ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಮಹಾಮಾರಿಗೆ ಮೊದಲ ಬಲಿಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮೂಲದ 50 ವರ್ಷದ ಮಹಿಳೆ ಉಸಿರಾಟದ ಸಮಸ್ಯೆಯಿಂದ ಸಾವನ್ನಪ್ಪಿದ್ದು, ವೈದ್ಯಕೀಯ ವರದಿಯಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಹೀಗಾಗಿ ಕರಾವಳಿಯಾದ್ಯಂತ ಆತಂಕ ಶುರುವಾಗಿದೆ.

ಮಹಿಳೆಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಂಗಳೂರಿನ ವೆನ್ಲಾಕ್ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಿನ್ನೆಯೇ ಶಂಕಿತ ಕೊರೊನಾ ಲಕ್ಷಣ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಹಿಳೆಯ ಗಂಟಲಿನ ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು.

ಆದ್ರೆ ಇಂದು ಬೆಳಗ್ಗೆ ಮಹಿಳೆ ತೀವ್ರ ಉಸಿರಾಟದ ಸಮಸ್ಯೆಯಿಂದ ಸಾವನ್ನಪ್ಪಿದ್ದಾರೆ. ಇದೀಗ ಮಹಿಳೆಯ ಕೊರೊನಾ ವರದಿ ಕೈ ಸೇರಿದ್ದು, ವರದಿಯಲ್ಲಿ ಕೊರೊನಾ ಪಾಸಿಟಿವ್ ಬಂದಿದೆ.

ಹೀಗಾಗಿ ಜಿಲ್ಲಾಡಳಿತ ಮುನ್ನೆಚ್ಚರಿಕೆಯನ್ನು ಕೈಗೊಂಡು ಮರಣೋತ್ತರ ಪರೀಕ್ಷೆ ನಡೆಸಲು ಮುಂದಾಗಿದೆ. ಅಲ್ಲದೇ ಜಿಲ್ಲೆಯಾದ್ಯಂತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ.