Night Curfew : ವಿಸ್ತರಣೆಯಾಯ್ತು ನೈಟ್‌ ಕರ್ಪ್ಯೂ : ಜಾರಿಯಾಗುತ್ತಾ ಕಠಿಣ ರೂಲ್ಸ್‌

ಬೆಂಗಳೂರು : ಕೊರೊನಾ ವೈರಸ್‌ ಸೋಂಕು ಸಂಪೂರ್ಣವಾಗಿ ನಿಯಂತ್ರಣಕ್ಕೆ ಬರುತ್ತಿಲ್ಲ. ಜೊತೆಗೆ ಮೂರನೇ ಅಲೆಯ ಆತಂಕವೂ ಹೆಚ್ಚುತ್ತಿದೆ. ಈ ನಡುವಲ್ಲೇ ಅಗಸ್ಟ್‌ ಅಂತ್ಯದ ವರೆಗೆ ನೈಟ್‌ ಕರ್ಪ್ಯೂ ಜಾರಿ ಮಾಡಲಾಗಿದ್ದು, ಇನ್ನಷ್ಟು ಕಠಿಣ ರೂಲ್ಸ್‌ ಜಾರಿಯಾಗುವ ಸಾಧ್ಯತೆಯಿದೆ.

ಸಿಲಿಕಾನ್‌ ಸಿಟಿಯಲ್ಲಿ ಕೊರೊನಾ ಎರನಡೇ ಅಲೆ ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ. ಆದರೂ ಬೆಂಗಳೂರಲ್ಲಿ ಕೊರೊನಾ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಈಗಾಗಲೇ ಜಾರಿ ಮಾಡಲಾಗಿದೆ. ಅಲ್ಲದೇ ಲಾಕ್‌ಡೌನ್‌, ವೀಕೆಂಡ್‌ ಕರ್ಪ್ಯೂ ಜಾರಿ ಮಾಡುವ ಮಾತುಗಳು ಕೇಳಿಬರುತ್ತಿದೆ. ಆದರೆ ರಾಜ್ಯ ಸರಕಾರ ಮಾತ್ರ ಸದ್ಯದ ಪರಿಸ್ಥಿತಿಯಲ್ಲಿ ಲಾಕ್‌ಡೌನ್‌ ಜಾರಿ ಮಾಡೋದಿಲ್ಲ ಎಂದಿದೆ.

ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ ಅವರು ನೈಟ್‌ ಕರ್ಪ್ಯೂ ಆದೇಶವನ್ನು ಅಗಸ್ಟ್‌ ಅಂತ್ಯದ ವರೆಗೆ ವಿಸ್ತರಣೆಯನ್ನು ಮಾಡಿದ್ದಾರೆ. ಅಲ್ಲದೇ ನೈಟ್‌ ಕರ್ಪ್ಯೂ ಅವಧಿಯಲ್ಲಿ ಕಠಿಣ ನಿಯಮಗಳನ್ನು ಜಾರಿಗೊಳಿಸುವುದಾಗಿಯೂ ಹೇಳಿಕೆ ನೀಡಿದ್ದಾರೆ. ಇನ್ನೊಂದೆಡೆಯಲ್ಲಿ ಬಿಬಿಎಂಪಿ ಕೂಡ ಕೊರೊನಾ ಸೋಂಕಿತರ ಪತ್ತೆಗಾಗಿ ಮನೆ ಮನೆಗೆ ವೈದ್ಯರನ್ನು ಕಳುಹಿಸಿಕೊಟ್ಟಿದೆ.

ಕೇವಲ ಬೆಂಗಳೂರು ಮಾತ್ರವಲ್ಲ ರಾಜ್ಯದಾದ್ಯಂತ ಬಿಗಿ ಕ್ರಮ ಜಾರಿಯಾಗುವ ಸಾಧ್ಯತೆಯಿದೆ. ಈಗಾಗಲೇ ಗಡಿ ಜಿಲ್ಲೆಗಳಲ್ಲಿ ವೀಕೆಂಡ್‌ ಕರ್ಪ್ಯೂ ಜಾರಿ ಮಾಡಲಾಗಿದ್ದು, ಕೊರೊನಾ ಹೆಚ್ಚುತ್ತಿರುವ ಜಿಲ್ಲೆಗಳಲ್ಲಿಯೂ ವೀಕೆಂಡ್‌ ಕರ್ಪ್ಯೂ ಜಾರಿಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

Comments are closed.