ಅಂಬೇಡ್ಕರ್ ತಾಂತ್ರಿಕ ಕಾಲೇಜಿನ ಡೀನ್ ಕೊರೊನಾ ಸೋಂಕಿಗೆ ಬಲಿ

0

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಸಾವಿನ ಸವಾರಿ ಮುಂದುವರಿದಿದೆ. ಬೆಂಗಳೂರಿನ ಪ್ರತಿಷ್ಠಿತ ಅಂಬೇಡ್ಕರ್ ತಾಂತ್ರಿಕ ಕಾಲೇಜಿನ 55 ವರ್ಷದ ಡೀನ್ ಬಲಿಯಾಗಿದ್ದಾರೆ. ಇದೀಗ ಪತ್ನಿಗೂ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಗಳೂರಲ್ಲಿ ಡೆಡ್ಲಿ ಮಹಾಮಾರಿಯ ಆರ್ಭಟ ಜೋರಾಗಿದೆ. ಬೆಂಗಳೂರಿನ ಮಲ್ಲತಹಳ್ಳಿಯಲ್ಲಿರುವ ಅಂಬೇಡ್ಕರ್ ತಾಂತ್ರಿಕ ಕಾಲೇಜಿನ ಡೀನ್ ಕಳೆದ ಹಲವು ದಿನಗಳಿಂದಲೂ ಕೊರೊನಾ ಸೋಂಕಿನಿಂದ ಬಳಲುತ್ತಿದ್ದರು. ಅವರನ್ನು ನಗರದ ಸೈಂಟ್ ಜಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೀಗ ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದಾರೆ. ಡೀನ್ ಅವರಿಗೆ ಇತರ ಆರೋಗ್ಯ ಸಂಬಂಧಿತ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗುತ್ತಿದೆ.

ಇನ್ನು ಡೀನ್ ಅವರ ಪತ್ನಿಗೂ ಕೂಡ ಕೊರೊನಾ ಸೋಂಕು ದೃಢಪಟ್ಟಿದ್ದು, ಅವರನ್ನು ನಗರ ಇಎಸ್ಐ ಆಸ್ಪತ್ರೆಗೆ ದಾಖಲಾಗಿದೆ.
ಡೀನ್ ಅವರ ಇಬ್ಬರು ಮಕ್ಕಳು ಮಾತ್ರವೇ ಮನೆಯಲ್ಲಿದ್ದು, ಡೀನ್ ಅವರ ಮೃತದೇಹವನ್ನು ಸಂಬಂಧಿಗಳಿಗೆ ನೀಡದೇ, ಕೊರೊನಾ ಮಾರ್ಗಸೂಚಿಯಂತೆಯೇ ಅಂತ್ಯಕ್ರೀಯೆಯನ್ನು ನಡೆಸಲಾಗುತ್ತದೆ ಎಂದು ತಿಳಿದುಬಂದಿದೆ.

Leave A Reply

Your email address will not be published.