ಒಂದೇ ದಿನ ಬರೋಬ್ಬರಿ 53 ಮಂದಿಗೆ ಸೋಂಕು : ಲಾಕ್ ಡೌನ್ ತೆರವಿನ ಬೆನ್ನಲ್ಲೇ ಕರುನಾಡನ್ನು ಬೆಚ್ಚಿ ಬೀಳಿಸಿದೆ ಕೊರೊನಾ

0

ಬೆಂಗಳೂರು : ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಪೀಡಿತರ ಸಂಖ್ಯೆ ವ್ಯಾಪಕವಾಗಿ ಹೆಚ್ಚುತ್ತಿದ್ದು, ಇಂದು ಒಂದೇ ದಿನ 53 ಮಂದಿಗೆ ಕೊರೊನಾ ಸೊಂಕು ಇರುವುದು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಪೀಡಿತರ ಸಂಖ್ಯೆ 847ಕ್ಕೆ ಏರಿಕೆಯಾಗಿದೆ.

ಕೊರೊನಾ ವೈರಸ್ ಸೋಂಕಿನಿಂದ ತತ್ತರಿಸಿದ್ದ ಬೆಳಗಾವಿಯಲ್ಲಿ ಬರೋಬ್ಬರಿ 22 ಮಂದಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಗ್ರೀನ್ ಝೋನ್ ವ್ಯಾಪ್ತಿಯಲ್ಲಿದ್ದ ಶಿವಮೊಗ್ಗಕ್ಕೆ ತಬ್ಲಿಘಿಗಳು ಕಂಟಕವಾಗಿದ್ದಾರೆ. ಜಿಲ್ಲೆಯಲ್ಲಿ ಇಂದು ಒಂದೇ ದಿನ 8 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ, ಬಾಗಲಕೋಟೆಯಲ್ಲಿಯೂ 8 ಮಂದಿಗೆ ಕೊರೊನಾ ಸೋಂಕು ಪತ್ತೆಯಾಗಿದೆ.

ಇನ್ನು ಭಟ್ಕಳದಲ್ಲಿಯೂ ಇಂದೂ ಕೂಡ ಕೊರೊನಾ ಶಾಕ್ ಕೊಟ್ಟಿದೆ. ಇಂದು ಮತ್ತೆ 7 ಮಂದಿಗೆ ಕೊರೊನಾ ಸೋಂಕು ಇರುವುದು ಪತ್ತೆಯಾಗಿದೆ. ಸಿಲಿಕಾನ್ ಸಿಟಿಯಲ್ಲಿಯೂ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಇಂದು 3 ಮಂದಿಗೆ ಕೊರೊನಾ ಸೋಂಕು ಇರುವುದು ಖಚಿತವಾಗಿದೆ. ಉಳಿದಂತೆ ಕಲಬುರಗಿ 3 ಹಾಗೂ ಚಿಕ್ಕಬಳ್ಳಾಪುರ ಹಾಗೂ ದಾವಣಗೆರೆಯಲ್ಲಿ 1 ಪ್ರಕರಣ ಪತ್ತೆಯಾಗಿದೆ.

ಈ ಮೂಲಕ ರಾಜ್ಯದಲ್ಲಿ ಕೊರೊನಾ ಪೀಡಿತರ ಸಂಖ್ಯೆ 800 ಗಡಿದಾಟಿದೆ. ಕಳೆದ ಮೂರು ದಿನಗಳಲ್ಲಿ ಕೊರೊನಾ ಪೀಡಿತರ ಸಂಖ್ಯೆ 100 ದಾಟಿರುವುದು ಆತಂಕವನ್ನು ಮೂಡಿಸಿದೆ. ಮಾತ್ರವಲ್ಲ ಹಲವರ ವರದಿಗಳು ಇನ್ನಷ್ಟೇ ಬರಬೇಕಾಗಿರುವುದರಿಂದ ಆತಂಕ ತಂದೊಡ್ಡಿದೆ.

Leave A Reply

Your email address will not be published.