್ಯ ನೆರವನ್ನು ಕಲ್ಪಿಸಿ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಕಳೆದೆರಡು ದಿನಗಳಿಂದ ಉಡುಪಿ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಮಳೆರಾಯ ಕೊಂಚ ಬಿಡುವು ಕೊಟ್ಟಿದೆ. ಆದರೆ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯ ಪ್ರಕಾರ ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಸೇರಿದಂತೆ ಕರಾವಳಿ ಹಾಗೂ ಕೊಡಗು ಜಿಲ್ಲೆಯಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ನಿನ್ನೆ ಹಗಲಿನ ವೇಳೆಯಲ್ಲಿ ಮಳೆ ಸ್ವಲ್ಪ ಕಡಿಮೆಯಾಗಿದ್ದು, ರಾತ್ರಿ ಚೆನ್ನಾಗಿ ಮಳೆ ಆಗಿರುತ್ತದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಪ್ರಮಾಣದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ಜನರು ಎಚ್ಚರಿಕೆಯಿರುವಂತೆ ಸೂಚಿಸಲಾಗಿದೆ.

Yellow alert: Heavy rain is likely in coastal districts for the next 4 days: Yellow alert is announced

Comments are closed.