Covid-19 Updates : ಕರ್ನಾಟಕದಲ್ಲಿಂದು 28723 ಮಂದಿಗೆ ಕೊರೊನಾ : ಮೈಸೂರು, ದ.ಕ, ಉಡುಪಿಯಲ್ಲಿ ದಾಖಲೆಯ ಕೇಸ್‌

ಬೆಂಗಳೂರು : ( Karnataka Covid-19 Updates ) ಕರ್ನಾಟಕದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕಿತ ಪ್ರಕರಣಗಳ ಸಂಖ್ಯೆಗೆ ಬ್ರೇಕ್‌ ಬೀಳುತ್ತಿಲ್ಲ. ದಿನೇ ದಿನೇ ಸೋಂಕಿತ ಪ್ರಕರಣ ಸಂಖ್ಯೆಯಲ್ಲಿ ಭಾರೀ ಏರಿಕೆ ಕಾಣುತ್ತಿದೆ. ಇಂದು ಒಂದೇ ದಿನ 28723 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ರಾಜ್ಯದಲ್ಲಿ ಸಕ್ರೀಯ ಪ್ರಕರಣಗಳ ಸಂಖ್ಯೆ 1,41,337 ಕ್ಕೆ ಏರಿಕೆ ಕಂಡಿದೆ. ಅದ್ರಲ್ಲೂ ಮೈಸೂರು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ದಾಖಲೆಯ ಪ್ರಮಾಣದಲ್ಲಿ ಕೊರೊನಾ ಸೋಂಕಿತ ಪ್ರಕರಣ ಸಂಖ್ಯೆ ಪತ್ತೆಯಾಗಿದೆ.

ಕರ್ನಾಟಕದಲ್ಲಿ ಇಂದು 28,723 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ೩೧೫೩೨೪೭ಕ್ಕೆ ಏರಿಕೆ ಕಂಡಿದೆ. ಇಂದು ೩೧೦೫ ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಸಕ್ರೀಯ ಪ್ರಕರಣಗಳ ಸಂಖ್ಯೆ ೧೪೧೩೩೭ಕ್ಕೆ ಏರಿಕೆಯಾಗಿದೆ. ಇಂದು ೧೪ ಮಂದಿ ಕೊರೊನಾ ಕಾರಣದಿಂದ ಸಾವನ್ನಪ್ಪಿದ್ದರೆ, ೨೯ ಮಂದಿ ಅನ್ಯ ಕಾರಣದಿಂದ ಮೃತಪಟ್ಟಿದ್ದಾರೆ. ಈ ಮೂಲಕ ಕೊರೊನಾದಿಂದ ಸಾವನ್ನಪ್ಪಿರುವವರ ಸಂಖ್ಯೆ ೩೮,೪೧೧ಕ್ಕೆ ಏರಿಕೆ ಕಂಡಿದೆ.

ಇನ್ನು ಸಿಲಿಕಾನ್‌ ಸಿಟಿ ಬೆಂಗಳೂರಲ್ಲಿಯೇ ಇಂದು ಬರೋಬ್ಬರಿ ೨೦೧೨೧ ಕೊರೊನಾ ಸೋಂಕಿತ ಪ್ರಕರಣ ಪತ್ತೆಯಾಗಿದೆ. ಈ ಮೂಲಕ ಕೊರೊನಾ ಸೋಂಕಿತ ಪ್ರಕರಣಗಳ ಸಂಖ್ಯೆ ೧೩೭೩೪೫೨ಕ್ಕೆ ಏರಿಕೆಯಾಗಿದೆ. ೧೬೯೫ ಮಂದಿ ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಸಕ್ರೀಯ ಪ್ರಕರಣಗಳ ಸಂಖ್ಯೆ ೧೦೯೩೧೨ಕ್ಕೆ ಏರಿಕೆಯಾಗಿದೆ. ಅದ್ರಲ್ಲೂ ೭ ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.

ಉಳಿದಂತೆ ಮೈಸೂರಿನಲ್ಲಿ ೮೦೩ ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸಕ್ರೀಯ ಪ್ರಕರಣಗಳ ಸಂಖ್ಯೆ ೩೪೬೨ಕ್ಕೆ ಏರಿಕೆಯಾಗಿದ್ರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ೬೩೯ ಹೊಸ ಪ್ರಕರಣ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು ೨೯೯೦ ಸಕ್ರೀಯ ಪ್ರಕರಣಗಳಿವೆ. ಉಡುಪಿ ಜಿಲ್ಲೆಯಲ್ಲಿಯೂ ಸೋಂಕಿನ ಪ್ರಕರಣ ಸಂಖ್ಯೆಯಲ್ಲಿ ಭಾರಿ ಏರಿಕೆ ಕಾಣುತ್ತಿದೆ. ಇಂದು ಕೂಡ ೪೯೧ ಕೊರೊನಾ ಪ್ರಕರಣ ಪತ್ತೆಯಾಗಿದೆ.

ಇದನ್ನೂ ಓದಿ : ಕೋವಿಡ್​ ಮಾರ್ಗಸೂಚಿ ಪಾಲನೆ ಅವಧಿ ವಿಸ್ತರಿಸಿದ ರಾಜ್ಯ ಸರ್ಕಾರ

ಇದನ್ನೂ ಓದಿ : ಲಸಿಕೆ ಸ್ವೀಕರಿಸದವರ ಪಾಲಿಗೆ ‘ಓಮಿಕ್ರಾನ್​’ ಅಪಾಯಕಾರಿ : ವಿಶ್ವ ಆರೋಗ್ಯ ಸಂಸ್ಥೆ

( Karnataka Covid-19 Updates : Bengaluru alone logs over 20k infections Karnataka reports 28723 new Covid-19 cases )

Comments are closed.