ಬೆಂಗಳೂರಲ್ಲಿ ಕೊರೊನಾ ಸೋಂಕಿಗೆ ASI ಸಾವು

0

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಆರ್ಭಟ ಹೆಚ್ಚಾಗಿದ್ದು, ಬೆಂಗಳೂರಲ್ಲಿಂದು ಪೊಲೀಸ್ ಅಧಿಕಾರಿಯೋರ್ವರನ್ನು ಕೊರೊನಾ ಸೋಂಕು ಬಲಿ ಪಡೆದಿದೆ. ಈ ಮೂಲಕ ನಗರದಲ್ಲಿ ನಗರದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ.

ಕೊರೊನಾ ವಾರಿಯರ್ಸ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಪೊಲೀಸರನ್ನು ಕೊರೊನಾ ಮಹಾಮಾರಿ ಕಾಡುತ್ತಿದೆ. ಬೆಂಗಳೂರಲ್ಲಿ 324ಕ್ಕೂ ಅಧಿಕ ಪೊಲೀಸರು ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಹೆಮ್ಮಾರಿ ಕೊರೊನಾ ಮರಣ ಮೃದಂಗವನ್ನೇ ಬಾರಿಸುತ್ತಿದೆ.

ವಿಧಾನಸೌಧದ ಭದ್ರತಾ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಎಸ್​ಐಗೆ ಕೊರೋನಾ ಸೋಂಕು ಕಾಣಿಸಿಕೊಂಡಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಈ ಮೂಲಕ ಪೊಲೀಸರಿಗೆ ಕೊರೊನಾ ಆತಂಕ ಶುರುವಾಗಿದೆ.

Leave A Reply

Your email address will not be published.