ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ! ಅಂತರ್ ಜಿಲ್ಲಾ ಸಂಚಾರವೂ ಬಂದ್ ?

0

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಲಾಕ್ ಡೌನ್ ಆದೇಶ ಜಾರಿಯಾಗಲಿದೆ. ಅಲ್ಲದೇ ಅಂತರ್ ಜಿಲ್ಲಾ ಸಂಚಾರ ಕೂಡ ಬಂದ್ ಆಗಲಿದ್ದು, ಈ ಕುರಿತು ಸೋಮವಾರ ನಿರ್ಧಾರವಾಗಲಿದೆ.

ಕೊರೊನಾ ವೈರಸ್ ಸೋಂಕಿನ ನಿಯಂತ್ರಣಕ್ಕೆ ರಾಜ್ಯದಲ್ಲಿ ಲಾಕ್ ಡೌನ್ ಜಾರಿ ಮಾಡುವ ಕುರಿತು ಒತ್ತಡ ಕೇಳಿಬರುತ್ತಿದೆ. ಸಿಲಿಕಾನ್ ಸಿಟಿ ಬೆಂಗಳೂರಿನ ಬಹುತೇಕ ವಾರ್ಡ್ ಗಳು ಈಗಾಗಲೇ ಸೀಲ್ ಡೌನ್ ಮಾಡಲಾಗಿದೆ. ಸೋಂಕು ತೀವ್ರಗತಿಯಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇನ್ನಷ್ಟು ಪ್ರದೇಶಗಳು ಸೀಲ್ ಡೌನ್ ಆಗುವ ಸಾಧ್ಯತೆಯಿದೆ. ಈ ನಡುವಲ್ಲೇ ಕೆಲ ಸಚಿವರು ಕೂಡ ಲಾಕ್ ಡೌನ್ ಮಾಡುವ ಕುರಿತು ಮನವಿ ಮಾಡಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಕೂಡ ನಿರ್ಧಿಷ್ಟ ಅವಧಿಗೆ ಲಾಕ್ ಡೌನ್ ಹೇರಿಕೆ ಮಾಡಲು ಚಿಂತನೆ ನಡೆಸಿದ್ದಾರೆ ಎನ್ನಲಾಗುತ್ತಿದೆ.

ಪ್ರಮುಖವಾಗಿ ಜನರು ಒಂದು ಕಡೆಯಿಂದ ಇನ್ನೊಂದು ಕಡೆಗೆ ವಲಸೆ ಹೋಗುತ್ತಿರುವುದರಿಂದಲೇ ಕೊರೊನಾ ಸೋಂಕು ಹರಡುತ್ತಿದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಅಂತರ್ ಜಿಲ್ಲಾ ಸಂಚಾರವನ್ನೂ ಬಂದ್ ಮಾಡುವ ಕುರಿತು ಚಿಂತನೆ ನಡೆಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಎಲ್ಲಾ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಸಭೆಯನ್ನು ಕರೆದಿದ್ದಾರೆ. ಸೋಮವಾರದ ಸಭೆಯಲ್ಲಿ ಲಾಕ್ ಡೌನ್ ಕುರಿತು ತೀರ್ಮಾನವಾಗುವ ಸಾಧ್ಯತೆಯಿದೆ.

Leave A Reply

Your email address will not be published.