ಉಡುಪಿ : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಆದ್ರೆ ಸಿಎಂ ಬಿಎಸ್ ವೈ ಗೆ ಕೊರೊನಾ ಸೋಂಕು ಪತ್ತೆಯಾಗಿರೋದು ಕರಾವಳಿ ಭಾಗದ ಬಿಜೆಪಿ ನಾಯಕರಿಗೆ ಕೊರೊನಾತಂಕ ಶುರುವಾಗಿದೆ.

ಕಳೆದ ನಾಲ್ಕು ದಿನಗಳ ಹಿಂದೆಯಷ್ಟೇ ಉಡುಪಿಯ ಬಿಜೆಪಿಯ ನಾಯಕರು ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದರು. ಮೀನು ಕೃಷಿಕರ ದಿನಾಚರಣೆಯ ಅಂಗವಾಗಿ ಗೃಹ ಕಚೇರಿ ಕೃಷ್ಠಾದಲ್ಲಿ ಭೇಟಿ ಮಾಡಿದ್ದರು. ಅಲ್ಲದೇ ಮೀನು ಕೃಷಿಕರ ದಿನಾಚರಣೆ, ಮೀನುಗಾರಿಕಾ ಇಲಾಖೆಯ ಅಂಕಿ ಅಂಶಗಳ ಬಿಡುಗಡೆ ಹಾಗೂ ಮೀನುಗಾರಿಕೆಯ ವೇಳೆಯಲ್ಲಿ ಮೃತಪಟ್ಟ ಕುಟುಂಬಕ್ಕೆ ಪರಿಹಾರ ವಿತರಣಾ ಕಾರ್ಯಕ್ರಮದಲ್ಲಿ ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕರ ರಘುಪತಿ ಭಟ್, ಮೀನುಗಾರಿಕಾ ಫೇಡರೇಶನ್ ಅಧ್ಯಕ್ಷ ಯಶಪಾಲ್ ಸುವರ್ಣ ಅವರು ಪಾಲ್ಗೊಂಡಿದ್ದರ

ಜುಲೈ 30ರಂದು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದಿದ್ದು, ಕಾರ್ಯಕ್ರಮ ನಡೆದ ನಾಲ್ಕು ದಿನಗಳೊಳಗೆ ಸಿಎಂಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಸ್ವಯಂ ಪ್ರೇರಿತರಾಗಿ ಕ್ವಾರಂಟೈನ್ ಗೆ ಒಳಗಾಗಿ ಕೊರೊನಾ ತಪಾಸಣೆ ನಡೆಸುತ್ತಾರಾ ಅನ್ನೊದನ್ನು ಕಾದುನೋಡಬೇಕಿದೆ.