ಡೇಂಜರ್ ಬೆಂಗಳೂರು !!!! ಒಂದೇ ದಿನ 938 ಮಂದಿಗೆ ಕೊರೊನಾ ಸೋಂಕು !

0

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿಗರು ಕೊರೊನಾ ಮಹಾಮಾರಿಯ ಆರ್ಭಟಕ್ಕೆ ಬೆಚ್ಚಿಬಿದ್ದಿದ್ದಾರೆ. ಇಂದು ಒಂದೇ ದಿನ ಬರೋಬ್ಬರಿ 938 ಮಂದಿಗೆ ಕೊರೊನಾ ಸೋಂಕು ಪತ್ತೆಯಾಗಿದ್ದು, ಸಮುದಾಯಕ್ಕೆ ಸೋಂಕು ಹರಡಿದೆ ಅನ್ನುವ ಮಾತುಗಳು ಕೇಳಿಬರುತ್ತಿದೆ.

ಕೊರೊನಾ ವೈರಸ್ ಸೋಂಕು ರಾಜಧಾನಿ ಬೆಂಗಳೂರಲ್ಲಿ ಮರಣ ಮೃದಂಗವನ್ನೇ ಬಾರಿಸುತ್ತಿದೆ. ಒಂದೆಡೆ ಮಹಾಮಾರಿಗೆ ಬಲಿಯಾಗುವವರ ಸಂಖ್ಯೆ ಹೆಚ್ಚುತ್ತಿದ್ರೆ, ಇನ್ನೊಂದೆಡೆ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿಯೂ ಹೆಚ್ಚಳವಾಗುತ್ತಿದೆ. ಇಂದು ಬೆಂಗಳೂರಲ್ಲಿ ಒಂದೇ ದಿನ ಬರೋಬ್ಬರಿ 938 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಈ ಕುರಿತು ಈಗಾಗಲೇ ಆರೋಗ್ಯ ಇಲಾಖೆಯ ಅಧಿಕಾರಿಗಳು ಬಿಬಿಎಂಪಿಗೆ ಮಾಹಿತಿಯನ್ನು ನೀಡಿದ್ದಾರೆ. ಈ ಕುರಿತು ಸಂಜೆಯ ಹೆಲ್ತ್ ಬುಲೆಟಿನ್ ನಲ್ಲಿ ಅಧಿಕೃತ ಮಾಹಿತಿ ಹೊರಬೀಳುವ ಸಾಧ್ಯತೆಯಿದೆ.

ಬೆಂಗಳೂರಲ್ಲಿ ಕೊರೊನಾ ಸೋಂಕು ಸಮುದಾಯಕ್ಕೆ ಹರಡಿರುವ ಕುರಿತು ತಜ್ಞರು ಮಾಹಿತಿಯನ್ನು ನೀಡುತ್ತಿದ್ದಾರೆ. ಇದರಿಂದಾಗಿಯೇ ನಿತ್ಯವೂ ಕೊರೊನಾ ಸೋಂಕಿತರ ಸಂಖ್ಯೆ ಸಾವಿರದಂಚಿಗೆ ಬಂದು ನಿಲ್ಲುತ್ತಿದೆ. ಅಲ್ಲದೇ ಸಂಜೆಯ ವೇಳೆಗೆ ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆಯಿದೆ.

Leave A Reply

Your email address will not be published.