Nanjappa Hospital : 23 ನರ್ಸಿಂಗ್‌ ವಿದ್ಯಾರ್ಥಿಗಳಿಗೆ ಕೊರೊನಾ : ನಂಜಪ್ಪ ಆಸ್ಪತ್ರೆ, ಕಾಲೇಜು ಸೀಲ್‌ ಡೌನ್‌

ಶಿವಮೊಗ್ಗ : ಓಮಿಕ್ರಾನ್‌ ಭೀತಿಯ ನಡುವಲ್ಲೇ ರಾಜ್ಯದಲ್ಲಿ ಕೊರೊನಾ ವೈರಸ್‌ ಸೋಂಕಿನ ಪ್ರಮಾಣ ಏರಿಕೆಯಾಗುತ್ತಿದೆ. ಧಾರವಾಡದ ಬೆನ್ನಲ್ಲೇ ಇದೀಗ ಶಿವಮೊಗ್ಗದ ಗಾಡಿಕೊಪ್ಪದ ಬಳಿಯಲ್ಲಿರುವ ನಂಜಪ್ಪ ಲೈಫ್‌ ಕೇರ್‌ ಆಸ್ಪತ್ರೆಯ (Nanjappa Multi-Specialty Hospital) ನರ್ಸಿಂಗ್‌ ಕಾಲೇಜಿನ 23 ನರ್ಸಿಂಗ್‌ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ನಂಜಪ್ಪ ನರ್ಸಿಂಗ್‌ ಕಾಲೇಜು ( Nanjappa Nursing College) ಹಾಗೂ ನಂಜಪ್ಪ ಆಸ್ಪತ್ರೆ (Nanjappa Hospital) ಯನ್ನು ಸೀಲ್‌ಡೌನ್‌ ಮಾಡಲಾಗಿದೆ.

ರಾಜ್ಯದಲ್ಲಿ ವಸತಿ ಶಾಲೆ, ವೈದ್ಯಕೀಯ ಕಾಲೇಜು ಹಾಗೂ ನರ್ಸಿಂಗ್‌ ವಿದ್ಯಾರ್ಥಿಗಳಲ್ಲಿಯೇ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ನಂಜಪ್ಪ ಆಸ್ಪತ್ರೆಯಲ್ಲಿನ ನರ್ಸಿಂಗ್‌ ವಿದ್ಯಾಭ್ಯಾಸವನ್ನು ಪಡೆಯುತ್ತಿದ್ದ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕಿನ ಲಕ್ಷಣ ಕಂಡು ಬಂದಿತ್ತು. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳನ್ನು ತಪಾಸಣೆಗೆ ಒಳಪಡಿಸಲಾಗುತ್ತಿತ್ತು. ಈ ಪೈಕಿ ಸುಮಾರು 23 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಈ ವಿದ್ಯಾರ್ಥಿಗಳು ಇತ್ತೀಚಿಗಷ್ಟೇ ಕೇರಳದಿಂದ ವಾಪಾಸಾಗಿದ್ದರು.

ಈ ಹಿನ್ನೆಲೆಯಲ್ಲಿ ಎಲ್ಲಾ ವಿದ್ಯಾರ್ಥಿಗಳನ್ನು ಕೊರೊನಾ ಟೆಸ್ಟ್‌ಗೆ ಒಳಪಡಿಸಲು ಆರೋಗ್ಯ ಇಲಾಖೆ ಸಿದ್ದತೆ ಮಾಡಿಕೊಂಡಿದೆ. ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಕಂಡು ಬಂದಿರುವುದು ಆತಂಕಕ್ಕೆ ಕಾರಣವಾಗಿದೆ. ಅಲ್ಲದೇ ಸಿಬ್ಬಂದಿಗಳನ್ನೂ ಕೂಡ ತಪಾಸಣೆಗೆ ಒಳಪಡಿಸುವ ಸಾಧ್ಯತೆಯಿದೆ. ಕೇರಳದಿಂದ ಬಂದಿರುವ ವಿದ್ಯಾರ್ಥಿಗಳಲ್ಲಿಯೇ ಹೆಚ್ಚಾಗಿ ಕೊರೊನಾ ಸೋಂಕು ಪತ್ತೆಯಾಗುತ್ತಿದೆ. ಕೊರೊನಾ ಸೋಂಕಿತ ವಿದ್ಯಾರ್ಥಿಗಳನ್ನು ಐಸೋಲೇಷನ್‌ ಹಾಗೂ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ. ಅಲ್ಲದೇ ನಂಜಪ್ಪ ಆಸ್ಪತ್ರೆಯನ್ನು ಸೀಲ್‌ಡೌನ್‌ ಮಾಡಲಾಗಿದೆ ಎಂದು ತಿಳಿದು ಬಂದಿದೆ.

SDM ಕಾಲೇಜಿನಲ್ಲಿ 306 ವಿದ್ಯಾರ್ಥಿಗಳಿಗೆ ಸೋಂಕು ದೃಢ

ಧಾರವಾಡದ ಎಸ್‌ಡಿಎಂ (SDM) ಕಾಲೇಜಿನಲ್ಲಿ ಕೊರೊನಾ ಸ್ಪೋಟ ಸಂಭವಿಸಿದೆ. ಕಾಲೇಜಿನಲ್ಲಿ 306 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕಾಲೇಜಿನಲ್ಲಿ ಆರಂಭದಲ್ಲಿ ಇಬ್ಬರಿಗೆ ಕೊರೊನಾ ವೈರಸ್‌ ಸೋಂಕು ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳನ್ನು ಕೊರೊನಾ ಟೆಸ್ಟ್‌ಗೆ ಒಳಪಡಿಸಿದಾಗ 66 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು ನಂತರದಲ್ಲಿ ಒಟ್ಟಿ ಸೋಂಕಿತರ ಸಂಖ್ಯೆ 306ಕ್ಕೆ ಏರಿಕೆಯಾಗಿದೆ. ಕೊರೊನಾ ಸ್ಪೋಟ ಸಂಭವಿಸಿದ ಬೆನ್ನಲ್ಲೇ ಕಾಲೇಜು, ಹಾಸ್ಟೆಲ್‌ಗಳನ್ನು ಸೀಲ್‌ಡೌನ್‌ ಮಾಡಲಾಗಿದೆ. ಅಲ್ಲದೇ ಓಪಿಡಿಯನ್ನು ಬಂದ್‌ ಮಾಡುವಂತೆ ಜಿಲ್ಲಾಧಿಕಾರಿ ನಿತೇಶ್‌ ಪಾಟೀಲ್‌ ಆದೇಶ ಹೊರಡಿಸಿದ್ದಾರೆ. ಕೊರೊನಾ ಸೋಂಕಿತ ವಿದ್ಯಾರ್ಥಿಗಳ ಜೊತೆಗೆ ಸಂಪರ್ಕ ಹೊಂದಿರುವವರ ಮಾಹಿತಿಯನ್ನು ಕಲೆ ಹಾಕುವ ಕಾರ್ಯವನ್ನೂ ಮಾಡಲಾಗುತ್ತಿದೆ. ಈಗಾಗಲೇ ಆರೋಗ್ಯ ಇಲಾಖೆಯ ಅಧಿಕಾರಿಗಳು ಕಾಲೇಜಿಗೆ ಭೇಟಿಯನ್ನು ನೀಡಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದಾರೆ.

ಇಷ್ಟೇ ಅಲ್ಲದೇ ಹಾಸನದಲ್ಲಿನ ವಸತಿ ಶಾಲೆಯಲ್ಲಿಯೂ ಕೊರೊನಾ ಸೋಂಕು ವ್ಯಾಪಿಸಿದೆ. ರಾಜ್ಯದಲ್ಲಿ ಈ ಬಾರಿ ಪೂರ್ಣ ಪ್ರಮಾಣದಲ್ಲಿ ಶೈಕ್ಷಣಿಕ ಚಟುವಟಿಕೆ ಆರಂಭವಾದ ಬೆನ್ನಲ್ಲೇ ಇದೀಗ ಕೊರೊನಾ ವೈರಸ್‌ ಸೋಂಕಿನ ಪ್ರಮಾಣ ಏರಿಕೆಯನ್ನು ಕಾಣುತ್ತಿದೆ. ಅದ್ರಲ್ಲೂ ವಸತಿ ಶಾಲೆಗಳಲ್ಲಿ ಕೊರೊನಾ ಸೋಂಕು ವ್ಯಾಪಿಸುತ್ತಿದೆ. ಇನ್ನೊಂದೆಡೆಯಲ್ಲಿ ಮಕ್ಕಳು ಜ್ವರದಿಂದ ಬಳಲುತ್ತಿರುವ ಪ್ರಕರಣಗಳ ಸಂಖ್ಯೆಯೂ ಏರಿಕೆಯನ್ನು ಕಾಣುತ್ತಿದೆ. ಕಳೆದ ಕೆಲವು ತಿಂಗಳಿನಿಂದ ಸಂಪೂರ್ಣವಾಗಿ ಹತೋಟಿಗೆ ಬಂದಿದ್ದ ಕೊರೊನಾ ಸೋಂಕು ಇದೀಗ ಮೂರನೇ ಅಲೆಯ ಆತಂಕವನ್ನು ತಂದೊಡ್ಡಿದೆ. ಒಂದೊಮ್ಮೆ ಕೊರೊನಾ ವೈರಸ್‌ ಸೋಂಕಿನ ಪ್ರಮಾಣ ಏರಿಕೆಯನ್ನು ಕಂಡ್ರೆ ಈ ಬಾರಿಯೂ ಶೈಕ್ಷಣಿಕ ಚಟುವಟಿಕೆ ಡೋಲಾಯಮಾನವಾಗುವ ಸಾಧ್ಯತೆಯಿದೆ.

ಇದನ್ನೂ ಓದಿ : Omicron Vs Delta : ಡೆಲ್ಟಾ ಫ್ಲಸ್‌ಗಿಂತ 6 ಪಟ್ಟು ಹೆಚ್ಚು ಅಪಾಯಕಾರಿಯಂತೆ ಓಮಿಕ್ರಾನ್‌

ಇದನ್ನೂ ಓದಿ : Covid-19 Updates : ಭಾರತದಲ್ಲಿಂದು 9,765 ಕೊರೊನಾ ಸೋಂಕು, 477 ಮಂದಿ ಬಲಿ

( 23 Nursing Students tested Corona Positive, Shivamogga Nanjappa Hospital seal down)

Comments are closed.