ಬೆಂಗಳೂರು : ಕೊರೊನಾ ವೈರಸ್ ಸೋಂಕಿತರ ಪ್ರಮಾಣ ದಿನೇ ದಿನೇ ಹೆಚ್ಚಳವಾಗುತ್ತಿದೆ. ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 8865 ಹೊಸ ಕರೊನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 3,70,206ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇದೀಗ 4 ಲಕ್ಷ ಅಂಚಿಗೆ ಬಂದು ನಿಂತಿದ್ದು, ಮೂರ್ನಾಲ್ಕು ದಿನಗಳಲ್ಲಿ ಸೋಂಕಿತರ ಸಂಖ್ಯೆ 4 ಲಕ್ಷದ ಗಡಿದಾಟಲಿದೆ. ಕೊರೊನಾ ಸೋಂಕಿಗೆ ತುತ್ತಾಗಿರುವವರ ಪೈಕಿ ಈಗಾಗಲೇ 2,68,035 ಮಂದಿ ಗುಣಮುಖರಾಗಿದ್ದಾರೆ.

ರಾಜ್ಯದಲ್ಲೀಗ 96,098 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಅಲ್ಲದೇ ಇದುವರೆಗೆ ಮಹಾಮಾರಿ ಕೊರೊನಾ 6,054 ಮಂದಿಯನ್ನು ಬಲಿ ಪಡೆದಿದೆ.

