ಕರುನಾಡಲ್ಲಿ ಕೊರೊನಾರ್ಭಟ : 75 ಸಾವಿರಕ್ಕೇರಿದ ಸೋಂಕಿತರ ಸಂಖ್ಯೆ

0

ಬೆಂಗಳೂರು : ಕರ್ನಾಟಕದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಮುಂದುವರಿದಿದೆ. ದಿನೇ ದಿನೇ ಸೋಂಕಿತರ ಸಂಖ್ಯೆಯಲ್ಲಿ ಬಾರೀ ಪ್ರಮಾಣದಲ್ಲಿ ಏರಿಕೆಯನ್ನು ಕಾಣುತ್ತಿದೆ. ಸೋಂಕಿತರ ಸಂಖ್ಯೆ ಬರೋಬ್ಬರಿ 75 ಸಾವಿರಕ್ಕೆ ಏರಿಕೆಯಾಗಿದ್ದರೆ. ಮಹಾಮಾರಿ 1,519 ಮಂದಿಯನ್ನು ಬಲಿ ಪಡೆದಿದೆ.

ಕೊರೊನಾ ವೈರಸ್ ಸೋಂಕು ಸದ್ಯಕ್ಕೆ ಮುಗಿಯುವ ಲಕ್ಷಣಗಳು ಗೋಚರಿಸುತ್ತಿಲ್ಲ. ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳು ಕೊರೊನಾ ಮಹಾಮಾರಿಯ ರುದ್ರನರ್ತನಕ್ಕೆ ತತ್ತರಿಸಿ ಹೋಗಿವೆ. ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಕನಿಷ್ಠ 2 ಸಾವಿರಕ್ಕೂ ಅಧಿಕ ಮಂದಿ ಕೊರೊನಾ ಸೋಂಕಿಗೆ ತುತ್ತಾಗುತ್ತಿದ್ದಾರೆ.

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 75,833ಕ್ಕೆ ಏರಿಕೆಯಾಗಿದೆ. ಇದುವರೆಗೆ ಸೋಂಕಿಗೆ ತುತ್ತಾಗಿದ್ದರ ಪೈಕಿ 27,239 ಮಂದಿ ಸೋಂಕಿನಿಂದ ಗುಣಮುಖರಾಗಿ ಮನೆ ಸೇರಿದ್ದಾರೆ. ಉಳಿದಂತೆ 47,069 ಮಂದಿ ಇಂದಿಗೂ ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

ಸಿಲಿಕಾನ್ ಸಿಟಿ ಬೆಂಗಳೂರಲ್ಲಿ 36,993 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ರೆ, ದಕ್ಷಿಣ ಕನ್ನಡ ಜಿಲ್ಲೆ ಸೋಂಕಿತರ ಸಂಖ್ಯೆಯಲ್ಲಿ 2ನೇ ಸ್ಥಾನದಲ್ಲಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,991ಕ್ಕೆ ಏರಿಕೆಯಾಗಿದೆ. ಉಳಿದಂತೆ ಬಳ್ಳಾರಿ, ಉಡುಪಿ, ಕಲಬುರಗಿ, ಧಾರವಾಡ,ಮೈಸೂರು, ಬೀದರ್ ಜಿಲ್ಲೆಗಳಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಕೊರೊನಾ ಸೋಂಕಿತರಿದ್ದಾರೆ. ಇನ್ನು ಬೆಳಗಾವಿ, ಬೆಂಗಳೂರು ಗ್ರಾಮಾಂತರ, ರಾಯಚೂರು, ಚಿಕ್ಕಬಳ್ಳಾಪುರ, ದಾವಣಗೆರೆ, ಹಾಸನ, ಉತ್ತರ ಕನ್ನಡ, ವಿಜಯಪುರ, ಯಾದಗಿರಿ, ಹಾಸನ, ವಿಜಯಪುರ ಜಿಲ್ಲೆಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಸಾವಿರದ ಗಡಿ ದಾಟಿದೆ.

ಇನ್ನು ರಾಜ್ಯದಲ್ಲಿ ಕೊರೊನಾ ಸೋಂಕಿನ ಮೃತಪಟ್ಟವರ ಸಂಖ್ಯೆಯಲ್ಲಿಯೂ ಬಾರೀ ಏರಿಕೆಯನ್ನು ಕಾಣುತ್ತಿದೆ. ರಾಜ್ಯದಲ್ಲಿ ಒಟ್ಟು 1,519 ಮಂದಿ ಇದುವರೆಗೆ ಕೊರೊನಾ ಸೋಂಕಿ ಬಲಿಯಾಗಿದ್ದಾರೆ. ನಿತ್ಯವೂ 50ಕ್ಕೂ ಅಧಿಕ ಮಂದಿ ಕೊರೊನಾ ಸೋಂಕಿನಿಂದ ಸಾವನ್ನಪ್ಪುತ್ತಿರುವುದು ಆತಂಕವನ್ನು ಮೂಡಿಸಿದೆ. ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಅತೀ ಹೆಚ್ಚು ಸಂಖ್ಯೆಯಲ್ಲಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.

ಬೆಂಗಳೂರಲ್ಲಿ 735, ಮೈಸೂರು 85, ಧಾರವಾಡ 78, ದಕ್ಷಿಣ ಕನ್ನಡ 75, ಬೀದರ್ 66, ಬಳ್ಳಾರಿ 62, ಕಲಬುರಗಿ 49, ಬಾಗಲಕೋಟೆ 36, ಹಾಸನ 33, ಬೆಳಗಾವಿ 30, ದಾವಣಗೆರೆ 30, ತುಮಕೂರು 28, ವಿಜಯಪುರ 23 ಮಂದಿ ಸೇರಿದಂತೆ ರಾಜ್ಯದ ಪ್ರತೀ ಜಿಲ್ಲೆಯಲ್ಲಿಯೂ ಕೊರೊನಾ ಸೋಂಕಿಗೆ ಜನರು ಬಲಿಯಾಗಿದ್ದಾರೆ.

ಭಾರತದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಎಂದಿನಂತೆಯೇ ಮುಂದುವರೆದಿದೆ. ಇದುವರೆಗೂ ದೇಶದಲ್ಲಿ ಸೋಂಕಿತರ ಸಂಖ್ಯೆ 1192915ಕ್ಕೆ ಏರಿಕೆಯಾಗಿದೆ. ಡೆಡ್ಲಿ ಕೊರೋನಾ ವೈರಸ್​ನಿಂದ ಮೃತಪಟ್ಟವರ ಸಂಖ್ಯೆ 28732 ಆಗಿದೆ.ಕೊರೊನಾ ವೈರಸ್ ಸೋಂಕು ದಿನೇ ದಿನೇ ಏರಿಕೆಯಾಗುತ್ತಿರುವುದು ಆತಂಕವನ್ನು ಮೂಡಿಸುತ್ತಿದೆ. ಮುಂದಿನ ದಿನಗಳಲ್ಲಿ ಬಾರೀ ಪ್ರಮಾಣದಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗಲಿದೆಯೆಂಬ ಆಘಾತಕಾರಿ ಮಾಹಿತಿಯನ್ನು ತಜ್ಞರು ನೀಡಿದ್ದಾರೆ.

Leave A Reply

Your email address will not be published.