ಶಿವಮೊಗ್ಗ : ರಾಜ್ಯದಲ್ಲಿ ಕೊರೊನಾ ಆರ್ಭಟ ಜೋರಾಗಿದೆ. ಅದ್ರಲ್ಲೂ ಕಾಲೇಜುಗಳಲ್ಲಿ ಕೊರೊನಾ ಹಾಟ್‌ಸ್ಪಾಟ್ ಆಗಿ ಮಾರ್ಪಟ್ಟಿದೆ. ಇದೀಗ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ 24 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು (24 Nursing Students Corona) ದೃಢಪಟ್ಟಿದೆ. ಈ ಹಿನ್ನೆಲೆಯಲ್ಲೀಗ ಕಾಲೇಜನ್ನು ಸೀಲ್‌ಡೌನ್ ಮಾಡಲಾಗಿದೆ.
ಭದ್ರಾವತಿಯ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಶಿವಮೊಗ್ಗಕ್ಕೆ ಬಂದಿದ್ದರು. ಪರೀಕ್ಷೆ ಬರೆದು ವಾಪಾಸಾದ ನಂತರದಲ್ಲಿ ವಿದ್ಯಾರ್ಥಿಗಳಲ್ಲಿ ಜ್ವರ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳನ್ನು ಕೊರೊನಾ ಟೆಸ್ಟ್‌ಗೆ ಒಳಪಡಿಸಿದಾಗ ವಿದ್ಯಾರ್ಥಿಗಳಲ್ಲಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳನ್ನು ಕೊರೊನಾ ಟೆಸ್ಟ್‌ಗೆ ಒಳಪಡಿಸಲಾಗಿತ್ತು. ಇದೀಗ ಕಾಲೇಜಿನ ೨೪ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.
ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಬೆನ್ನಲ್ಲೇ ಕಾಲೇಜು ಹಾಗೂ ವಿದ್ಯಾರ್ಥಿಗಳ ಹಾಸ್ಟೆಲ್‌ನ್ನು ಸೀಲ್‌ಡೌನ್ ಮಾಡಲಾಗಿದೆ ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ. ಇದೀಗ ಕಾಲೇಜಿನ ಸಿಬ್ಬಂದಿಗಳನ್ನೂ ಕೂಡ ಕೊರೊನಾ ಟೆಸ್ಟ್‌ಗೆ ಒಳಪಡಿಸಲಾಗಿದ್ದು, ವರದಿ ಇನ್ನಷ್ಟೇ ಬರಬೇಕಾಗಿದೆ. ಅಲ್ಲದೇ ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ನರ್ಸಿಂಗ್ ಕಾಲೇಜನ್ನು ಸೀಲ್‌ಡೌನ್ ಮಾಡಲಾಗಿದ್ದು, ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಕೊರೊನಾ ಸೋಂಕಿತ ವಿದ್ಯಾರ್ಥಿಗಳನ್ನು ಐಸೋಲೇಷನ್‌ಗೆ ಒಳಪಡಿಸ ಲಾಗಿದ್ದು, ಕೊರೊನಾ ಸೋಂಕಿತರ ಜೊತೆ ಸಂಪರ್ಕ ಹೊಂದಿರುವ ವಿದ್ಯಾರ್ಥಿಗಳ ಮೇಲೆ ನಿಗಾ ಇರಿಸಲಾಗಿದೆ.
ಕೇರಳ ವಿದ್ಯಾರ್ಥಿಗಳೇ ಕೊರೊನಾ ಕಂಟಕ
ರಾಜ್ಯದ ಧಾರವಾಡ, ಬೆಂಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿನ ನರ್ಸಿಂಗ್ ಹಾಗೂ ವೈದ್ಯಕೀಯ ಕಾಲೇಜುಗಳಲ್ಲಿ ಈಗಾಗಲೇ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ರಾಜ್ಯದ ಕಾಲೇಜುಗಳಲ್ಲಿ ಈಗಾಗಲೇ ಐನೂರಕ್ಕೂ ಅಧಿಕ ವಿದ್ಯಾರ್ಥಿಗಳು ಕೊರೊನಾ ಸೋಂಕಿನಿಂದ ತತ್ತರಿಸಿದ್ದಾರೆ. ಇನ್ನೊಂದಡೆಯಲ್ಲಿ ಕೊರೊನಾ ಸೋಂಕಿಗೆ ತುತ್ತಾಗಿರುವ ಬಹುತೇಕ ವಿದ್ಯಾರ್ಥಿಗಳು ಕೂಡ ಕೇರಳದವರೇ ಆಗಿದ್ದಾರೆ. ಹೀಗಾಗಿ ರಾಜ್ಯಕ್ಕೆ ಕೇರಳ ವಿದ್ಯಾರ್ಥಿಗಳೇ ಕಂಟಕವಾಗುವ ಸಾಧ್ಯತೆಯಿದೆ.
ರಾಜ್ಯದ ಪ್ರಾಥಮಿಕ, ಪ್ರೌಢಶಾಲೆಯ 130 ವಿದ್ಯಾರ್ಥಿಗಳಿಗೆ ಕೊರೊನಾ
ರಾಜ್ಯದಲ್ಲಿ ಓಮಿಕ್ರಾನ್ ಭೀತಿಯ ನಡುವಲ್ಲೇ ಇದೀಗ ಶಾಲೆ, ಕಾಲೇಜುಗಳಲ್ಲಿಯೂ ಕೊರೊನಾ ಸ್ಪೋಟ ಉಂಟಾಗಿದೆ. ಅದ್ರಲ್ಲೂ ಶೈಕ್ಷಣಿಕ ಸಂಸ್ಥೆಗಳೇ ಕೊರೊನಾ ಹಾಟ್ ಸ್ಪಾಟ್ ಆಗುವ ಸೂಚನೆಯ ಲಭಿಸುತ್ತಿದೆ. ಸಾರ್ವಜನಿಕ ಬೋಧನಾ ಇಲಾಖೆ ನೀಡಿರುವ ಮಾಹಿತಿಯ ಪ್ರಕಾರ ರಾಜ್ಯದಲ್ಲಿ 1 ರಿಂದ 10 ನೇ ತರಗತಿಯ 130 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕರ್ನಾಟದ ಎಲ್ಲಾ 34 ಶೈಕ್ಷಣಿಕ ಜಿಲ್ಲೆಗಳಿಂದ ದತ್ತಾಂಶವನ್ನು ಕ್ರೋಢೀಕರಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಜವಾಹರ್ ನವೋದಯ ವಸತಿ ಶಾಲೆಯಲ್ಲಿಯೇ ನೂರಕ್ಕೂ ಅಧಿಕ ವಿದ್ಯಾರ್ಥಿಗಳು ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ.
ಇದನ್ನೂ ಓದಿ : Corona Rules Break : ಕೊರೊನಾ ರೂಲ್ಸ್ ಬ್ರೇಕ್ ಮಾಡಿದ್ರೆ ಬೀಳುತ್ತೆ ಫೈನ್ : 14 ಕೋಟಿ ದಂಡ ಸಂಗ್ರಹಿಸಿದ ಬಿಬಿಎಂಪಿ
ಇದನ್ನೂ ಓದಿ : School Close Karnataka : ಶಾಲೆಗಳ ಮೇಲೆ ಮತ್ತೆ ಕೊರೊನಾ ಕರಿನೆರಳು: ಮತ್ತೆ ಬಾಗಿಲುಮುಚ್ಚಲಿದೆ ಶಿಕ್ಷಣ ಸಂಸ್ಥೆಗಳು ?!
ಇದನ್ನೂ ಓದಿ : Black box : ತಮಿಳುನಾಡಿನಲ್ಲಿ ಪತನಗೊಂಡ ಸೇನಾ ಹೆಲಿಕಾಪ್ಟರ್ನ ಬ್ಲ್ಯಾಕ್ ಬಾಕ್ಸ್ ಪತ್ತೆ
( 24 Nursing Students Corona positive in Shivamogga Bhadravathi)