ದ.ಕ, ಉಡುಪಿಯಲ್ಲಿ ನಿಯಂತ್ರಣಕ್ಕೆ ಬರ್ತಿಲ್ಲಾ ಕೊರೊನಾ : ಈ ನಿಯಮಗಳನ್ನು ಪಾಲಿಸಿ ಅಂತಿದೆ ಆರೋಗ್ಯ ಇಲಾಖೆ

ಬೆಂಗಳೂರು : ರಾಜ್ಯದ ಗಡಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಕೊರೊನಾ ವೈರಸ್‌ ಸೋಂಕು ನಿಯಂತ್ರಣಕ್ಕೆ ಬರುತ್ತಿಲ್ಲ. ಅದ್ರಲ್ಲೂ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಆರೋಗ್ಯ ಇಲಾಖೆ ಖಡಕ್‌ ಸಂದೇಶ ರವಾನಿಸಿದ್ದು, ಹಲವು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಿದೆ.

ಪ್ರಮುಖವಾಗಿ ಕೊರೊನಾ ವೈರಸ್‌ ಸೋಂಕಿನ ಪ್ರಮಾಣ ಶೇ. 3ಕ್ಕಿಂತ ಹೆಚ್ಚಿರುವ ಜಿಲ್ಲೆಗಳಲ್ಲಿ ಈಗಾಗಲೇ ವೀಕೆಂಡ್‌ ಲಾಕ್‌ಡೌನ್‌ ಜಾರಿ ಮಾಡಲಾಗಿದೆ. ಜಿಲ್ಲೆಯ ಗಡಿಗಳನ್ನು ಬಂದ್‌ ಮಾಡಲಾಗಿದ್ದು, ಕೊರೊನಾ ಸೋಂಕಿನ ಪತ್ತೆ ಕಾರ್ಯವನ್ನು ಪರಿಣಾಮಕಾರಿಯಾಗಿ ಮಾಡಲಾಗುತ್ತಿದೆ. ಇದೀಗ ಕೊರೊನಾ ಸೋಂಕು ಪತ್ತೆಯಾದ್ರೆ ಕನಿಷ್ಠ 20 ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರನ್ನು ಪತ್ತೆ ಹಚ್ಚಿ ಕೊರೊನಾ ತಪಾಸಣೆಗೆ ಒಳಪಡಿಸುವಂತೆ ಸೂಚನೆಯನ್ನು ನೀಡಲಾಗಿದೆ.

ಕೋವಿಡ್‌ ಟೆಸ್ಟ್‌ ಪ್ರಮಾಣವು ಶೇ. 2ಕ್ಕಿಂತ ಹೆಚ್ಚಾಗಿರುವ ಜಿಲ್ಲೆಗಳಲ್ಲಿ ಆಸ್ಪತ್ರೆಗೆ ನಿತ್ಯವೂ ದಾಖಲಾಗುವ ಸೋಂಕಿತರ ಸಂಖ್ಯೆಯ ಆಧಾರದ ಮೇಲೆ ಅಗತ್ಯವಿರುವ ಬೆಡ್‌, ಆಕ್ಸಿಜನ್‌ ಬೆಡ್‌, ಐಸಿಯು ಬೆಡ್‌ಗಳ ಲಭ್ಯತೆಯನ್ನು ಖಚಿತ ಪಡಿಸಿಕೊಳ್ಳುವಂತೆ ಜಿಲ್ಲಾಡಳಿತಗಳಿಗೆ ಸೂಚಿಸಲಾಗಿದೆ.

ಕೊರೊನಾ ನಿಯಂತ್ರಣದ ನಿಟ್ಟಿನಲ್ಲಿ ಈಗಾಗಲೇ ರಚನೆಯಾಗಿರುವ ಕೋವಿಡ್‌ ತಾಂತ್ರಿಕ ಸಮಿತಿಯ ಸಭೆಯನ್ನು ಕನಿಷ್ಠ ಒಂದು ವಾರಕ್ಕೊಮ್ಮೆಯಾದ್ರೂ ನಡೆಸಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚೆಯನ್ನು ನಡೆಸುವಂತೆ ಹೇಳಲಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲೀಗ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುತ್ತಿಲ್ಲ. ಅದ್ರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾಜ್ಯದಲ್ಲಿಯೇ ಅತೀ ಹೆಚ್ಚು ಪ್ರಮಾಣದಲ್ಲಿ ಸೋಂಕಿತರು ಪತ್ತೆಯಾಗುತ್ತಿರೋದು ಮೂರನೇ ಅಲೆಯ ಆತಂಕವನ್ನು ಹೆಚ್ಚಿಸಿದೆ.

ಇದನ್ನೂ ಓದಿ : Bengaluru Corona : ‘ವೈದ್ಯರ ನಡೆ ಮನೆ ಬಾಗಿಲಿನ ಕಡೆ” ; ಸಿಲಿಕಾನ್‌ ಸಿಟಿಯಲ್ಲಿ ಹೊಸ ಅಭಿಯಾನಕ್ಕೆ ಚಾಲನೆ

ಇದನ್ನೂ ಓದಿ : Covid Report : ಕೇರಳಿಗರಿಗೆ ಕೊರೊನಾ ಟೆಸ್ಟ್‌ ರಿಪೋರ್ಟ್‌ ಕಡ್ಡಾಯ : ಕೇಂದ್ರ, ರಾಜ್ಯ ಸರಕಾರಗಳಿಗೆ ಕೇರಳ ಹೈಕೋರ್ಟ್‌ ನೋಟಿಸ್‌

ಇದನ್ನೂ ಓದಿ : Kerala Corona : ಕೇರಳದಲ್ಲಿ ಹೆಚ್ಚುತ್ತಿದೆ ಹೆಮ್ಮಾರಿ : ಲಸಿಕೆ ಪಡೆದ 40 ಸಾವಿರ ಮಂದಿಗೆ ಸೋಂಕು

Comments are closed.