ಭಾನುವಾರ, ಏಪ್ರಿಲ್ 27, 2025
HomeCoastal NewsYellow alert : ಉಡುಪಿ, ದಕ ಸೇರಿ ರಾಜ್ಯದ ಈ ಜಿಲ್ಲೆಗಳಲ್ಲಿ ಜುಲೈ 19ರವರೆಗೂ ಭಾರಿ...

Yellow alert : ಉಡುಪಿ, ದಕ ಸೇರಿ ರಾಜ್ಯದ ಈ ಜಿಲ್ಲೆಗಳಲ್ಲಿ ಜುಲೈ 19ರವರೆಗೂ ಭಾರಿ ಮಳೆ : ಯೆಲ್ಲೋ ಅಲರ್ಟ್‌ ಘೋಷಣೆ

- Advertisement -

ಬೆಂಗಳೂರು : ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಈ ವಾರದ ಆರಂಭದಲ್ಲಿ ಮಳೆ ಕೊಂಚ (Yellow alert ) ಕಡಿಮೆ ಆಗಿದ್ದು, ಕಳೆದ ರಾತ್ರಿಯಿಂದ ಬಿಟ್ಟು ಬಿಡದೇ ಮಳೆಯಾಗಿರುತ್ತದೆ. ಹವಾಮಾನ ಇಲಾಖೆ ಪ್ರಕಾರ, ಕರ್ನಾಟಕ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಜುಲೈ 19ರವರೆಗೂ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ದಾವಣಗೆರೆ ಕೊಡಗು, ಕೋಲಾರ, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ..

ಜುಲೈ ತಿಂಗಳ ಪ್ರಾರಂಭದಿಂದ ಮುಂಗಾರು ಮಳೆ ಚುರುಕುಗೊಂಡಿದ್ದು, ರಾಜ್ಯದ ರೈತರು ತಮ್ಮ ಕೃಷಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆ. ಹಾಗೆಯೇ ಆತಂಕಗೊಂಡಿದ್ದ ರೈತರು ಸರಿಯಾದ ಪ್ರಮಾಣದ ಮಳೆಯಿಂದ ನಿಟ್ಟುಸಿರು ಬಿಟ್ಟಿದ್ದಾರೆ. ಕಳೆದ ವಾರ ಸುರಿದ ಮಳೆಯಿಂದಾಗಿ ರಾಜ್ಯದ ಹೆಚ್ಚಿನ ಜಿಲ್ಲೆಗಳಲ್ಲಿ ಶಾಲಾ ಕಾಲೇಜು ಮಕ್ಕಳಿಗೆ ಕ್ರಮವಾಗಿ ಮೂರು ದಿನ ರಜೆ ಘೋಷಿಸಲಾಗಿತು. ಸತತವಾಗಿ ಸುರಿದ ಮಳೆಯಿಂದ ನದಿ, ಹಳ್ಳ, ಸೇರಿದಂತೆ ಇತ್ಯಾದಿ ಜಲಾಶಯ ತುಂಬಿಕೊಂಡಿದ್ದರಿಂದ ರಾಜ್ಯದಲ್ಲಿ ಜನರ ಜೀವನಕ್ಕೆ ಬೇಕಾದ ಸೌಕರ್ಯಗಳನ್ನು ಒದಗಿಸುವಂತೆ ಜಿಲ್ಲಾಢಳಿತ ಸೂಚನೆ ನೀಡಿದೆ.

ಇದನ್ನೂ ಓದಿ : Yellow alert : ಮುಂದಿನ 4 ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ : ಯೆಲ್ಲೋ ಅಲರ್ಟ್‌ ಘೋಷಣೆ

ಇದನ್ನೂ ಓದಿ : State Anganwadi Employees Association : ಬ್ರಹ್ಮಾವರ : ವಿವಿಧ ಬೇಡಿಕೆ ನಿಮಿತ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಂದ ಪ್ರತಿಭಟನೆ

ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯ ಪ್ರಕಾರ ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಸೇರಿದಂತೆ ಕರಾವಳಿ ಹಾಗೂ ಕೊಡಗು ಜಿಲ್ಲೆಯಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ನಿನ್ನೆ ಹಗಲಿನ ವೇಳೆಯಲ್ಲಿ ಮಳೆ ಸ್ವಲ್ಪ ಕಡಿಮೆಯಾಗಿದ್ದು, ರಾತ್ರಿ ಚೆನ್ನಾಗಿ ಮಳೆ ಆಗಿರುತ್ತದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಪ್ರಮಾಣದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ಜನರು ಎಚ್ಚರಿಕೆಯಿರುವಂತೆ ಸೂಚಿಸಲಾಗಿದೆ.

Yellow alert: Heavy rain till July 19 in these districts of the state including Udupi, Dhaka: Yellow alert announced

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular