ಕೊರೊನಾಗೆ ಟ್ರಾಫಿಕ್ ASI ಬಲಿ : ಇನ್ನೋರ್ವ ಎಎಸ್ಐಗೂ ಸೋಂಕು, ಆತಂಕದಲ್ಲಿ ಪೊಲೀಸರು

0

ಬೆಂಗಳೂರು : ನಿವೃತ್ತಿಯಂಚಿನಲ್ಲಿದ್ದ ಇಬ್ಬರು ಎಎಸ್ಐಗಳಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಓರ್ವ ಎಎಸ್ಐ ಸಾವನ್ನಪ್ಪಿದ್ರೆ, ಮತ್ತೋರ್ವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಂದೇ ಠಾಣೆಯ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಸೋಂಕು ಕಾಣಿಸಿಕೊಂಡ ಬೆನ್ನಲ್ಲೇ ಸಿಬ್ಬಂಧಿಗಳಿಗೆ ಆತಂಕ ಶುರುವಾಗಿದೆ.

ಬೆಂಗಳೂರು ನಗರದ ವಿವಿ ಪುರಂ ಠಾಣೆಯ ಟ್ರಾಫಿಕ್ ಎಎಸ್ಐ ಥಣಿಸಂದ್ರದ ಮನೆಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪದ್ದರು. ಎಎಸ್ಐ ಅವರ ಗಂಟಲು ದ್ರವದ ಮಾದರಿಯನ್ನು ಕೊರೊನಾ ಟೆಸ್ಟ್ ಮಾಡಿಸಿದ ವೇಳೆಯಲ್ಲಿ ಕೊರೊನಾ ಪಾಸಿಟಿವ್ ವರದಿ ಬಂದಿತ್ತು. ಎಎಸ್ಐ ಜೂನ್ 30ರಂದು ನಿವೃತ್ತರಾಗುವವರಿದ್ದರು. ಕಳೆದ ಹಲವು ದಿನಗಳಿಂದಲೂ ಕಂಟೈನ್ಮೆಂಟ್ ಝೋನ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಸೋಂಕು ಹರಡಿರುವ ಸಾಧ್ಯತೆಯಿದೆ. ಎಎಸ್ಐಗೆ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದೆ.

ಇತ್ತ ಎಎಸ್ ಐ ಕಾರ್ಯನಿರ್ವಹಿಸುತ್ತಿದ್ದ ವಿವಿಪುರಂ ಠಾಣೆಯ ಮತ್ತೋರ್ವ ಎಎಸ್ಐಗೂ ಕೊರೊನಾ ಸೋಂಕು ದೃಢಪಟ್ಟಿದೆ. ಕಳೆದ ಮೂರ್ನಾಲ್ಕು ದಿನಗಳಿಂದಲೂ 59 ವರ್ಷದ ಎಎಸ್ಐ ಶೀತ, ಜ್ವರ, ನೆಗಡಿಯಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಜೂನ್ 14ರಂದು ಗಂಟಲು ದ್ರವದ ಮಾದರಿಯನ್ನು ತಪಾಸಣೆಗೆ ಒಳಪಡಿಸಲಾಗಿತ್ತು. ವರದಿಯಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

ಒಂದೇ ಪೊಲೀಸ್ ಠಾಣೆಯ ಇಬ್ಬರು ಎಎಸ್ಐಗಳಿಗೆ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಠಾಣೆಯನ್ನು ಸೀಲ್ ಡೌನ್ ಮಾಡಿ, ಸ್ಯಾನಿಟೈಸ್ ಮಾಡಲಾಗಿದೆ.

ಆದರೆ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂಧಿಗಳಿಗೆ ಇದೀಗ ಆತಂಕ ಶುರುವಾಗಿದೆ. ಇನ್ನು ಠಾಣೆಗೆ ಭೇಟಿ ನೀಡಿರುವವರ ಮಾಹಿತಿಯನ್ನು ಕಲೆ ಹಾಕಲಾಗುತ್ತಿದ್ದು, ಎಎಸ್ಐ ಜೊತೆಗೆ ಪ್ರಾಥಮಿಕ ಸಂಪರ್ಕದಲ್ಲಿದ್ದವರ ವಿವರ ಸಂಗ್ರಹಿಸಲಾಗುತ್ತಿದೆ.

Leave A Reply

Your email address will not be published.