INDIA CORONA UPDATES : ಭಾರತದಲ್ಲಿ 24 ಗಂಟೆಯಲ್ಲಿ 47,092 ಹೊಸ ಕೊರೊನಾ ಸೋಂಕು ಪತ್ತೆ

ನವದೆಹಲಿ : ದೇಶದಲ್ಲಿ ಕೊರೊನಾ ಮೂರನೇ ಅಲೆ ಆತಂಕ ಎದುರಾಗಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ. ಕಳೆದ 24 ಗಂಟೆಯಲ್ಲಿ 47,092 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 3,28,57,937ಕ್ಕೆ ಏರಿಕೆಯಾಗಿದೆ.

ಈ ಹಿಂದೆ ಸೋಂಕಿತರ ಸಾವಿನ ಸಂಖ್ಯೆ ಕೊಂಚ ಕುಸಿತವಾಗಿದ್ದು. ಜನರು ಕೊರೊನಾ ಕಡಿಮೆಯಾಗುತ್ತಿದೆ ಎಂದು ಅಂದಾಜಿಸುವಾಗ ಮತ್ತೆ ಕೊರೊನಾ ಸೊಂಕಿತರು ಹೆಚ್ಚಾಗಿದಲ್ಲದೇ ಕಳೆದ 24 ಗಂಟೆಯಲ್ಲಿ 509 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 43,9529 ಕ್ಕೆ ಏರಿಕೆಯಾಗಿದೆ.

ಇದನ್ನೂ ಓದಿ: SARS-COV-2 : ವಿದೇಶಿ ಪ್ರಯಾಣಿಕರಿಗೆ ಹೊಸ ರೂಲ್ಸ್‌ : ಆರೋಗ್ಯ ಇಲಾಖೆ

ಇನ್ನು ದೇಶದಲ್ಲಿ 3,89,583 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 35,181 ಜನರು ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 3,20,28,825 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 16,84,441 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 81,09,244 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 66,30,37,334 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ. ಆದಷ್ಟು ಬೇಗ ಹೆಚ್ಚಿನ ಜನರು ಕೋವಿಡ್‌ ಲಸಿಕೆ ಪಡೆದು ಕೊಂಡರೆ ಈ ಮಾಹಾಮಾರಿ ಕೊರೊನಾದಿಂದ ತಮ್ಮನ್ನ ತಾವು ರಕ್ಷಿಸಿಕೊಳ್ಳಬಹುದು.

ಇದನ್ನೂ ಓದಿ: Corona Updates : ದೇಶದಲ್ಲಿಂದು 30,941 ಮಂದಿಗೆ ಕೊರೊನಾ, 350 ಬಲಿ ಪಡೆದ ಹೆಮ್ಮಾರಿ

( INDIA CORONA UPDATES )

Comments are closed.