ನವದೆಹಲಿ : ಕೊರೊನಾ ವೈರಸ್ ಸೋಂಕು ವಿಶ್ವವನ್ನೇ ತಲ್ಲಣಗೊಳಿಸಿದೆ. ಕೋಟ್ಯಾಂತರ ಮಂದಿ ಕೊರೊನಾ ಸೋಂಕಿಗೆ ತತ್ತರಿಸಿ ಹೋಗಿದ್ದಾರೆ. ಈ ಹಿನ್ನೆಲೆಯಲ್ಲೀಗ ಕೊರೊನಾ ಸೋಂಕಿತರ ಪತ್ತೆ ಕಾರ್ಯವೂ ಹೆಚ್ಚುತ್ತಿದೆ. ಆದರೆ ಇನ್ನುಂದೆ ಕೊರೊನಾ ಪರೀಕ್ಷೆಯ ಜೊತೆಗೆ ಕ್ಷಯ ರೋಗ (ಟಿಬಿ) ಪರೀಕ್ಷೆಯನ್ನೂ ಕಡ್ಡಾಯಗೊಳಿಸಲಾಗಿದೆ.

ಕೊರೊನಾ ವೈರಸ್ ಸೋಂಕಿಗೆ ಇನ್ನೂ ಔಷಧ ಕಂಡು ಹಿಡಿದಿಲ್ಲ. ಜಗತ್ತಿನಾದ್ಯಂತ ಸಂಶೋಧನೆ ನಡೆಯುತ್ತಲೇ ಇದೆ. ವಿಶ್ವದ ಹಲವರು ರಾಷ್ಟ್ರಗಳು ಕೊರೊನಾ ಸೋಂಕಿಗೆ ತತ್ತರಿಸಿ ಹೋಗಿವೆ. ಆದರೆ ಭಾರತದಲ್ಲಿ ಕೊರೊನಾ ಸೋಂಕಿನ ಜೊತೆ ಜೊತೆಗೆ ಇತರ ಕಾಯಿಲೆಗಳಿಂದ ಸಾಯುವವರ ಸಂಖ್ಯೆಯು ಹೆಚ್ಚುತ್ತಿದೆ. ಅದ್ರಲ್ಲೂ ಭಾರತೀಯರನ್ನು ಶ್ವಾಸಕೋಶ ಸಂಬಂಧಿ ಆರೋಗ್ಯ ಸಮಸ್ಯೆಗಳೇ ಹೆಚ್ಚಾಗಿ ಕಾಡುತ್ತಿದೆ.

ಇತರೆ ರಾಷ್ಟ್ರಗಳಿಗೆ ಹೋಲಿಸಿದ್ರೆ ಭಾರತದಲ್ಲಿ ಕ್ಷಯರೋಗದಿಂದ ಮೃತಪಡುವವರ ಸಂಖ್ಯೆ ಅಧಿಕವಾಗಿದೆ. ಕಳೆದ ಕೆಲವು ದಶಕಗಳಿಂದಲೂ ಕೇಂದ್ರ ಸರ್ಕಾರ ಕ್ಷಯ ರೋಗಕ್ಕೆ ಉಚಿತ ಚಿಕಿತ್ಸೆ ನೀಡುವುದರ ಜೊತೆಗೆ ಜೊತೆಗೆ ಜಾಗೃತಿಯನ್ನು ಮೂಡಿಸುವ ಕಾರ್ಯವನ್ನು ಮಾಡುತ್ತಿದೆ. ಕಳೆದ ವರ್ಷಗಳಿಗೆ ಹೋಲಿಕೆ ಮಾಡಿದ್ರೆ ಈ ಬಾರಿ ಕ್ಷಯ ರೋಗಿಗಳ ಪತ್ತೆ ಕಾ್ಯ ಶೇ.36ರಷ್ಟು ಕುಸಿತವಾಗಿದೆ. ರೋಗ ಪತ್ತೆಯಾದವರ ಸಂಖ್ಯೆಯಲ್ಲಿ ಇಳಿಕೆಯಾಗಿರುವುದರಿಂದ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಳವಾಗಬಹುದೆಂಬ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ.

ಕೊರೋನಾ ಮತ್ತು ಕ್ಷಯ ರೋಗ ಈ ಎರಡೂ ಖಾಯಿಲೆಗಳು ಶ್ವಾಸಕೋಶದ ಮೇಲೆ ದಾಳಿ ನಡೆಸುವಂತಹದ್ದು. ಇವೆರೆಡರ ರೋಗ ಲಕ್ಷಣಗಳಲ್ಲೂ ಸಾಮ್ಯತೆಯಿದೆ. ಇಷ್ಟು ದಿನ ಕೊರೊನಾ ಸೋಂಕಿತರಿಗೆ ಕೊರೊನಾ ಪರೀಕ್ಷೆಯನ್ನಷ್ಟೇ ನಡೆಸಲಾಗುತ್ತಿತ್ತು. ಆದ್ರೆ ಇನ್ನುಂದೆ ಕಡ್ಡಾಯವಾಗಿ ಕೊರೊನಾ ಜೊತೆಗೆ ಕ್ಷಯ ರೋಗ ಪರೀಕ್ಷೆಯನ್ನು ಮಾಡಿಸಲೇ ಬೇಕೆಂಬ ನಿರ್ಧಾರವನ್ನು ಸರಕಾರ ಕೈಗೊಂಡಿದೆ.

ಕೊರೊನಾ ಸೋಂಕಿಗೆ ತುತ್ತಾದ್ರೆ ದುಬಾರಿ ಚಿಕಿತ್ಸಾ ವೆಚ್ಚ ಸೇರಿದಂತೆ ನಾನಾ ಕಾರಣಗಳಿಂದಾಗಿ ಕೊರೊನಾ ಸೋಂಕಿತರು ಮನೆಯಲ್ಲಿಯೇ ಉಳಿದುಕೊಳ್ಳುತ್ತಿದ್ದಾರೆ. ಹೀಗಾಗಿ ಕೊರೊನಾ ಸೋಂಕು ಮನೆ ಮಂದಿಗೆಲ್ಲಾ ಹರಡುತ್ತಿದೆ. ಇದೇ ಕಾರಣದಿಂದಾಗಿ ಕೊರೊನಾ ಸೋಂಕಿತರಿಗೆ ಟಿಬಿ ಪರೀಕ್ಷೆಯನ್ನು ಮಾಡಿಸಲಾಗುತ್ತಿದೆ. ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಜಾವೇದ್ ಅಖ್ತರ್ ರಾಜ್ಯದ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.

ಎಲ್ಲಾ ಕೊರೊನಾ ಸೋಂಕಿತರಿಗೆ ಕ್ಷಯ ರೋಗ ಲಕ್ಷಣಗಳಿಗಾಗಿ ಪರೀಕ್ಷೆಯನ್ನು ನಡೆಸಬೇಕು. ಮಾತ್ರವಲ್ಲ ಕ್ಷಯ ರೋಗಿಗಳಿಗೂ ಕೂಡ ಕೊರೊನಾ ತಪಾಸಣೆಯನ್ನು ನಡೆಸಬೇಕು. ಅಷ್ಟೇ ಅಲ್ಲಾ ಹತ್ತು ದಿನಗಳನ್ನು ಮೀರಿ ಇನ್‌ಫ್ಲುಯೆಂಜಾ ರೀತಿಯ ಕಾಯಿಲೆ (ಐಎಲ್‌ಐ), ತೀವ್ರ ಉಸಿರಾಟದ ತೊಂದರೆ (ಸಾರಿ) ಇದ್ದವರಿಗೆ ಕ್ಷಯ ರೋಗ ಪರೀಕ್ಷೆಗೆ ಒಳಪಡಿಸಬೇಕು ಆದೇಶದಲ್ಲಿ ತಿಳಿಸಲಾಗಿದೆ.