3 Corona positive case: 3 ವಿದೇಶಿ ಪ್ರಯಾಣಿಕರಿಗೆ ಕೊರೊನಾ ಸೋಂಕು ದೃಢ: ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 22 ಕ್ಕೆ ಏರಿಕೆ

ಬೆಂಗಳೂರು: (3 Corona positive case) ನೆರೆದೇಶಗಳಲ್ಲಿ ಕೊರೊನಾ ಮಹಾಮಾರಿ ರೌಧ್ರನರ್ತನ ಮಾಡುತ್ತಿರುವ ಹಿನ್ನಲೆಯಲ್ಲಿ ದೇಶ ಹಾಗೇ ರಾಜ್ಯದ ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರಗಳನ್ನು ವಹಿಸಿಕೊಳ್ಳಲಾಗಿದೆ. ಈ ಹಿನ್ನಲೆಯಲ್ಲಿ ವಿಮಾನ ನಿಲ್ದಾಣಗಳಲ್ಲಿ ವಿದೇಶಿ ಪ್ರಯಾಣಿಕರಿಗೆ ಕಡ್ಡಾಯವಾಗಿ ಕೋವಿಡ್‌ ಪರೀಕ್ಷೆ ನಡೆಸುತ್ತಿದ್ದು, ಮೂರು ದಿನಗಳಲ್ಲಿ ರಾಜ್ಯದಲ್ಲಿ 19 ಮಂದಿಗೆ ಕೊರೊನಾ ಸೋಂಕು ಇರುವುದು ಪತ್ತೆಯಾಗಿದೆ. ಇಂದು ವಿದೇಶದಿಂದ ಬಂದಿದ್ದ ಮೂರು ಮಂದಿಗೆ ಕೊರೊನಾ ಸೋಂಕು ಇರುವುದು ಧೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 22 ಕ್ಕೆ ಏರಿದೆ.

ಕಳೆದ ನಾಲ್ಕು ದಿನಗಳಿಂದ ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಕೊರೊನಾ ನಿಯಂತಯ್ರಣಕ್ಕೆಂದು ಮುನ್ನೆಚ್ಚರಿಕೆ ಕ್ರಮವಾಗಿ ವಿದೇಶದಿಂದ ಬರುವ ಪ್ರಯಾಣಿಕರ ಮಾದರಿಗಳನ್ನು ಸಂಗ್ರಹಿಸಿ ಕೋವಿಡ್‌ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಕಳೆದ ಮೂರು ದಿನಗಳಲ್ಲಿ ವಿದೇಶದಿಂದ ಬಂದಿದ್ದ 19 ಮಂದಿ ಪ್ರಯಾಣಿಕರಿಗೆ ಕೊರೊನಾ ಸೋಂಕು (3 Corona positive case) ಇರುವುದು ದೃಢಪಟ್ಟಿದೆ. ಅದರಲ್ಲೂ ಚೀನಾದಿಂದ ರಾಜ್ಯಕ್ಕೆ ಬಂದಿದ್ದ ಓರ್ವ ವ್ಯಕ್ತಿಯಲ್ಲೂ ಕೊರೊನಾ ಸೋಂಕು ಪತ್ತೆಯಾಗಿತ್ತು. ಇದು ಇನ್ನಷ್ಟು ಆತಂಕ ಪಡುವಂತೆ ಮಾಡಿತ್ತು. ಈ ಹಿನ್ನಲೆಯಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಕೊರೊನಾ ನಿಯಂತ್ರಣಕ್ಕೆ ಇನ್ನಷ್ಟು ಕಟ್ಟುನಿಟ್ಟಾಗಿ ಮಾರ್ಗಸೂಚಿಗಳನ್ನು ಪಾಲಿಸಲು ಅರೋಗ್ಯ ಇಲಾಖೆ ಮುಂದಾಗಿದೆ.

ಇದೀಗ ವಿದೇಶದಿಂದ ಮೂರು ಪ್ರಯಾಣಿಕರು ಬೆಂಗಳೂರಿಗೆ ಬಂದಿದ್ದು, ಇಂದು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಧನಾತ್ಮಕ ಪರೀಕ್ಷೆ ನಡೆಸಲಾಗಿದೆ. ಈ ವೇಳೆ ಮೂವರಿಗೂ ಸೋಂಕು ದೃಢಪಟ್ಟಿದೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 22 ಕ್ಕೆ ಏರಿದ್ದು, ಜನಸಾಮಾನ್ಯರಲ್ಲಿ ಮತ್ತಷ್ಟು ಆತಂಕ ಹೆಚ್ಚಾಗಿದೆ. ಇದೀಗ ಮೂವರು ಸೋಂಕಿತರ ಮಾದರಿಗಳನ್ನು ಸಂಗ್ರಹಿಸಿ ಜಿನೋಮಿಕ್‌ ಸೀಕ್ವೆನ್ಸ್‌ ಪರೀಕ್ಷೆಗೆ ಕಳುಹಿಸಿಕೊಎಲಾಗಿದ್ದು, ಮೂವರನ್ನು ಬೌರಿಂಗ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ : Brain eating amoeba: ಕೊರೊನಾ ಸೋಂಕು ಬೆನ್ನಲ್ಲೇ ಮೆದುಳು ತಿನ್ನುವ ಅಮೀಬಾ ಆತಂಕ: ಅಷ್ಟಕ್ಕೂ ಇದರ ಗುಣಲಕ್ಷಣಗಳೇನು?

ಇದನ್ನೂ ಓದಿ : Don’t care about covid rules: ಕರಾವಳಿಯಲ್ಲಿ ಕೋವಿಡ್‌ ರೂಲ್ಸ್‌ ಗೆ ಡೋಂಟ್‌ ಕೇರ್‌: ಮಾಸ್ಕ್‌ ಮರೆತ ಜನ

ಸದ್ಯ ರಾಜ್ಯಕ್ಕೆ ವಿದೇಶಿ ಪ್ರಯಾಣಿಕರಿಂದಲೇ ಆತಂಕ ಜಾಸ್ತಿಯಾಗಿದೆ. ಹೊಸ ವೈರಸ್‌ ಅವರಿಂದಲೇ ಹರಡುವ ಸಾಧ್ಯತೆ ಹೆಚ್ಚಿದೆ. ಈ ಹಿನ್ನಲೆಯಲ್ಲಿ ಕೊವಿಡ್ ಪರೀಕ್ಷೆಯನ್ನು ಹೆಚ್ಚಿಸುವಂತೆ ಸಲಹೆ ನೀಡಲಾಗಿದೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುವ ಶೇ. 2ರಷ್ಟು ಪ್ರಯಾಣಿಕರಿಗೆ ಕೊವಿಡ್ ಪರೀಕ್ಷೆ ಮಾಡಲಾಡಗುತ್ತಿದೆ. ಶೇ. 2ರಷ್ಟು ರ್ಯಾಂಡಮ್ ಕೊವಿಡ್ ಪರೀಕ್ಷೆಯನ್ನ ಕನಿಷ್ಠ 10% ಆದ್ರೂ ಮಾಡುವಂತೆ ಮನವಿ ಮಾಡಲಾಗುತ್ತಿದೆ.

In three days, 19 people have been diagnosed with corona infection in the state. Today, three people who came from abroad have been confirmed to be infected with Corona, and the number of infected people has increased to 22.

Comments are closed.