Corona outbreak : ಶಾಲೆಗಳಲ್ಲಿ ಮತ್ತೆ ಕೊರೊನಾ ಸ್ಪೋಟ : ಬೆಂಗಳೂರಿನ 2 ಶಾಲೆಯ 31 ಮಕ್ಕಳಿಗೆ ಕೊರೊನಾ ಸೋಂಕು

ಬೆಂಗಳೂರು : ಕಳೆದ ಹಲವು ತಿಂಗಳುಗಳಿಂದ ಇಳಿಕೆ ಕಂಡಿದ್ದ ಕೊರೊನಾ ವೈರಸ್‌ ಸೋಂಕು ಇದೀಗ ಮತ್ತೆ (Corona outbreak) ಆರ್ಭಟಿಸುವುದಕ್ಕೆ ಶುರು ಮಾಡಿದೆ. ಇದೀಗ ಬೆಂಗಳೂರಿನ ಎರಡು ಶಾಲೆಗಳಲ್ಲಿನ ಸುಮಾರು 31 ಮಕ್ಕಳಿಗೆ ಕೊರೊನಾ ವೈರಸ್‌ ಸೋಂಕು ಇರುವುದು ದೃಢಪಟ್ಟಿದೆ. ಇದರಿಂದಾಗಿ ರಾಜ್ಯದಲ್ಲೀಗ ಕೊರೊನಾ ಆತಂಕ ಶುರುವಾಗಿದೆ.

ಬೆಂಗಳೂರಿನ ರಾಜಗೋಪಾಲನಗರದಲ್ಲಿ ಇರುವ ನ್ಯೂ ಇಂಟರ್‌ ನ್ಯಾಷನಲ್‌ ಪಬ್ಲಿಕ್‌ ಸ್ಕೂಲ್‌ನಲ್ಲಿ 5 ಮತ್ತು 6 ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿರುವ 21 ಮಕ್ಕಳು ಹಾಗೂ ಎಂಇಎಸ್‌ ಪಬ್ಲಿಕ್‌ ಸ್ಕೂಲ್‌ನಲ್ಲಿ 5 ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿರುವ 10 ಮಕ್ಕಳಿಗೆ ಕೋವಿಡ್‌ ವೈರಸ್‌ ಸೋಂಕು ಇರುವುದು ದೃಢಪಟ್ಟಿದೆ. ಎಲ್ಲಾ ಮಕ್ಕಳನ್ನು ಇದೀಗ ಐಸೋಲೇಷನ್‌ಗೆ ಒಳಪಡಿಸಲಾಗಿದೆ.

ಕೋವಿಡ್‌ ವೈರಸ್‌ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಎರಡೂ ಶಾಲೆಗಳನ್ನು ಕಂಟೈನ್ಮೆಂಟ್‌ ಝೋನ್‌ ಎಂದು ಘೋಷಣೆ ಮಾಡಲಾಗಿದೆ. ಎಲ್ಲಾ ವಿದ್ಯಾರ್ಥಿಗಳ ಆರೋಗ್ಯ ಸ್ಥಿರವಾಗಿದೆ. ಎರಡೂ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿಗಳನ್ನು ಇದೀಗ ಕೋವಿಡ್‌ ಟೆಸ್ಟ್‌ಗೆ ಒಳಪಡಿಸಲಾಗಿದೆ.

ಇದನ್ನೂ ಓದಿ : Rohit Chakratirtha : ಸಂಶೋಧಕನಿಗೆ ಮತಕ್ಕಿಂತ ಸತ್ಯ ಮುಖ್ಯ: ಬಿಜೆಪಿ ವಿರುದ್ಧವೇ ತಿರುಗಿಬಿದ್ದ ರೋಹಿತ್ ಚಕ್ರತೀರ್ಥ

ಇದನ್ನೂ ಓದಿ : KCET 2022 ಆನ್‌ಲೈನ್‌ ನೋಂದಣಿ ಆರಂಭ : kea.kar.nic.in ನಲ್ಲಿ ಅರ್ಜಿ ಸಲ್ಲಿಸಿ

Corona outbreak again in schools, corona infection in 2 school 31 children

Comments are closed.