ಬೆಂಗಳೂರು 735, ದ.ಕ 84, ಬಳ್ಳಾರಿ 85 ಮಂದಿಗೆ ಸೋಂಕು : 16,514ಕ್ಕೇರಿದ ಸೋಂಕಿತರು

0

ಬೆಂಗಳೂರು : ಡೆಡ್ಲಿ ಕೊರೊನಾ ವೈರಸ್ ಸೋಂಕು ರಾಜ್ಯದಲ್ಲಿ ಆರ್ಭಟಿಸಿದೆ. ಸಿಲಿಕಾನ್ ಸಿಟಿ ಬೆಂಗಳೂರು, ದಕ್ಷಿಣ ಕನ್ನಡ ಹಾಗೂ ಬಳ್ಳಾರಿ ಜಿಲ್ಲೆಯಲ್ಲಿ ದಾಖಲೆಯ ಪ್ರಮಾಣದಲ್ಲಿ ಸೋಂಕಿತರು ಪತ್ತೆಯಾಗಿದ್ದಾರೆ. ಇಂದು ಒಂದೇ ದಿನ 1272 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ 16,514ಕ್ಕೆ ಏರಿಕೆ ಕಂಡಿದೆ.

ಸಿಲಿಕಾನ್ ಸಿಟಿಗೆ ಹೆಮ್ಮಾರಿ ಕೊರೊನಾ ಶಾಕ್ ಮೇಲೆ ಶಾಕ್ ಕೊಟ್ಟಿದೆ. ಇಂದು ಕೂಡ ಬರೋಬ್ಬರಿ 735 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಳ್ಳುವ ಮೂಲಕ ಆತಂಕ ಮೂಡಿಸಿದೆ. ಈ ಮೂಲಕ ಬೆಂಗಳೂರಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 5290ಕ್ಕೆ ಏರಿಕೆಯನ್ನು ಕಂಡಿದ್ದು, 97 ಮಂದಿಯನ್ನು ಮಹಾಮಾರಿ ಕೊರೊನಾ ಬಲಿ ಪಡೆದಿದೆ.

ಗಡಿನಾಡು ಬಳ್ಳಾರಿಯಲ್ಲಿ ಸೋಂಕಿತ ಸಂಖ್ಯೆಯಲ್ಲಿ ಬಾರೀ ಪ್ರಮಾಣದಲ್ಲಿ ಏರಿಕೆಯನ್ನು ಕಾಣುತ್ತಿದೆ. ಜಿಲ್ಲೆಯಲ್ಲಿಂದು 85 ಮಂದಿ ಕೊರೊನಾ ಸೋಂಕು ಅಬ್ಬರಿಸುತ್ತಿದ್ದು, ಸೋಂಕಿತರ ಸಂಖ್ಯೆ 919ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 29 ಮಂದಿಯನ್ನು ಡೆಡ್ಲಿ ಮಹಾಮಾರಿ ಬಲಿ ಪಡೆದಿದೆ. ಕರಾವಳಿಯಲ್ಲಿಯೂ ಕೊರೊನಾ ಸೋಂಕು ಆತಂಕವನ್ನು ತಂದೊಡ್ಡುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 84 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ರೆ ಉಡುಪಿ ಜಿಲ್ಲೆಯಲ್ಲಿ 22 ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ 23 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಪ್ರತಿನಿತ್ಯವೂ ಕರಾವಳಿ ಜಿಲ್ಲೆಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಶತಕದ ಗಡಿದಾಟುತ್ತಿದೆ.

ಉಳಿದಂತೆ ಧಾರವಾಡ 35, ಬೆಂಗಳೂರು ಗ್ರಾಮಾಂತರ 29, ವಿಜಯಪುರ 28, ಚಾಮರಾಜನಗರ 21, ಬಾಗಲಕೋಟೆ 20, ತುಮಕೂರು 19, ದಾವಣಗೆರೆ 16, ಚಿಕ್ಕಬಳ್ಳಾಪುರ 15, ಕಲಬುರಗಿ 14, ರಾಮನಗರ 14, ಕೊಪ್ಪಳ 13, ರಾಯಚೂರು 12, ಚಿತ್ರದುರ್ಗ 12, ಯಾದಗಿರಿ 8, ಬೀದರ್ 8, ಬೆಳಗಾವಿ 8, ಕೊಡಗು 7, ಮಂಡ್ಯ 5, ಕೋಲಾರ 5, ಶಿವಮೊಗ್ಗ 3, ಗದಗ 2, ಚಿಕ್ಕಮಗಳೂರಲ್ಲಿ ಓರ್ವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 16,514ಕ್ಕೆ ಏರಿಕೆಯಾಗಿದ್ದು, ಸಕ್ರೀಯ ಪ್ರಕರಣಗಳ ಸಂಖ್ಯೆಯೂ ಹೆಚ್ಚುತ್ತಿದೆ. ರಾಜ್ಯದಲ್ಲಿ 8194 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಕೂಡ ರಾಜ್ಯದಲ್ಲಿ 7 ಮಂದಿಯನ್ನು ಡೆಡ್ಲಿ ಮಹಾಮಾರಿ ಬಲಿ ಪಡೆದಿದ್ದು, ಸಾವನ್ನಪ್ಪಿದವರ ಸಂಖ್ಯೆ 253ಕ್ಕೆ ಏರಿಕೆಯಾಗಿದೆ.

Leave A Reply

Your email address will not be published.