ಬೆಂಗಳೂರು: (Corona increase) ಚೀನಾ ಸೇರಿದಂತೆ ಪ್ರಪಂಚದ ಹಲವು ದೇಶಗಳಲ್ಲಿ ಕೊರೊನಾ ಅತೀ ವೇಗವಾಗಿ ಹರಡುತ್ತಿದೆ. ಇದೀಗ ಭಾರತ ಸೇರಿದಂತೆ ರಾಜ್ಯದಲ್ಲೂ ಕೊರೊನಾ ಭೀತಿ ಎದುರಾಗಿದ್ದು, ಕೊರೊನಾ ನಿಯಂತ್ರಿಸುವುದರ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡುವ ಕುರಿತಾಗಿ ಸಭೆ ನಡೆಯುವ ಬಗ್ಗೆ ವರದಿಗಳು ಕೇಳಿಬರುತ್ತಿದ್ದು, ಇಂದು ಬೆಳಗಾವಿಯಲ್ಲಿ ಕೊರೊನಾ ನಿಯಂತ್ರಣಕ್ಕೆ ಮಹತ್ವದ ಸಭೆ ನಡೆಯಲಿದೆ.
ಇಂದು ವಿಪತ್ತು ನಿರ್ವಹಣಾ ಇಲಾಖೆಯ ಸಚಿವರೂ ಆಗಿರುವ ಕಂದಾಯ ಸಚಿವ ಆರ್.ಅಶೋಕ್ ಹಾಗೂ ಆರೋಗ್ಯ ಸಚಿವ ಕೆ. ಸುಧಾಕರ್ ನೇತೃತ್ವದಲ್ಲಿ ಕೊರೊನಾ (Corona increase) ನಿಯಂತ್ರಣದ ಕುರಿತು ಮಹತ್ವದ ಸಭೆ ನಡೆಯಲಿದ್ದು, ಹೊಸ ವರ್ಷಕ್ಕೆ ಜನಸಂದಣಿ ಹೆಚ್ಚಾಗಿರುವ ಬೆಂಗಳೂರು ಹಾಗೂ ರಾಜ್ಯಕ್ಕೆ ಪ್ರತ್ಯೇಕ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡುವ ಸಾಧ್ಯತೆಗಳಿವೆ.
ಈಗಾಗಲೇ ವಿದೇಶಗಳಲ್ಲಿ ಕೊರೊನಾದಿಂದ ಉಂಟಾಗಿರುವ ಪರಿಣಾಮಗಳ ಬಗ್ಗೆ ಉನ್ನತ ಅಧಿಕಾರಿಗಳು ವರದಿಯನ್ನು ಸಂಗ್ರಹಿಸಿದ್ದು, ಇದರ ಜೊತೆಗೆ ರಾಜ್ಯದ ಸ್ಥಿತಿಗತಿಯನ್ನು ಪರಿಶೀಲನೆ ನಡೆಸಿ ಕೊವಿಡ್ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡುವ ಸಾಧ್ಯತೆಗಳು ಇವೆ. ಈಗಾಗಲೇ ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಿದ್ದು, ಮಾಸ್ಕ್ ಧರಿಸುವುದರಿಂದ ಕೊರೊನಾ ಸೋಂಕು ಹರಡುವ ಸಾಧ್ಯತೆಗಳು ಕಡಿಮೆ ಇರುವುದರಿಂದ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮಾಸ್ಕ್ ಕಡ್ಡಾಯಗೊಳಿಸುವ ಸಾಧ್ಯತೆಗಳು ಹೆಚ್ಚಿವೆ. ಮಾಸ್ಕ್ ಬಳಕೆ ಹಾಗೂ ಸಾಮಾಜಿಕ ಅಂತರಕ್ಕೆ ಆದ್ಯತೆ ನೀಡುವ ಬಗ್ಗೆ ಸರ್ಕಾರ ತನ್ನ ಚಿಂತನೆಯನ್ನು ಈಗಾಗಲೇ ಪ್ರಕಟಿಸಿದೆ.
ಸಾರ್ವಜನಿಕರು ಸೇರುವ ಸ್ಥಳಗಳಾದ ಪಬ್, ಬಾರ್, ಮಾಲ್, ಕ್ಲಬ್, ಮೆಟ್ರೊ, ರೈಲು, ಬಸ್, ಹೋಟೆಲ್, ಚಿತ್ರಮಂದಿರಗಳ ಪ್ರವೇಶಕ್ಕೆ ಮಾಸ್ಕ್ ಹಾಗೂ ಸಾಮಾಜಿಕ ಅಂತರ ಫಾಲನೆ ಕಡ್ಡಾಯಗೊಳಿಸುವ ಸಾಧ್ಯತೆಯಿದ್ದು, ಮಾಸ್ಕ್ ಬಳಕೆ ಹಾಗೂ ಸಾಮಾಜಿಕ ಅಂತರಕ್ಕೆ ಕಾಯ್ದುಕೊಳ್ಳುವುದಕ್ಕೆ ಹೆಚ್ಚಿನ ಆದ್ಯತೆ ನೀಡುವ ಬಗ್ಗೆ ಸರ್ಕಾರ ತನ್ನ ಚಿಂತನೆಯನ್ನು ಈಗಾಗಲೇ ಪ್ರಕಟಿಸಿದೆ. ಬೆಂಗಳೂರಿಗೆ ಈಗಾಗಲೇ ಮಾಸ್ಕ್ ಕಡ್ಡಾಯ ಮಾಡಿದ್ದು, ಇದರ ಹೊರತಾಗಿ ಬೇರೆ ಮಾರ್ಗಸೂಚಿ ಬಿಡುಗಡೆ ಮಾಡುವ ಬಗ್ಗೆ ಅನುಮಾನಗಳಿದ್ದು, ಬೆಂಗಳೂರು ಸೇರಿದಂತೆ ಇಡೀ ರಾಜ್ಯದಲ್ಲಿ ಸರ್ಕಾರಿ ನೌಕರರು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ಮಾಸ್ಕ್ ಕಡ್ಡಾಯಗೊಳಿಸಿ ಕನಿಷ್ಠ ಪ್ರಮಾಣದಲ್ಲಿ ಕೊವಿಡ್ ನಿರ್ಬಂಧಗಳನ್ನು ಜಾರಿಗೊಳಿಸಲಾಗುವುದು ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ : Mask Demand Price Hike : ಭಾರತದಲ್ಲಿ ಮತ್ತೆ ಕೊರೊನಾ ಆತಂಕ : ಹೆಚ್ಚಾಯ್ತು ಮಾಸ್ಕ್‌ಗಳಿಗೆ ಬೇಡಿಕೆ, ಬೆಲೆ ಏರಿಕೆ
ಇದರ ಜೊತೆಗೆ ರಾಜ್ಯದಲ್ಲಿ ಮಾಸ್ಕ್ ಕಡ್ಡಾಯಗೊಳಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸೂಚನೆ ನೀಡಬಹುದು, ಮತ್ತು ಜನಸಂದಣಿಗೆ ನಿರ್ಬಂಧ ಹೇರುವ ಸಾಧ್ಯತೆಗಳು ಇವೆ. ಹೊಸ ವರ್ಷದ ಆಚರಣೆಗೆ ಕೆಲವು ನಿರ್ಬಂಧಗಳನ್ನು ಹೇರುವುದರೊಂದಿಗೆ ಕೊರೊನಾ ನಿಯಂತ್ರಣಕ್ಕೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡುವ ಸಾಧ್ಯತೆಗಳಿರಬಹುದು.
(Corona increase) Corona is spreading very fast in many countries of the world including China. Now there is a fear of Corona in the state including India and there are discussions about controlling Corona. There are reports that a meeting will be held regarding the release of guidelines for the control of Corona in the state, today an important meeting for the control of Corona will be held in Belgaum.