Corona Report : ಕರಾವಳಿಯಲ್ಲಿ ಕೊರೊನಾ ಮೂರನೇ ಅಲೆ…!!! ಬೆಂಗಳೂರನ್ನೇ ಹಿಂದಿಕ್ಕಿದ ದಕ್ಷಿಣ ಕನ್ನಡ

ಮಂಗಳೂರು : ಕೊರೊನಾ ವೈರಸ್‌ ಸೋಂಕಿನ ಅಬ್ಬರ ಕರಾವಳಿಯಲ್ಲಿ ಹೆಚ್ಚುತ್ತಿದೆ. ಅದ್ರಲ್ಲೂ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಸೋಂಕಿತ ರ ಪ್ರಮಾಣದಲ್ಲಿ ಭಾರಿ ಏರಿಕೆ ಕಂಡಿದೆ. ಅದ್ರಲ್ಲೂ ದಕ್ಷಿಣ ಕನ್ನಡ ಸೋಂಕಿತರ ಸಂಖ್ಯೆಯಲ್ಲಿ ಬೆಂಗಳೂರನ್ನೇ ಹಿಂದಿಕ್ಕಿದೆ.

ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 1875 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆಯ 29,06,999ಕ್ಕೆ ಏರಿಕೆಯನ್ನು ಕಂಡಿದೆ. ಅಲ್ಲದೇ ಒಂದೇ ದಿನ 25 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.

ರಾಜ್ಯದಲ್ಲಿಯೇ ಕರಾವಳಿ ಜಿಲ್ಲೆ ಕೊರೊನಾ ಹಾಟ್‌ಸ್ಪಾಟ್‌ ಆಗಿ ಮಾರ್ಪಟ್ಟಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ದಿನೇ ದಿನೇ ಹೆಚ್ಚಳವಾಗುತ್ತಿದೆ. ಜಿಲ್ಲೆಯಲ್ಲಿ ಒಂದೇ ದಿನ ಬರೋಬ್ಬರಿ 410 ಪ್ರಕರಣ ಪತ್ತೆಯಾಗಿದೆ. ಅಲ್ಲದೇ ಉಡುಪಿಯಲ್ಲಿಯೂ 162 ಮಂದಿಗೆ ಸೋಂಕು ದೃಢಪಟ್ಟಿದೆ. ಇನ್ನು ಉತ್ತರ ಕನ್ನಡ ಜಿಲ್ಲೆಯಲ್ಲಿಯೂ ಸೋಂಕಿತರ ಸಂಖ್ಯೆ ಯಲ್ಲಿ ಸೋಂಕು ಏರಿಕೆ ಕಾಣುತ್ತಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದುವರೆಗೆ 1,00,780 ಮಂದಿ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಜಿಲ್ಲೆಯಲ್ಲಿ ದಿನೇ ದಿನೇ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯನ್ನು ಕಾಣುತ್ತಿದ್ದು, 2943 ಸಕ್ರೀಯ ಪ್ರಕರಣಗಳಿವೆ. ಅಲ್ಲದೇ ಜಿಲ್ಲೆಯಲ್ಲಿ ಸೋಂಕಿತರ ಮರಣ ಪ್ರಮಾಣವೂ ನಿಯಂತ್ರಣಕ್ಕೆ ಬರುತ್ತಿಲ್ಲ. ಅಲ್ಲದೇ ಉಡುಪಿ ಜಿಲ್ಲೆಯಲ್ಲಿ ಇದುವರೆಗೆ 69,841 ಮಂದಿ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಜಿಲ್ಲೆಯಲ್ಲಿ 1425 ಸಕ್ರೀಯ ಪ್ರಕರಣಗಳಿದ್ದರೆ, ಉತ್ತರ ಕನ್ನಡ ಜಿಲ್ಲೆಯಲ್ಲಿ ಇದುವರೆಗೆ 52,467 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, 713 ಸಕ್ರೀಯ ಪ್ರಕರಣಗಳಿವೆ.

ಕರಾವಳಿ ಜಿಲ್ಲೆಗಳಲ್ಲಿ ಕೊರೊನಾ ಸೋಂಕು ದಿನೇ ದಿನೇ ಹೆಚ್ಚಳವಾಗುತ್ತಿರುವುದು ಆತಂಕವನ್ನು ಮೂಡಿಸಿದೆ. ಅದ್ರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯಲ್ಲೀಗ ರಾಜ್ಯದಲ್ಲಿಯೇ ಅತೀ ಹೆಚ್ಚು ಸಂಖ್ಯೆಯಲ್ಲಿ ಸೋಂಕಿತರು ಪತ್ತೆಯಾಗುತ್ತಿದ್ದಾರೆ. ಇನ್ನೊಂದೆಡೆ ಕೇರಳದಲ್ಲಿ ಸೋಂಕು ವ್ಯಾಪಿಸುತ್ತಿರುವುದು ಆರೋಗ್ಯ ಇಲಾಖೆಗೆ ತಲೆನೋವು ತರಿಸಿದೆ.

Comments are closed.