CORONA BIG BLAST : ಬೆಂಗಳೂರು 783, ದ.ಕ. 97 : ರಾಜ್ಯದಲ್ಲಿಂದು 1267 ಮಂದಿಗೆ ಕೊರೊನಾ ಸೋಂಕು

0

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಮಹಾಸ್ಪೋಟ ಸಂಭವಿಸಿದೆ. ಬೆಂಗಳೂರಲ್ಲಿ ಒಂದೇ ದಿನ ಬರೋಬ್ಬರಿ 783 ಮಂದಿಗೆ ಸೋಂಕು ಕಾಣಿಸಿಕೊಂಡಿದ್ರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 97 ಮಂದಿಗೆ ಸೋಂಕು ದೃಢಪಟ್ಟಿದೆ. ರಾಜ್ಯದಲ್ಲಿಂದು ಒಂದೇ ದಿನ ಬರೋಬ್ಬರಿ 1267 ಮಂದಿಗೆ ಕೊರೊನಾ ಸೋಂಕು ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 13,190ಕ್ಕೆ ಏರಿಕೆಯನ್ನು ಕಂಡಿದೆ.

ಸಿಲಿಕಾನ್ ಸಿಟಿ ಬೆಂಗಳೂರಿಗೆ ಕೊರೊನಾ ವೈರಸ್ ಸೋಂಕು ಬಿಗ್ ಶಾಕ್ ಕೊಟ್ಟಿದೆ. ಇಂದು ಒಂದೇ ದಿನ ದಾಖಲೆಯ ಪ್ರಮಾಣದಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಬೆಂಗಳೂರಲ್ಲಿಂದು ಬರೊಬ್ಬರಿ 783 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಕೊರೊನಾ ಸೋಂಕಿತರ ಸಂಖ್ಯೆ 3314ಕ್ಕೆ ಏರಿಕೆಯನ್ನು ಕಂಡಿದೆ. ಮಾತ್ರವಲ್ಲ ಕೊರೊನಾ ಮಹಾಮಾರಿಗೆ ಬಲಿಯಾಗುವವರ ಸಂಖ್ಯೆಯಲ್ಲಿಯೂ ಏರಿಕೆಯಾಗಿದ್ದು, ಸಿಲಿಕಾನ್ ಸಿಟಿಯಲ್ಲಿ ಇದುವರೆಗೆ 88 ಮಂದಿ ಸಾವನ್ನಪ್ಪಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಮಹಾಮಾರಿ ಇಂದು ಆರ್ಭಟಿಸಿದೆ. ಜಿಲ್ಲೆಯಲ್ಲಿಂದು ಬರೋಬ್ಬರಿ 97 ಮಂದಿಗೆ ಸೋಂಕು ಕಾಣಿಸಿಕೊಳ್ಳುವ ಮೂಲಕ ಹೊಸ ದಾಖಲೆಯನ್ನು ಬರೆದಿದೆ. ಜಿಲ್ಲೆಯಲ್ಲಿ ಕಳೆದೊಂದು ಹತ್ತು ದಿನಗಳಿಂದಲೂ ಸೋಂಕಿತ ಸಂಖ್ಯೆಯಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆಯನ್ನು ಕಾಣುತ್ತಿದ್ದು, ಇದೀಗ ಕೊರೊನಾ ಪೀಡಿತರ ಸಂಖ್ಯೆ 697ಕ್ಕೆ ಏರಿಕೆಯಾಗಿದೆ. ಅಲ್ಲದೇ ಇಂದು ಒಂದೇ ದಿನ ಕೊರೊನಾ ಸೋಂಕಿನಿಂದ ಜಿಲ್ಲೆಯಲ್ಲಿ ಮೂವರು ಸಾವನ್ನಪ್ಪಿದ್ದು ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 13ಕ್ಕೆ ಏರಿಕೆಯನ್ನು ಕಂಡಿದೆ. ಇನ್ನು ಉಡುಪಿ ಜಿಲ್ಲೆಗೂ ಕೊರೊನಾ ಸೋಂಕು ಶಾಕ್ ಕೊಟ್ಟಿದೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯನ್ನು ಕಾಣುತ್ತಿದ್ದು, ಇಂದು 40 ಮಂದಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1179ಕ್ಕೆ ಏರಿಕೆಯನ್ನು ಕಂಡಿದೆ.

ಬಳ್ಳಾರಿ ಜಿಲ್ಲೆಗೆ ಜಿಂದಾಲ್ ಕೊರೊನಾ ಹಾಟ್ ಸ್ಪಾಟ್ ಆಗಿ ಮಾರ್ಪಟ್ಟಿದೆ. ಇಂದು ಬಳ್ಳಾರಿ ಜಿಲ್ಲೆಯಲ್ಲಿ ಬರೋಬ್ಬರಿ 71 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 697ಕ್ಕೆ ಏರಿಕೆಯಾಗಿದೆ. ಉಳಿದಂತೆ ಕಲಬುರಗಿ 34, ಹಾಸನ 31, ಗದಗ 30, ಬೆಂಗಳೂರು ಗ್ರಾಮಾಂತರ 27, ಧಾರವಾಡ 18, ಮೈಸೂರು 18, ಬಾಗಲಕೋಟೆ 17, ಉತ್ತರ ಕನ್ನಡ 14, ಹಾವೇರಿ 12, ಕೋಲಾರ 11, ಬೆಳಗಾವಿ 8, ಬೀದರ್ 7, ಚಿತ್ರದುರ್ಗ 7, ರಾಯಚೂರು 6, ಮಂಡ್ಯ 6, ದಾವಣಗೆರೆ 5, ವಿಜಯಪುರ 5, ಶಿವಮೊಗ್ಗ 4, ಚಿಕ್ಕಬಳ್ಳಾಪುರ, ಕೊಪ್ಪಳ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಯಲ್ಲಿ ತಲಾ 3 ಪ್ರಕರಣ ಪತ್ತೆಯಾಗಿದ್ರೆ, ತುಮಕೂರು 2 ಹಾಗೂ ಯಾದಗಿರಿ ಜಿಲ್ಲೆಯಲ್ಲಿ ಒಂದು ಪ್ರಕರಣ ದಾಖಲಾಗಿದೆ.

Leave A Reply

Your email address will not be published.