ಮಂಗಳೂರು : ಕೊರೊನಾ ಸೋಂಕಿನ ವ್ಯಕ್ತಿಯೋರ್ವ ಕೋವಿಡ್ ಆಸ್ಪತ್ರೆಯಿಂದ ನಾಪತ್ತೆಯಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಪುತೂರು ದರ್ಬೆ ನಿವಾಸಿಯಾಗಿರುವ 18 ವರ್ಷ ಯುವಕ, ಮಂಗಳೂರು ನಗರದಲ್ಲಿ ವಾಸ್ತವ್ಯ ಹೂಡಿದ್ದ. ಶಂಕಿತ ಕೊರೊನಾ ಲಕ್ಷಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ಜು.1ರಂದು ಸ್ವತಃ ವೆನ್ಲಾಕ್ ಆಸ್ಪತ್ರೆಗೆ ತೆರಳಿ ತಪಾಸಣೆಗೆ ಒಳಗಾಗಿದ್ದ, ಭಾನುವಾರ ಕೊರೊನಾ ತಪಾಸಣಾ ವರದಿಯಲ್ಲಿ ಪಾಸಿಟಿವ್ ಬಂದಿದೆ.

ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಯುವಕನನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಸಂಜೆ ವೇಳೆಗೆ ಆತ ಆಸ್ಪತ್ರೆಯಿಂದ ತಪ್ಪಿಸಿಕೊಂಡಿದ್ದಾನೆ. ಈ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವ್ಯಕ್ತಿ ಎಲ್ಲಾದ್ರೂ ಕಂಡುಬಂದ್ರೆ 9480802300 ಸಂಖ್ಯೆ ಕರೆ ಮಾಡಿ ಮಾಹಿತಿ ನೀಡಲು ಪೊಲೀಸರ ಮನವಿ