ಚಾಮರಾಜನಗರ : ಕೊರೊನಾ ಸೋಂಕಿತರ ಸಾವಿನ ಸರಣಿ ಚಾಮರಾಜನಗರದಲ್ಲಿ ಮುಂದುವರಿದಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಬರೋಬ್ಬರಿ 7 ಮಂದಿ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿರೋದು ಆತಂಕ ಮೂಡಿಸಿದೆ.
ಕಳೆದ ಮೂರ್ನಾಲ್ಕು ದಿನಗಳ ಹಿಂದೆಯಷ್ಟೇ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 23 ಮಂದಿ ಕೊರೊನಾ ಸೋಂಕಿತರು ಆಕ್ಸಿಜನ್ ಕೊರತೆಯಿಂದ ಸಾವನ್ನಪ್ಪಿದ್ದರು. ಈ ಘಟನೆ ದೇಶದಾದ್ಯಂತ ಸಂಚಲನ ಮೂಡಿಸಿತ್ತು. ತಜ್ಞರ ತಂಡ ಆಸ್ಪತ್ರೆಗೆ ಭೇಟಿ ನೀಡಿ ಸಾವಿನ ಪ್ರಮಾಣ ಕಡಿಮೆ ಮಾಡುವ ನಿಟ್ಟಿನಲ್ಲಿ ಚಿಂತನೆ ನಡೆಸಿತ್ತು. ಆದರೆ ಸಾವಿನ ಸರಣಿ ಮಾತ್ರ ಮುಂದುವರಿದಿದೆ.
ಕೊರೊನಾ ಮೊದಲ ಅಲೆಯನ್ನು ಸಮರ್ಥವಾಗಿ ಎದುರಿಸಿದ್ದ ಚಾಮರಾಜನಗರ ಜಿಲ್ಲೆ ಇದೀಗ ಎರಡನೆ ಅಲೆಯಿಂದಾಗಿ ಸಂಪೂರ್ಣ ವಾಗಿ ತತ್ತರಿಸಿದೆ. ತಜ್ಞರ ತಂಡ ಮತ್ತೆ ಜಿಲ್ಲಾಸ್ಪತ್ರೆಗೆ ಭೇಟಿ ನೀಡುವ ಸಾಧ್ಯತೆಯಿದೆ.
