ರಾಜ್ಯದಲ್ಲಿ 10,000 ಗಡಿದಾಟಿದ ಕೊರೊನಾ ಸೋಂಕು : ಜುಲೈ, ಅಗಸ್ಟ್ ನಲ್ಲಿ ಹೆಚ್ಚುತ್ತಂತೆ ಮಹಾಮಾರಿ ಆರ್ಭಟ

0

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕು ತನ್ನ ಹರಡುವ ವೇಗವನ್ನು ದಿನೇ ದಿನೇ ಹೆಚ್ಚಿಸಿಕೊಳ್ಳುತ್ತಿದ್ದು, ರಾಜ್ಯದಲ್ಲಿ ಕೊರೊನಾ ಸೋಂಕಿತ ಸಂಖ್ಯೆ 10,000 ಗಡಿದಾಟಿದೆ. ಮಹಾಮಾರಿ ಜುಲೈ ಮತ್ತು ಅಗಸ್ಟ್ ತಿಂಗಳಲ್ಲಿ ತನ್ನ ಆರ್ಭಟವನ್ನು ಇನ್ನಷ್ಟು ಹೆಚ್ಚಿಸಲಿದೆ ಅನ್ನುವ ಮಾಹಿತಿ ಹೊರಬಿದ್ದಿದೆ.

ಕಳೆದ 24 ಗಂಟೆ ಅವಧಿಯಲ್ಲಿ ರಾಜ್ಯಾದ್ಯಂತ 394 ಹೊಸ ಪ್ರಕರಣಗಳು ದಾಖಲಾಗಿದ್ದು, ಒಂದೇ ದಿನ ಬರೋಬ್ಬರಿ 14 ಜನರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಒಂದೆಡೆ ಕೊರೊನಾ ಸೋಂಕು ಹೆಚ್ಚುತ್ತಿದ್ರೆ, ಇನ್ನೊಂದೆಡೆ ಮಹಾಮಾರಿಗೆ ಬಲಿಯಾಗುತ್ತಿರುವವರ ಸಂಖ್ಯೆಯಲ್ಲಿಯೂ ಗಣನೀಯ ಪ್ರಮಾಣದಲ್ಲಿ ಏರಿಕೆಯನ್ನು ಕಾಣುತ್ತಿದೆ. ರಾಜ್ಯದಲ್ಲಿ ಒಟ್ಟು 10,118 ಮಂದಿಗೆ ಕೊರೊನಾ ಸೊಂಕು ದೃಢಪಟ್ಟಿದ್ದು, ಇದುವರೆಗೆ 164 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟು 3,799 ಮಂದಿ ಕೊರೊನಾ ಸೋಂಕಿನಿಂದಾಗಿ ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿಯೇ ಕೊರೊನಾ ಸೊಂಕಿತರ ಸಂಖ್ಯೆಯಲ್ಲಿ ಗಣನೀಯ ಪ್ರಮಾಣದಲ್ಲಿ ಏರಿಕೆಯನ್ನು ಕಾಣುತ್ತಿದೆ. ನಿನ್ನೆಯಷ್ಟೇ ಬೆಂಗಳೂರಲ್ಲಿ 173 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಅಲ್ಲದೇ ಸಾವನ್ನಪ್ಪಿದವರ ಸಂಖ್ಯೆಯೂ 78ಕ್ಕೆ ಏರಿಕೆಯಾಗಿದೆ. ಬೆಂಗಳೂರಲ್ಲಿ ಹೆಮ್ಮಾರಿ ಇನ್ನಷ್ಟು ವೇಗವಾಗಿ ಹರಡುವ ಆತಂಕವೂ ಎದುರಾಗಿದೆ.

ಅದ್ರಲ್ಲೂ ಕೊರೊನಾ ಸೋಂಕು ಸಮುದಾಯಕ್ಕೆ ಹರಡಿದೆ ಅನ್ನುವ ಮಾತುಗಳು ಕೇಳಿಬರುತ್ತಿರುವ ನಡುವಲ್ಲೇ ಜುಲೈ ಹಾಗೂ ಅಗಸ್ಟ್ ತಿಂಗಳಿನಲ್ಲಿ ಕೊರೊನಾ ಸೋಂಕು ಇನ್ನಷ್ಟು ತೀವ್ರವಾಗಿ ಹರಡುತ್ತದೆ ಅನ್ನುವ ಮಾತುಗಳು ಕೇಳಿಬರುತ್ತಿವೆ.

Leave A Reply

Your email address will not be published.