Corona in india: ಭಾರತದಲ್ಲಿ ಕೊರೊನಾ ಆತಂಕ : ಆರೋಗ್ಯ ಇಲಾಖೆಯಿಂದ ಮಹತ್ವದ ಸಭೆ

ಬೆಂಗಳೂರು: (Corona in india) ದೇಶದಲ್ಲಿ ಕೊರೊನಾ ನಾಲ್ಕನೇ ಅಲೆ ಕಾಲಿಟ್ಟಿದ್ದು, ಜನ ಸಾಮಾನ್ಯರಲ್ಲಿ ಭೀತಿ ಉಂಟಾಗಿದೆ. ಈಗಾಗಲೇ ಚೀನಾ ಸೇರಿದಂತೆ ಅನೇಕ ದೇಶಗಳಲ್ಲಿ ಕೊರೊನಾ ಸೋಂಕಿನಿಂದ ಸಾವುಗಳ ಸಂಖ್ಯೆ ಅಧಿಕವಾಗುತ್ತಿದ್ದು, ಭಾರತದಲ್ಲೂ ಕೂಡ ಕೊರೊನಾ ಆತಂಕ ಹೆಚ್ಚಾಗಿದೆ. ಕೊರೊನಾ ಹೆಚ್ಚಾದ ಹಿನ್ನಲೆಯಲ್ಲಿ ಆರೋಗ್ಯ ಇಲಾಖೆ ಇಂದು ಮಹತ್ವದ ಸಭೆ ಕೈಗೊಂಡಿದ್ದು, ಹೊಸ ವರ್ಷಕ್ಕೆ ಹೊಸ ನಿಯಮಗಳನ್ನು ಕೈಗೊಳ್ಳುವ ಬಗ್ಗೆ ಚರ್ಚೆ ನಡೆಯಲಿದೆ.

ಇನ್ನೇನು ಹೊಸ ವರ್ಷಕ್ಕೆ ಕ್ಷಣಗಣನೆ ಪ್ರಾರಂಭವಾಗಿದೆ. ಇದೇ ಹೊತ್ತಿನಲ್ಲಿ ಕೊರೊನಾ (Corona in india) ಅಲೆ ತಾಂಡವವಾಡುತ್ತಿದ್ದು, ದೇಶ ಹಾಗೂ ರಾಜ್ಯದಲ್ಲಿ ಕೊರೊನಾ ಅಲೆಯನ್ನು ನಿಯಂತ್ರಿಸಲು ಪ್ರತ್ಯೇಕ ಮಾರ್ಗಸೂಚಿಗಳ ಅಗತ್ಯವಿದೆ. ಹೀಗಾಗಿ ಅರೋಗ್ಯ ಇಲಾಖೆ ಕೊರೊನಾ ನಿಯಂತ್ರಣಕ್ಕೆ ಹೊಸ ವರ್ಷದಲ್ಲಿ ಹೊಸ ನಿಯಮಗಳನ್ನು ಜಾರಿ ಮಾಡಲು ಸಜ್ಜಾಗುತ್ತಿದೆ. ಆರೋಗ್ಯ ಇಲಾಖೆ, ಕಂದಾಯ ಇಲಾಖೆ, ಹಾಗೂ ಪೊಲೀಸ್‌ ಇಲಾಖೆಗಳಿಂದ ಹೊಸ ವರ್ಷಕ್ಕೆ ನಿಯಮ ಕೈಗೊಳ್ಳುವ ಬಗ್ಗೆ ಚರ್ಚೆ ನಡೆಯಲಿದ್ದು, ಈ ಮಹತ್ವದ ಸಭೆಯ ನೇತ್ರತ್ವವನ್ನು ಆರೋಗ್ಯ ಸಚಿವ ಕೆ. ಸುಧಾಕರ್‌ ತೆಗೆದುಕೊಳ್ಳಲಿದ್ದಾರೆ.

ನಾಳೆಯಿಂದಲೇ ರಾಜ್ಯದಲ್ಲಿ ಹೊಸ ವರ್ಷಕ್ಕೆ ನಿಯಮಗಳು ಜಾರಿಯಾಗುವ ಸಾಧ್ಯತೆಯಿದ್ದು, ಬೆಂಗಳೂರು ಮತ್ತು ರಾಜ್ಯಕ್ಕೆ ಪ್ರತ್ಯೇಕ ನಿಯಮ ಜಾರಿಯಾಗಲಿದೆ.

ಶಾಲೆಗಳಿಗೂ ಶುರುವಾಯ್ತು ಕೊರೊನಾ ಭೀತಿ
ಹೌದು..! ಈಗಾಗಲೇ ದೇಶದಲ್ಲಿ ಕೊರೊನಾ ತಾಂಡವವಾಡಿ ಆರ್ಥಿಕವಾಗಿ ಎಲ್ಲರನ್ನೂ ಕುಗ್ಗುವಂತೆ ಮಾಡಿತ್ತು, ಇದರ ಬೆನ್ನಲ್ಲೇ ಮಕ್ಕಳ ವಿದ್ಯಾಭ್ಯಾಸಕ್ಕೂ ಅಡ್ಡಿಯಾಗಿತ್ತು. ಈಗಲೂ ಕೂಡ ದೇಶದಲ್ಲಿ ಮತ್ತೆ ಕೊರೊನಾ ಭೀತಿ ಎದುರಾಗಿದ್ದು, ಶಾಲೆಗಳಿಗೂ ಕೊರೊನಾ ಭೀತಿ ಎದುರಾಗಿದೆ. ಕೊರೊನಾ ನಿಯಂತ್ರಣದ ಹಿನ್ನಲೆಯಲ್ಲಿ ಶಾಲೆಗಳಲ್ಲೂ ಪ್ರತ್ಯೇಕ ಮಾರ್ಗಸೂಚಿಯ ಅಗತ್ಯತೆ ಇದ್ದು, ಖಾಸಗಿ ಶಾಲೆಗಳ ಒಕ್ಕೂಟದಿಂದ ಇಂದು ಸಂಜೆ ಸಭೆ ನಡೆಯಲಿದೆ.

ಲೋಕೆಶ್‌ ತಾಳಿಕಟ್ಟೆ ನೇತ್ರತ್ವದಲ್ಲಿ ಸಭೆ ನಡೆಯಲಿದ್ದು, ರಾಜ್ಯದ ಎಲ್ಲಾ ಖಾಸಗಿ ಶಾಲೆಗಳ ಒಕ್ಕೂಟಗಳು ಸಭೆಯಲ್ಲಿ ಭಾಗಿಯಾಗಲಿವೆ. ರಾಜ್ಯದಲ್ಲಿ ಕೊರೊನಾ ಹೆಚ್ಚಾದರೆ ಶಾಲೆಗಳಲ್ಲಿ ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು, ಶಾಲೆಗಳಲ್ಲಿ ಮಾಸ್ಕ್‌ ಧರಿಸುವಿಕೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ, ಬೂಸ್ಟರ್‌ ಡೋಸ್‌ ನೀಡುವ ಬಗ್ಗೆ ಚರ್ಚೆಗಳು ನಡೆಯಲಿದ್ದು, ವಿಡಿಯೋ ಕಾನ್ಫರೆನ್ಸ್‌ ಮೂಲಕ ಅಗತ್ಯ ಮಾರ್ಗಸೂಚಿಗಳನ್ನು ಕೈಗೊಳ್ಳಲಾಗುವುದು.

ಇದನ್ನೂ ಓದಿ : Nasal vaccine: ಮೂಗಿನ ಮೂಲಕ ಕೊರೊನಾ ಲಸಿಕೆ : ಗ್ರೀನ್ ಸಿಗ್ನಲ್‌ ಕೊಟ್ಟ ಕೇಂದ್ರ ಆರೋಗ್ಯ ಇಲಾಖೆ

ಇದನ್ನೂ ಓದಿ : Mask compulsory: ರಾಜ್ಯದಲ್ಲಿ ಮತ್ತೆ ಕೊರೊನಾ ಆತಂಕ: ಬೆಂಗಳೂರಿನಲ್ಲಿ ಇಂದಿನಿಂದ ಮಾಸ್ಕ್‌ ಕಡ್ಡಾಯ

(Corona in India) The fourth wave of Corona has entered the country and panic has arisen among the common people. Already, the number of deaths due to corona infection is increasing in many countries including China, and the fear of corona has also increased in India. In the background of the increase in Corona, the health department has held an important meeting today, and there will be a discussion about the implementation of new rules for the new year.

Comments are closed.