Break for New year: ಹೊಸ ವರ್ಷಾಚರಣೆಗೆ ಬ್ರೇಕ್:‌ ನಂದಿಗಿರಿಧಾಮಕ್ಕೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ

ಚಿಕ್ಕಬಳ್ಳಾಪುರ: (Break for New year) ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಭೀತಿ ಹಿನ್ನಲೆಯಲ್ಲಿ ಸರಕಾರ ಹೊಸ ವರ್ಷಾಚರಣೆಗೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಈ ಹಿನ್ನಲೆಯಲ್ಲಿ ವಿಶ್ವವಿಖ್ಯಾತ ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್‌ ಹಾಕಲಾಗಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಎನ್‌. ಎಂ. ನಾಗರಾಜ್‌ ಆದೇಶ ಹೊರಡಿಸಿದ್ದಾರೆ.

ಡಿಸೆಂಬರ್‌ 31 ರ ಸಂಜೆ 6 ಗಂಟೆಯಿಂದ ಜನವರಿ 1ರ ಬೆಳಿಗ್ಗೆ 6 ಗಂಟೆಯವರೆಗೆ ನಂದಿಗಿರಿಧಾಮದಲ್ಲಿ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧಗಳನ್ನು (Break for New year) ಹೇರಲಾಗಿದೆ. ಸಾರ್ವಜನಿಕರಿಗೆ ನಿರ್ಬಂಧಗಳನ್ನು ಹೇರಿದ್ದಲ್ಲದೇ ಡಿಸೆಂಬರ್‌ 31 ರಂದು ರೂಮ್‌ ಬುಕ್ಕಿಂಗ್‌ ಸಹ ರದ್ದುಪಡಿಸಲಾಗಿದೆ. ಹಾಗೆಯೇ ನಂದಿಗಿರಿಧಾಮದ ಸುತ್ತಮುತ್ತ ಸೂಕ್ತ ಬಂದೋಬಸ್ತ್‌ ನಡೆಸಲು ಪೊಲೀಸರಿಗೆ ಸೂಚಿಸಲಾಗಿದೆ. ಹೊಸ ವರ್ಷಾಚರಣೆಯ ಹೊತ್ತಿನಲ್ಲಿ ಡ್ರಿಂಕ್‌ ಆಂಡ್‌ ಡ್ರೈವ್‌ ಅಪಘಾತ ತಪ್ಪಿಸಲು ಹಾಗೂ ಕೊರೊನಾ ನಿಯಂತ್ರಿಸುವ ಉದ್ದೇಶದಿಂದ ಈ ಆದೇಶವನ್ನು ಹೊರಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಮತ್ತೆ ಕೊರೊನಾ ಸಂಖ್ಯೆ ಹೆಚ್ಚಳವಾಗುವ ಭೀತಿಯಲ್ಲಿ ಸರಕಾರ ಹೋಟೆಲ್‌, ರೆಸಾರ್ಟ್‌, ಹೋಮ್‌ ಸ್ಟೇಗಳಲ್ಲಿ ನಿರ್ಬಂಧಗಳನ್ನು ವಿಧಿಸಲಾಗಿದೆ. ಬೆಂಗಳೂರಿನಲ್ಲಿ ಕೊರೊನಾ ಹಿನ್ನಲೆಯಲ್ಲಿ ಜನರು ಹೊರವಲಯದತ್ತ ಮುಖಮಾಡುತ್ತಿದ್ದಾರೆ. ಚಿಕ್ಕಮಗಳೂರಿನ ನಂದಿಗಿರಿಧಾಮ ಪ್ರಸಿದ್ದವಾದ ತಾಣವಾದ ಕಾರಣ ಅಲ್ಲಿನ ಹೋಟೆಲ್‌ ,ಹೋಮ್‌ ಸ್ಟೇಗಳಲ್ಲಿ ಬಹುತೇಕ ಎಲ್ಲಾ ರೂಮ್‌ ಗಳು ಬುಕ್‌ ಆಗಿವೆ.

ನಿಯಮಗಳನ್ನು ಉಲ್ಲಂಘಸಿ ರಾತ್ರಿ 11:30 ರ ನಂತರ ಪಾರ್ಟಿ ಮೋಜು ಮಸ್ತಿ ಈ ರೀತಿಯಾದ ಅನೈತಿಕ ಚಟುವಟಿಕೆಗಳನ್ನು ನಡೆಸಿದಲ್ಲಿ ಪೊಲೀಸರಿಗೆ ಕ್ರಮ ಕೈಗೊಳ್ಳುವಂತೆ ಚಿಕ್ಕಮಗಳೂರಿನ ಎಸ್‌ ಪಿ ತಿಳಿಸಿದ್ದಾರೆ.

Break for New year: ನಂದಿಬೆಟ್ಟದಲ್ಲಿ ಸಾರ್ವಜನಿಕರಿಗೆ ಪ್ರವೇಶ ಬಂದ್

ನಿಸರ್ಗ ಪ್ರೀಯ ಪ್ರವಾಸಿ ತಾಣವಾದ ನಂದಿ ಬೆಟ್ಟದಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧಗಳನ್ನು ಹೇರಲಾಗಿದೆ. ಡಿಸೆಂಬರ್‌ 31 ರ ಸಂಜೆ 6 ಗಂಟೆಯಿಂದ ಜನವರಿ 1ರ ಬೆಳಿಗ್ಗೆ 6 ಗಂಟೆಯವರೆಗೆ ಸಾರ್ವಜನಿಕರ ಪ್ರವೇಶವನ್ನು ಬಂದ್‌ ಮಾಡಲಾಗಿದ್ದು, ನಂದಿಬೆಟ್ಟದ ರೂಮ್‌ ಗಳಲ್ಲಿ ಸಾರ್ವಜನಿಕರಿಗೆ ತಂಗಲು ಅವಕಾಶವನ್ನು ಕೂಡ ನಿರ್ಬಂಧಿಸಲಾಗಿದೆ. ಅಲ್ಲದೇ ಡಿಸೆಂಬರ್‌ 31 ರಂದು ರೂಮ್‌ ಬುಕ್ಕಿಂಗ್‌ ಗೆ ಕೂಡ ನಿರ್ಬಂಧವನ್ನು ಹೇರಲಾಗಿದೆ.

ಇದನ್ನೂ ಓದಿ : Pancharatna Yatra: ಎರಡು ಹೊಸ ದಾಖಲೆ ಬರೆದ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ಪಂಚರತ್ನ ಯಾತ್ರೆ

ಹಾಗೇ ಬೆಂಗಳೂರಿನ ಅಕ್ಕಪಕ್ಕದ ಜಿಲ್ಲೆಗಳಲ್ಲಿ ಹಲವು ನೈಸರ್ಗಿಕ ಹಾಗೂ ಧಾರ್ಮಿಕ ಪ್ರವಾಸಿ ತಾಣಗಳಿದ್ದು, ಎರಡು ದಿನಗಳ ಕಾಲ ಇಂತಹ ಪ್ರದೇಶಗಳಿಗೆ ಪ್ರವೇಶವನ್ನು ಬಂದ್‌ ಮಾಡುವಂತೆ ಆದೇಶ ಹೊರಡಿಸಲಾಗಿದೆ.

Chikkaballapur District Collector N said that the New Year celebrations at the world-famous Nandigiri temple have been put on hold. M. Nagaraj has issued an order.

Comments are closed.