ನಿಲ್ಲದ ಕೊರೊನಾ ಅಬ್ಬರ : ರಾಜ್ಯದಲ್ಲಿಂದು 7 ಪ್ರಕರಣ ಪತ್ತೆ

0

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ಹರಡುತ್ತಲೇ ಇದೆ. ಇಂದು ರಾಜ್ಯದಲ್ಲಿ 7 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಪೀಡಿತರ ಸಂಖ್ಯೆ 425ಕ್ಕೆ ಏರಿಕೆಯಾಗಿದೆ.

ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಕೊರೊನಾ ಪ್ರಕರಣ ಹೆಚ್ಚುತ್ತಿದ್ದು, ಒಂದು ಒಂದೇ ದಿನ 5 ಹೊಸ ಕೊರೊನಾ ಪ್ರಕರಣ ಪತ್ತೆಯಾಗಿದ್ದರೆ, ಕಲಬುರಗಿ ಜಿಲ್ಲೆಯಲ್ಲಿಯೂ ಕೊರೊನಾ ಅಬ್ಬರ ಜೋರಾಗಿದ್ದು ಇಂದು ಹೊಸದಾಗಿ 2 ಪ್ರಕರಣ ಪತ್ತೆಯಾಗಿದೆ.

ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಿಸುತ್ತಿರೋ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮಗಳಳನ್ನು ಕೈಗೊಂಡಿದ್ದರೂ ಕೂಡ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುತ್ತಿಲ್ಲ.

Leave A Reply

Your email address will not be published.