Covid Updates : ಕರ್ನಾಟಕದಲ್ಲಿ ತಗ್ಗಿದ ಕೊರೊನಾ ಅಬ್ಬರ : 264 ಹೊಸ ಕೇಸ್‌, 6 ಸಾವು

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಮಾಣ ಇಳಿಕೆಯಾಗುತ್ತಿದೆ. ಕರ್ನಾಟಕದಲ್ಲಿ ಹೊಸದಾಗಿ 64 ಹೊಸ ಕೊರೊನಾ ಸೋಂಕಿನ ಪ್ರಕರಣಗಳು ಪತ್ತೆಯಾಗಿದ್ದು, ಈ ಪೈಕಿ 6 ಮಂದಿ ಸಾವನ್ನಪ್ಪಿದ್ದಾರೆ ಎಂದು ಕರ್ನಾಟಕ ಆರೋಗ್ಯ ಇಲಾಖೆ ಮಾಹಿತಿಯನ್ನು ನೀಡಿದೆ.

ಕರ್ನಾಟಕದಲ್ಲಿ ಇದೀಗ ಸೋಂಕಿತರ ಸಂಖ್ಯೆ 29,83,133 ಕ್ಕೆ ಏರಿಕೆಯಾಗಿದೆ. ಈ ಪೈಕಿ 29,35,659 ಜನ ಗುಣಮುಖರಾಗಿದ್ದಾರೆ. ಇನ್ನು ರಾಜ್ಯದಲ್ಲಿಂದು ಒಟ್ಟು 6 ಮಂದಿ ಕೊರೊನಾ ವೈರಸ್‌ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಈ ಮೂಲಕ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 37,937ಕ್ಕೆ ಏರಿಕೆಯಾಗಿದೆ. ಇನ್ನು ರಾಜ್ಯದಲ್ಲಿ9,508 ಮಂದಿ ಕೊರೊನಾ ಸೋಂಕಿಗೆ ತುತ್ತಾಗಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

ಇನ್ನು ಸಿಲಿಕಾನ್‌ ಸಿಟಿ ಬೆಂಗಳೂರಲ್ಲಿ ಕೊರೊನಾ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಭಾರೀ ಇಳಿಕೆಯನ್ನು ಕಾಣುತ್ತಿದೆ. ಬೆಂಗಳೂರಲ್ಲಿ ಒಂದೇ ದಿನ 121 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಕೊರೊನಾ ಸೋಂಕಿತರ ಸಂಖ್ಯೆ 12,49,245 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ 3 ಮಂದಿ ಸಾವನ್ನಪ್ಪಿದ್ದು, ಸಿಲಿಕಾನ್‌ ಸಿಟಿಯನ್ನು ಇದುವರೆಗೆ ಸಾವನ್ನಪ್ಪಿರುವವರ ಸಂಖ್ಯೆ 16,209ಕ್ಕೆ ಏರಿಕೆಯಾಗಿದೆ. ಇನ್ನು ಬೆಂಗಳೂರಲ್ಲಿ 6,732 ಕೊರೊನಾ ಸಕ್ರೀಯ ಪ್ರಕರಣಗಳಿವೆ.

ಇದನ್ನೂ ಓದಿ : ಕೋವಿಡ್‌ ವೈರಸ್‌ ಹುಟ್ಟಿದ್ದು ವುಹಾನ್‌ ಲ್ಯಾಬ್‌ನಲ್ಲಿ : ವಿಶ್ವ ಆರೋಗ್ಯ ಸಂಸ್ಥೆ ಕೊಟ್ಟಿದೆ ಶಾಕಿಂಗ್ ವರದಿ

ಬಳ್ಳಾರಿ, ಬಾಗಲಕೋಟೆ, ಬೆಳಗಾವಿ, ವಿಜಯಪುರ, ಬೀದರ್‌, ಧಾರವಾಡ, ಕೊಪ್ಪಳ, ಚಿತ್ರದುರ್ಗ, ದಾವಣಗೆರೆ, ಗದಗ ಜಿಲ್ಲೆಗಳಲ್ಲಿ ಶೂನ್ಯ ಕೊರೊನಾ ಪ್ರಕರಣ ದಾಖಲಾಗಿದ್ರೆ, ಬೆಂಗಳೂರು ಗ್ರಾಮಾಂತರ 5, ಬೆಂಗಳೂರು ನಗರ 121, ಚಾಮರಾಜನಗರ 1, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 9, ದಕ್ಷಿಣ ಕನ್ನಡ 34, ಹಾಸನ 16, ಹಾವೇರಿ 1, ಕಲಬುರಗಿ 1, ಕೊಡಗು 12, ಕೋಲಾರ 7, ಮಂಡ್ಯ 7, ಮೈಸೂರು 21, ರಾಯಚೂರು 1, ರಾಮನಗರ 2, ಶಿವಮೊಗ್ಗ 5, ತುಮಕೂರು 6, ಉಡುಪಿ 10, ಉತ್ತರ ಕನ್ನಡ 3, ಯಾದಗಿರಿ ಜಿಲ್ಲೆಯಲ್ಲಿ ಒಂದು ಪ್ರಕರಣ ದಾಖಲಾಗಿದೆ.

ಸಿಲಿಕಾನ್‌ ಸಿಟಿ ಬೆಂಗಳೂರಲ್ಲಿಂದು 3 ಮಂದಿ ಮೃತಪಟ್ಟಿದ್ದಾರೆ. ಗದಗ, ಮೈಸೂರು, ಉಡುಪಿ, ದಾವಣಗೆರೆ, ದಕ್ಷಿಣ ಕನ್ನಡ, ಚಾಮರಾಜನಗರ ಜಿಲ್ಲೆಗಳಲ್ಲಿ ಕೊರೊನಾ ಸಾವಿನ ಪ್ರಕರಣ ದಾಖಲಾಗಿದೆ. ಕಳೆದ ಕೆಲವು ದಿನಗಳಿಂದ ಏರಿಕೆಯನ್ನು ಕಾಣುತ್ತಿದ್ದ ಕೊರೊನಾ ಹೆಮ್ಮಾರಿ ಇದೀಗ ಇಳಿಕೆಯನ್ನು ಕಾಣುತ್ತಿದೆ.

ಇದನ್ನೂ ಓದಿ : 2 -18 ವರ್ಷ ವಯಸ್ಸಿನ ಮಕ್ಕಳಿಗೆ ಲಸಿಕೆ : ಕೊವಾಕ್ಸಿನ್‌ ತುರ್ತು ಬಳಕೆಗೆ ಗ್ರೀನ್‌ ಸಿಗ್ನಲ್‌

(Karnataka New Covid-19 Cases Death Toll Total Corona Active Coronavirus Cases )

Comments are closed.