Corona positive case: ಬೆಂಗಳೂರು ಏರ್ ಪೋರ್ಟ್‌ ನಲ್ಲಿ ಹೈ ಅಲರ್ಟ್:‌ ಪತ್ತೆಯಾಯ್ತು ನಾಲ್ಕು ಪ್ರಕರಣಗಳು

ಬೆಂಗಳೂರು: (Corona positive case) ವಿದೇಶಗಳಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಸರಕಾರ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ವಿದೇಶದಿಂದ ಬರುವ ಪ್ರತಿಯೊಬ್ಬ ವಿದೇಶಿ ಪ್ರಯಾಣಿಕರಿಗೂ ಕೂಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ರ್ಯಾಂಡಮ್‌ ಟೆಸ್ಟ್‌ ನಡೆಸಲಾಗುತ್ತಿದ್ದು, ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿನ್ನೆ ನಾಲ್ಕು ಕೊರೊನಾ ಪ್ರಕರಣಗಳು ದೃಢಪಟ್ಟಿರುವುದಾಗಿ ಆರೋಗ್ಯ ಇಲಾಖೆ ತಿಳಿಸಿದೆ.

ಅಂತರಾಷ್ಟ್ರೀಯ ಪ್ರಯಾಣಿಕರ ಸೋಂಕು ಪ್ರಕರಣಗಳು ದಿನೇ ದಿನೇ ಹೆಚ್ಚಳವಾಗುತ್ತಿದ್ದು, ನಿನ್ನೆಯ ದಿನ ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಾಲ್ಕು ಮಂದಿಗೆ ಕೊರೊನಾ ಸೋಂಕು (Corona positive case) ಇರುವುದು ಪತ್ತೆಯಾಗಿದೆ. ಅಂತರಾಷ್ಟ್ರೀಯ ದೇಶಗಳಿಂದ ಬರುವ ಪ್ರಯಾಣಿಕರಲ್ಲಿ ಸೋಂಕು ಪತ್ತೆ ಹಚ್ಚಲು ಆರೋಗ್ಯ ಇಲಾಖೆ ಮುಂದಾಗಿದ್ದು, ಬೇರೆ ಬೇರೆ ದೇಶಗಳಿಂದ ಬರುತ್ತಿರುವ ಪ್ರಯಾಣಿಕರೇ ಈಗ ದೊಡ್ಡ ಆತಂಕಕ್ಕೆ ಕಾರಣವಾಗಿದ್ದಾರೆ. ಏಕೆಂದರೆ ಇದುವರೆಗೆ ವಿದೇಶಗಳಿಂದ ಬಂದಿದ್ದ 19 ಮಂದಿಗೆ ಸೋಂಕು ದೃಢಪಟ್ಟಿದ್ದು, ನಿನ್ನೆ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ವಿದೇಶದಿಂದ ಬಂದಿದ್ದ ಪ್ರಯಾಣಿಕರಿಗೆ ರ್ಯಾಂಡಮ್‌ ಟೆಸ್ಟ್‌ ನಡೆಸುವ ವೇಳೆ ನಾಲ್ಕು ಮಂದಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

ವಿದೇಶದಿಂದ ಬರುವ ಎಲ್ಲಾ ಪ್ರಯಾಣಿಕರಿಗೂ ರ್ಯಾಂಡಮ್‌ ಟೆಸ್ಟ್‌ ನಡೆಸುತ್ತಿದ್ದು, ಈ ವೇಳೆ ವಿದೇಶದಿಂದ ನಿನ್ನೆ ಬೆಂಗಳೂರಿನತ್ತ ಬಂದಿದ್ದಒಟ್ಟು 200 ಮಂದಿಯ ಸ್ಯಾಂಪಲ್‌ ಟೆಸ್ಟ್‌ ಗಳನ್ನು ಪರೀಕ್ಷೆಗೆ ಒಳಪಡಿಸಿದ್ದು, ಅವರಲ್ಲಿ ನಾಲ್ವರಿಗೆ ಸೋಂಕು ಇರುವುದು ದೃಢಪಟ್ಟಿದೆ. ಇದೀಗ ಸೋಂಕು ಪತ್ತೆಯಾದ ನಾಲ್ವರನ್ನೂ ಬೌರಿಂಗ್‌ ಆಸ್ಪತ್ರೆಗೆ ಶಿಫ್ಟ್‌ ಮಾಡಲಾಗಿದ್ದು, ಚಿಕಿತ್ಸೆ ಕೊಡಲಾಗುತ್ತಿದೆ. ಬೇರೆ ಬೇರೆ ದೇಶಗಳಿಂದ ಬಂದಿರುವ ಎಲ್ಲಾ ವಿದೇಶಿ ಪ್ರಯಾಣಿಕರ ಮೇಲೆ ಆರೋಗ್ಯ ಇಲಾಖೆ ನಿಗಾ ಇಟ್ಟಿದ್ದು, ಪ್ರತಿಯೊಬ್ಬರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಅಲ್ಲದೇ ವಿದೇಶದಿಂದ ರಾಜ್ಯದತ್ತ ಬಂದಿದ್ದ ಪ್ರತಿಯೊಬ್ಬರನ್ನು ಕ್ವಾರಂಟೈನ್‌ ಗೆ ಒಳಪಡಿಸಲಾಗುತ್ತಿದೆ.

ಇದನ್ನೂ ಓದಿ: Omicron BF.7: ಕೋವಿಡ್ ಹೊಸ ರೂಪಾಂತರ : ಈ ಲಕ್ಷಣ ಕಾಣಿಸಿಕೊಂಡ್ರೆ ಕೂಡಲೇ ವೈದ್ಯರಲ್ಲಿ ಪರೀಕ್ಷಿಸಿ

ಇದನ್ನೂ ಓದಿ : Covid Positive case: ಬೆಂಗಳೂರಿಗೆ 2,867 ವಿದೇಶಿ ಪ್ರಯಾಣಿಕರ ಆಗಮನ: 12 ಮಂದಿಗೆ ಕೋವಿಡ್‌ ಸೋಂಕು ದೃಢ

ಕೊರೊನಾ ಸೋಂಕು ದೃಢಪಟ್ಟವರು ಸಿಡ್ನಿ, ಅಬುದಾಬಿ, ಸಿಂಗಾಪುರ ಹಾಗೂ ದುಬೈ ನಿಂದ ಬೆಂಗಳೂರಿಗೆ ಬಂದಿರುವುದಾಗಿ ಮಾಹಿತಿ ಲಭಿಸಿದೆ.

A random test is being conducted at the international airports for every foreign passenger coming from abroad and four corona cases were confirmed at the Bangalore Kempegowda International Airport yesterday, the health department said.

Comments are closed.