
ನವದೆಹಲಿ : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಕೇಂದ್ರ ಗೃಹ ಸಚಿವರ ಅಮಿತ್ ಶಾ ಕೊರೊನಾ ಗೆದ್ದಿದ್ದಾರೆ.
ಅಮಿತ್ ಶಾ ಅವರ ಸಂಪೂರ್ಣವಾಗಿ ಗುಣಮುಖರಾಗಿದ್ದು, ಅವರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಅವರಿಗೆ ಕೊರೊನಾ ನೆಗೆಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರುವ ಅಮಿತ್ ಶಾ ಅವರು ವೈದ್ಯರ ಸಲಹೆಯ ಮೇರೆಗೆ ಕೆಲವು ದಿನಗಳ ಕಾಲ ಹೋಮ್ ಕ್ವಾರಂಟೈನ್ ನಲ್ಲಿ ಇರಲಿದ್ದಾರೆ.

ನನ್ನ ಕೊರೊನಾ ತಪಾಸಣಾ ವರದಿಯಲ್ಲಿ ನೆಗೆಟಿವ್ ಬಂದಿದ್ದು, ದೇವರಿಗೆ ಮತ್ತು ನನ್ನ ಆರೋಗ್ಯಕ್ಕಾಗಿ ಪ್ರಾರ್ಥಿಸಿದವರಿಗೆ ಧನ್ಯವಾದ ಸಲ್ಲಿಸಿದ್ದಾರೆ.