Lockdown : ಕರ್ನಾಟಕದಲ್ಲಿ ಮತ್ತೆ ಲಾಕ್‌ಡೌನ್‌ ..!!! ಇಂದು ಸಿಎಂ ಮಹತ್ವದ ಸಭೆ

ಬೆಂಗಳೂರು : ಇಳಿಕೆಯನ್ನು ಕಾಣುತ್ತಿದ್ದ ಕೊರೊನಾ ವೈರಸ್‌ ಹೆಮ್ಮಾರಿ ಇದೀಗ ಮತ್ತೆ ಆರ್ಭಿಟಿಸೋದಕ್ಕೆ ಶುರುಮಾಡಿದೆ. ಕೇರಳ, ಮಹಾರಾಷ್ಟ್ರದಲ್ಲಿ ಸೋಂಕು ತೀವ್ರವಾಗಿ ಹೆಚ್ಚುತ್ತಿದ್ದು, ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗುತ್ತಿದೆ. ಸೋಂಕು ತೀವ್ರವಾಗಿ ಹರಡಿದ್ರೆ ಮತ್ತೆ ಲಾಕ್‌ಡೌನ್‌ ಹೇರಿಕೆಯಾಗೋದು ಖಚಿತ.

ಕೊರೊನಾ ಪಾಸಿಟಿವಿಟಿ ದರ ಸಂಪೂರ್ಣವಾಗಿ ಇಳಿಕೆಯಾದ ಬೆನ್ನಲ್ಲೇ ರಾಜ್ಯದಲ್ಲಿ ಲಾಕ್‌ಡೌನ್‌ ತೆರವು ಮಾಡಲಾಗಿದೆ. ಆದರೆ ಲಾಕ್‌ಡೌನ್‌ ತೆರವು ಮಾಡುತ್ತಿದ್ದಂತೆಯೇ ರಾಜ್ಯದಲ್ಲಿ ಸೋಂಕಿನ ಪ್ರಮಾಣ ನಿಧಾನವಾಗಿ ಏರಿಕೆಯಾಗುತ್ತಿದೆ. ನೆರೆಯ ಕೇರಳ, ಮಹಾರಾಷ್ಟ್ರಗಳಲ್ಲಿ ಮೂರನೇ ಅಲೆ ಆರ್ಭಟಿಸುತ್ತಿದ್ದು, ಕೇರಳದಲ್ಲಿ ನಿತ್ಯವೂ ಹದಿನೈದರಿಂದ ಇಪತ್ತು ಸಾವಿರಕ್ಕೂ ಅಧಿಕ ಸೋಂಕುಗಳು ಪತ್ತೆಯಾಗುತ್ತಿದೆ. ಹೊರ ರಾಜ್ಯಗಳಿಂದ ಸೋಂಕು ರಾಜ್ಯಕ್ಕೆ ಹರಡುವ ಆತಂಕ ಎದುರಾಗಿದೆ.

ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದಲೂ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ ಕಾಣುತ್ತಿದೆ. ನಿತ್ಯವೂ 400 ರಿಂದ 500ಕ್ಕೂ ಅಧಿಕ ಪ್ರಕರಣ ದಾಖಲಾಗುತ್ತಿದೆ. ಅಲ್ಲದೇ ಸಾವಿನ ಸಂಖ್ಯೆಯೂ ಹೆಚ್ಚುತ್ತಿದೆ. ಕೊರೊನಾ ಲಾಕ್‌ಡೌನ್‌ ತೆರವಿನ ಬೆನ್ನಲ್ಲೇ ಜನರು ಸಾಮಾಜಿಕ ಅಂತರ, ಮಾಸ್ಕ್‌ ಬಳಕೆಯನ್ನು ಮರೆಯುತ್ತಿದ್ದಾರೆ. ಇದರಿಂದಾಗಿ ಸೋಂಕು ತೀವ್ರವಾಗಿ ಹರಡುತ್ತಿದೆ ಎನ್ನಲಾಗುತ್ತಿದೆ.

ಇನ್ನೊಂದೆಡೆಯಲ್ಲಿ ಕೇರಳ, ಮಹಾರಾಷ್ಟ್ರದಲ್ಲಿ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಗಡಿ ಜಿಲ್ಲೆಗಳಲ್ಲಿಯೂ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿದೆ. ಅದ್ರಲ್ಲೂ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಪಾಸಿಟಿವಿಟಿ ದರದಲ್ಲಿ ಭಾರಿ ಏರಿಕೆ ಕಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿತ್ಯವೂ 300ಕ್ಕೂ ಅಧಿಕ ಪ್ರಕರಣ ದಾಖಲಾಗುತ್ತಿದ್ದು, ಉಡುಪಿಯಲ್ಲಿಯೂ ಸೋಂಕಿನ ಸಂಖ್ಯೆ 100ರ ಗಡಿದಾಟಿದೆ. ಅಲ್ಲದೇ ಸೋಂಕು ಇನ್ನಷ್ಟು ಏರಿಕೆಯಾಗುವ ಭೀತಿ ಎದುರಾಗಿದೆ.

ಇದನ್ನೂ ಓದಿ : ಗುಂಡಿಕ್ಕಿ ವೈದ್ಯಕೀಯ ವಿದ್ಯಾರ್ಥಿನಿ ಹತ್ಯೆ : ಯುವಕನೂ ಆತ್ಮಹತ್ಯೆ, ತನಿಖೆ ಚುರುಕು

ಅರಮನೆ ನಗರಿ ಮೈಸೂರಿನಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುತ್ತಿಲ್ಲ. ಅಲ್ಲದೇ ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನ ಜಿಲ್ಲೆಯಲ್ಲಿಯೂ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ ಕಂಡಿದೆ. ದಾವಣಗೆರೆ, ತುಮಕೂರು, ಬೆಳಗಾವಿ, ಬಳ್ಳಾರಿ ಜಿಲ್ಲೆಯಲ್ಲಿಯೂ ಸೋಂಕು ಹೆಚ್ಚುವ ಆತಂಕ ಎದುರಾಗಿದೆ.

ಗಡಿ ಜಿಲ್ಲೆಗಳಲ್ಲಿ ಈಗಾಗಲ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗಿದೆ. ಗಡಿಗಳಲ್ಲಿ ತಪಾಸಣಾ ಕಾರ್ಯ ನಡೆಸುತ್ತಿದ್ದು, ಕೊರೊನಾ ನೆಗೆಟಿವ್‌ ವರದಿ ಇದ್ದವರನ್ನು ಮಾತ್ರವೇ ರಾಜ್ಯಕ್ಕೆ ಬರಲು ಅವಕಾಶ ನೀಡಲಾಗುತ್ತಿದೆ. ಆದರೆ ರಾತ್ರಿಯ ವೇಳೆಯಲ್ಲಿ ರಾಜ್ಯಕ್ಕೆ ಆಗಮಿಸುವವರ ಸಂಖ್ಯೆಯಲ್ಲಿಯೂ ಏರಿಕೆಯಾಗಿದೆ. ರಾಜ್ಯದಲ್ಲಿ ಅಗಸ್ಟ್‌ ಮೂರನೇ ವಾರದಲ್ಲಿ ಕೊರೊನಾ ಮೂರನೇ ಅಲೆ ಉಂಟಾಗುವ ಕುರಿತು ತಜ್ಞರು ಸರಕಾರಕ್ಕೆ ಎಚ್ಚರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲು ಚಿಂತನೆ ನಡೆಸಿದೆ. ಸೋಂಕು ಹೆಚ್ಚಳವಾದ್ರೆ ರಾಜ್ಯದಲ್ಲಿ ಮತ್ತೊಮ್ಮೆ ಲಾಕ್‌ಡೌನ್‌ ಹೇರಿಕೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ : FINANCIER MURDER : ಕುಂದಾಪುರ ಸಳ್ವಾಡಿಯ ಡ್ರೀಮ್ ಫೈನಾನ್ಸ್ ನ ಪಾಲುದಾರ ಅಜೇಂದ್ರ ಶೆಟ್ಟಿ ಹತ್ಯೆ

ಸಿಎಂ ಬಸವರಾಜ್‌ ಬೊಮ್ಮಾಯಿ ಅವರು ಇಂದು ಗಡಿ ಜಿಲ್ಲೆಗಳು ಹಾಗೂ ಸೋಂಕು ಹೆಚ್ಚುತ್ತಿರುವ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಚಾಮರಾಜನಗರ ಹಾಗೂ ಮೈಸೂರು ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆಗೆ ವಿಡಿಯೋ ಕಾನ್ಪರೆನ್ಸ್‌ ನಡೆಸಲಿದ್ದಾರೆ. ಈ ವೇಳೆಯಲ್ಲಿ ಕೈಗೊಳ್ಳಬಹುದಾದ ಕಠಿಣ ಕ್ರಮಗಳ ಬಗ್ಗೆಯೂ ಚರ್ಚಿಸಲಿದ್ದಾರೆ. ಇನ್ನೊಂದೆಡೆ ರಾಜ್ಯದಲ್ಲಿ ನೈಟ್‌ ಕರ್ಪ್ಯೂ ಜಾರಿಯಾಗುವ ಸಾಧ್ಯತೆಯಿದೆ.

Comments are closed.