ಬೆಂಗಳೂರು : ಕೊರೊನಾ ಮೂರನೇ ಅಲೆ ಆತಂಕವನ್ನು ಹುಟ್ಟು ಹಾಕಿದೆ. ರಾಜ್ಯದಲ್ಲಿ ಅಗಸ್ಟ್ ತಿಂಗಳಿನಲ್ಲೇ ಮೂರನೇ ಅಲೆ ಕಾಣಿಸಿಕೊಳ್ಳಲಿದೆ. ಈ ಹಿನ್ನೆಲೆಯಲ್ಲಿ ನೈಟ್ ಕರ್ಪ್ಯೂ, ವೀಕೆಂಡ್ ಕರ್ಪ್ಯೂ ಜಾರಿ ಮಾಡಲು ಕೋವಿಡ್ ತಾಂತ್ರಿಕ ಸಮಿತಿ ರಾಜ್ಯ ಸರಕಾರಕ್ಕೆ ಸಲಹೆಯನ್ನು ಮಾಡಿದೆ.

ಸಿಲಿಕಾನ್ ಸಿಟಿ ಬೆಂಗಳೂರು, ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಕೊಡಗು, ಚಾಮರಾಜನಗರ ಸೇರಿಂತೆ ರಾಜ್ಯದ ಒಟ್ಟು ಹತ್ತಕ್ಕೂ ಅಧಿಕ ಜಿಲ್ಲೆಗಳು ಡೇಜಂರ್ ಝೊನ್‌ನಲ್ಲಿವೆ. ಅಲ್ಲದೇ ದಿನೇ ದಿನೇ ಕೊರೊನಾ ಸೋಂಕು ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೊರೊನಾ ವೈರಸ್ ಸೋಂಕಿನ ನಿಯಂತ್ರಣಕ್ಕೆ ರಾಜ್ಯ ಸರಕಾರ ಹರಸಾಹಸ ಪಡುತ್ತಿದೆ. ಕೇರಳ, ಮಹಾರಾಷ್ಟ್ರದಲ್ಲಿ ಈಗಾಗಲೇ ಕೊರೊನಾ ಮೂರನೇ ಅಲೆಯ ಆರ್ಭಟ ಶುರುವಾಗಿದ್ದು, ಕರ್ನಾಟಕದಲ್ಲಿಯೂ ಅಗಸ್ಟ್ ತಿಂಗಳಿನಲ್ಲಿಯೇ ಮೂರನೇ ಅಲೆ ಕಾಣಿಸಿಕೊಳ್ಳಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

ಬೆಂಗಳೂರಲ್ಲಿ ಈಗಾಗಲೇ ಬಿಬಿಎಂಪಿ ಅಧಿಕಾರಿಗಳು ಸಿಲ್‌ಡೌನ್ ಜಾರಿಗೆ ಚಿಂತನೆ ನಡೆಸಿದ್ದು, ಹಲವು ಕಡೆಗಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡವರ ಮನೆಗಳನ್ನು ಸೀಲ್‌ಡೌನ್ ಮಾಡುತ್ತಿದ್ದಾರೆ. ಇನ್ನು ಗಡಿಭಾಗದ ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆಯನ್ನು ನೀಡಿದ್ದಾರೆ. ಈ ನಡುವಲ್ಲೇ ತಜ್ಞರ ಸಮಿತಿ ಹಲವು ಶಿಫಾರಸ್ಸುಗಳನ್ನು ಮಾಡಿದೆ.

ರಾಜ್ಯದಲ್ಲಿ ರಾತ್ರಿ ೭ ಗಂಟೆಯಿಂದ ಬೆಳಗ್ಗೆ ೬ ಗಂಟೆಯ ವರೆಗೆ ನೈಟ್ ಕರ್ಪ್ಯೂ ವಿಸ್ತರಣೆ ಮಾಡಬೇಕು. ಇದರಿಂದಾಗಿ ಜನರ ರಾತ್ರಿ ಓಡಾಟಕ್ಕೆ ಬ್ರೇಕ್ ಬೀಳಲಿದೆ. ಅಲ್ಲದೇ ವೀಕೆಂಡ್ ಕರ್ಪ್ಯೂ ಜಾರಿ ಮಾಡುವುದರಿಂದ ಶನಿವಾರ ಹಾಗೂ ಭಾನುವಾರದಂದು ಜನರ ಪ್ರವಾಸ, ಸಂಚಾರಕ್ಕೆ ಬ್ರೇಕ್ ಹಾಕಬೇಕು. ಜನರು ಗುಂಪು ಸೇರುವುದಕ್ಕೆ ನಿಯಂತ್ರಣವನ್ನು ಹೇರದೆ ಇದ್ರೆ ಅಪಾಯ ಫಿಕ್ಸ್ ಎನ್ನಲಾಗುತ್ತಿದೆ.

ಇನ್ನು ಸರಕಾರಿ ಹಾಗೂ ಖಾಸಗಿ ಕಚೇರಿಗಳಲ್ಲಿ ಪಾಳಿ ಪದ್ದತಿಯಲ್ಲಿ ಉದ್ಯೋಗಿಗಳು ಕಾರ್ಯನಿರ್ವಹಿಸಲು ಅವಕಾಶವನ್ನು ಕಲ್ಪಿಸಬೇಕು. ಇದರಿಂದಾಗಿ ಸೋಂಕು ಹರಡುವಿಕೆ ಯನ್ನು ತಡೆಯಬಹುದಾಗಿದೆ. ಸಭೆ, ಸಮಾರಂಭಗಳಿಗೆ ಬ್ರೇಕ್ ಹಾಕುವುದರ ಜೊತೆಗೆ ಮಾಸ್ಕ್, ಸಾಮಾಜಿಕ ಅಂತರ ಪಾಲನೆಯನ್ನು ಪರಿಣಾಮಕಾರಿಯಾಗಿ ಮಾಡಬೇಕು ಎಂದು ತಿಳಿಸಿದೆ.

ಕರ್ನಾಟಕದಲ್ಲಿ ಈಗಾಗಲೇ ಮೂರನೇ ಅಲೆಯ ಮುನ್ಸೂಚನೆ ಲಭಿಸಿದ್ದು, ಅಗಸ್ಟ್‌ನಲ್ಲಿಯೇ ಮೂರನೇ ಅಲೆ ಕಾಣಿಸಿಕೊಳ್ಳುವುದು ಖಚಿತ ಎನ್ನಲಾಗುತ್ತಿದೆ. ಸರಕಾರ ಎಚ್ಚೆತ್ತುಕೊಳ್ಳದೇ ಇದ್ದಲ್ಲಿ ಕರ್ನಾಟಕ ಮತ್ತೊಮ್ಮೆ ಸಂಪೂರ್ಣವಾಗಿ ಲಾಕ್ ಆಗೋದು ಗ್ಯಾರಂಟಿ.