ಗುಪ್ತಚರ ಇಲಾಖೆ ಮಾಹಿತಿ ಹಿನ್ನೆಲೆ ಗಡಿಭಾಗದ ಭೇಟಿ ರದ್ದು ಪಡಿಸಿದ ಸಿಎಂ ಬೊಮ್ಮಾಯಿ

ಮಂಗಳೂರು : ಕೊರೊನಾ ವೈರಸ್‌ ಸೋಂಕಿನ ಹರಡುವಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಬಸವರಾಜ್‌ ಬೊಮ್ಮಾಯಿ ಅವರು ದಕ್ಷಿಣ ಕನ್ನಡ ಗಡಿಭಾಗದ ತಲಪಾಡಿಗೆ ಇಂದು ಭೇಟಿ ನೀಡಬೇಕಾಗಿತ್ತು. ಆದ್ರೆ ಗುಪ್ತಚರ ಇಲಾಖೆಯ ಮಾಹಿತಿಯ ಹಿನ್ನೆಲೆಯಲ್ಲಿ ಭೇಟಿಯನ್ನುಸಿಎಂ ದಿಢೀರ್‌ ರದ್ದು ಪಡಿಸಿದ್ದು, ನೇರವಾಗಿ ಬೆಂಗಳೂರಿಗೆ ತೆರಳಲಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗೆ ಎರಡು ದಿನಗಳ ಕಾಲ ಪ್ರವಾಸವನ್ನು ಕೈಗೊಂಡಿರುವ ಬಸವರಾಜ್‌ ಬೊಮ್ಮಾಯಿ ಅವರು ಇಂದು ಕೇರಳ – ಕರ್ನಾಟಕ ಗಡಿಭಾಗವಾದ ತಲಪಾಡಿಗೆ ಭೇಟಿ ನೀಡಿ ಚೆಕ್‌ಪೋಸ್ಟ್‌ ಪರಿಶೀಲನಾ ಕಾರ್ಯ ಮಾಡಲು ಫ್ಲ್ಯಾನ್‌ ಮಾಡಿಕೊಳ್ಳಲಾಗಿತ್ತು. ಆದರೆ ಗಡಿಭಾಗಕ್ಕೆ ಭೇಟಿ ನೀಡಿದ್ರೆ ಕೇರಳಿಗರಿಂದ ಪ್ರತಿಭಟನೆ ನಡೆಯುವ ಸಾಧ್ಯತೆಯ ಕುರಿತು ಗುಪ್ತಚರ ಇಲಾಖೆ ಮಾಹಿತಿಯನ್ನು ನೀಡಿದೆ. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ರದ್ದುಪಡಿಸಿದ್ದಾರೆ.

ನಿನ್ನೆಯಷ್ಟೇ ಸಿಎಂ ಬೊಮ್ಮಾಯಿ ಅವರು ಕೊರೊನಾ ನಿಯಂತ್ರಣ ಮಾಡುವಲ್ಲಿ ವಿಫಲವಾಗಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅಲ್ಲದೇ ಹೆಚ್ಚುತ್ತಿರುವ ಕೊರೊನಾ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳುವಂತೆಯೂ ಸೂಚನೆಯನ್ನು ನೀಡಿದ್ದಾರೆ.

Comments are closed.