School seal down : ಬ್ರಹ್ಮಾವರದಲ್ಲಿ 15 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ : ಬೋರ್ಡ್ ಶಾಲೆ ಸೀಲ್ ಡೌನ್

ಬ್ರಹ್ಮಾವರ : ಕರಾವಳಿ ಭಾಗದಲ್ಲಿ ಕೊರೊನಾ corona ವೈರಸ್ ಸೋಂಕು ಆರ್ಭಟಿಸುತ್ತಿದೆ. ಅದ್ರಲ್ಲೂ ಶಾಲೆ school, ಕಾಲೇಜುಗಳೇ ಕೊರೊನಾ corona ಹಾಟ್ ಸ್ಪಾಟ್ ಆಗಿ ಮಾರ್ಪಡುತ್ತಿದೆ. ಇದೀಗ ಉಡುಪಿ (Udupi ) ಜಿಲ್ಲೆಯ ಬ್ರಹ್ಮಾವರದಲ್ಲಿರುವ (Brahmavar ) ಸರಕಾರಿ ಪ್ರಾಥಮಿಕ ಶಾಲೆಯ 15 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಶಾಲೆಯನ್ನು ಸೀಲ್ ಡೌನ್ (School seal down) ಮಾಡಲಾಗಿದೆ.

ಬ್ರಹ್ಮಾವರದ Brahmavar ಸರಕಾರಿ ಪ್ರಾಥಮಿಕ ಶಾಲೆಯಲ್ಲಿನ school ವಿದ್ಯಾರ್ಥಿಗಳನ್ನು ಕೊರೊನಾ corona ಟೆಸ್ಟ್ ಗೆ ಒಳಪಡಿಸಲಾಗಿತ್ತು. ಈ ಪೈಕಿ 15 ವಿದ್ಯಾರ್ಥಿಗಳಿಗೆ ಕೊರೊನಾ ವೈರಸ್ ಸೋಂಕು ಇರುವುದು ದೃಢಪಟ್ಟಿದೆ. ಕೊರೊನಾ ಸೋಂಕಿತ ವಿದ್ಯಾರ್ಥಿಗಳನ್ನು ಐಸೋಲೇಷನ್ ಗೆ ಒಳಪಡಿಸಲಾಗಿದೆ. ಸೋಂಕಿತ ವಿದ್ಯಾರ್ಥಿಗಳ ಜೊತೆಗೆ ಸಂಪರ್ಕದಲ್ಲಿದ್ದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಕ್ವಾರಂಟೈನ್ ಗೆ ಸೂಚಿಸಲಾಗಿದೆ.

ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಒಂದು ವಾರಗಳ ಕಾಲ ಶಾಲೆಯನ್ನು school ಸೀಲ್ ಡೌನ್ ಮಾಡಲಾಗಿದೆ. ಉಡುಪಿ ಜಿಲ್ಲೆಯಲ್ಲಿ ದಿನೇ ದಿನೇ ಸೋಂಕಿತ ಪ್ರಕರಣಗಳ ಸಂಖ್ಯೆ ಏರಿಕೆ ಕಾಣುತ್ತಿದೆ. ಈ ನಡುವಲ್ಲೇ ಶಾಲಾ school ಮಕ್ಕಳಿಗೆ ಸೋಂಕು ಒಕ್ಕರಿಸಿರುವುದು ಆತಂಕ ಮೂಡಿಸಿದೆ.

ಇದನ್ನೂ ಓದಿ:: ಸಿಎಂ, ಶಿಕ್ಷಣ ಸಚಿವರಿಗೆ ಸ್ಪಷ್ಟತೆಯ ಕೊರತೆ : ಗೊಂದಲದಲ್ಲಿದೆ ರಾಜ್ಯದ ಶಾಲಾ ಭವಿಷ್ಯ

ಉಡುಪಿ ಜಿಲ್ಲೆಯಲ್ಲಿನ ಶಾಲೆಗಳಲ್ಲಿ school ಮಕ್ಕಳಿಗೆ ಕೊರೊನಾ ಟೆಸ್ಟ್ ಮಾಡಿಸಲಾಗುತ್ತಿದೆ. ಆದರೆ ಈ ಕುರಿತು ಪೋಷಕರಿಗೆ ಯಾವುದೇ ಮಾಹಿತಿಯನ್ನೂ ಆರೋಗ್ಯ ಇಲಾಖೆ ನೀಡುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಆರೋಗ್ಯ ಇಲಾಖೆ ವಿದ್ಯಾರ್ಥಿಗಳ ಸ್ವ್ಯಾಬ್ ಪಡೆಯುವ ಮುನ್ನ ಪೋಷಕರಿಗೂ ಕೂಡ ಮಾಹಿತಿಯನ್ನು ಒದಗಿಸುತ್ತಿಲ್ಲ. ಈ ಕುರಿತು ಜಿಲ್ಲಾಡಳಿತ ಕ್ರಮಕೈಗೊಳ್ಳಬೇಕೆಂಬ ಆಗ್ರಹ ಕೇಳಿಬಂದಿದೆ.

ರಾಜ್ಯದಲ್ಲಿ ಕರೋನಾ ಹಾಗೂ ಓಮೈಕ್ರಾನ್ ಪ್ರಕರಣಗಳು ಪ್ರತಿನಿತ್ಯ ಹೆಚ್ಚುತ್ತಲೇ ಇದೆ. ವೀಕೆಂಡ್ ಕರ್ಪ್ಯೂ ಹಾಗೂ ನೈಟ್ ಕರ್ಪ್ಯೂ ಮೂಲಕ ಪರಿಸ್ಥಿತಿ ನಿಯಂತ್ರಣಕ್ಕೆ ಸರ್ಕಸ್ ನಡೆಸಿರುವ ಸರ್ಕಾರ ಮಕ್ಕಳ ವಿಚಾರದಲ್ಲಿ ಮಾತ್ರ ಸ್ಪಷ್ಟ ನಿರ್ಧಾರಕೈಗೊಳ್ಳುವಲ್ಲಿ ಎಡವುತ್ತಿದೆ. ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಐದನ್ನು ದಾಟಿದ್ದರೂ ಇನ್ನೂ ಶಾಲೆಗಳನ್ನು ನಡೆಸಬೇಕಾ ಬೇಡವಾ ಎಂಬುದರ ಬಗ್ಗೆ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳುವಲ್ಲಿ ಶಿಕ್ಷಣ ಸಚಿವರು ( schools future in confusion ) ವಿಫಲವಾಗುತ್ತಿದ್ದು, ಅತ್ಯಂತ ಸೂಕ್ಷ್ಮವಾದ ಮಕ್ಕಳ ವಿಚಾರಕ್ಕೆ ಸಿಎಂ ಕೂಡ ಬೇಜವಾಬ್ದಾರಿಯಿಂದ ವರ್ತಿಸುತ್ತಿರುವುದಕ್ಕೆ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಶಾಲೆಗಳು ಕಾರ್ಯನಿರ್ವಹಿಸುತ್ತಿವೆ. ಬೆಂಗಳೂರಿನಲ್ಲಿ ಜನವರಿ ೧೯ ರವರೆಗೆ ಒಂದರಿಂದ ಒಂಬತ್ತನೆ ತರಗತಿ ಮಕ್ಕಳಿಗೆ ರಜೆ‌ನೀಡಲಾಗಿದೆ. ಆದರೆ ರಾಜ್ಯದಲ್ಲಿ ಹಾಗೂ ಬೆಂಗಳೂರಿನಲ್ಲಿ ಮಕ್ಕಳಲ್ಲಿ ಅದರಲ್ಲೂ ವಿಶೇಷವಾಗಿ ವಸತಿ ಶಾಲೆಯ ಮಕ್ಕಳಲ್ಲಿ ಕೊರೋನಾ ಸೋಂಕಿನ ಪ್ರಕರಣಗಳು ಹೆಚ್ಚುತ್ತಿದ್ದು ನೂರಾರು ಮಕ್ಕಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ : ಕರಾವಳಿಗರು ಮೈ ಮರೆತ್ರೆ ಅಪಾಯ ಫಿಕ್ಸ್‌ : ದ.ಕ., ಉಡುಪಿಗೆ ಕೊರೊನಾ ಜೊತೆ ಓಮಿಕ್ರಾನ್‌ ಕಂಟಕ

ಇದನ್ನೂ ಓದಿ : ಕಾಂಗ್ರೆಸ್ ಗೆ ಪಾದಯಾತ್ರೆ, ಬಿಜೆಪಿಗೆ ವರ್ಕ್ ಶಾಪ್: ಬಡವರಿಗೆ ಮಾತ್ರ ಕೊರೋನಾ ನಿಯಮ ಪ್ರಶ್ನಿಸಿ ಹೈಕೋರ್ಟ್ ಗೆ ದೂರು

(15 students tests corona posiive, school seal down in Brahmavar)

Comments are closed.