ಪಾದರಾಯನಪುರ ಪುಂಡಾಟ ಪ್ರಕರಣ , 50 ಮಂದಿ ಬಂಧನ..!

0

ಬೆಂಗಳೂರು : ಬಿಬಿಎಂಪಿ, ಆರೋಗ್ಯ ಸಿಬ್ಬಂಧಿ ಹಾಗೂ ಪೊಲೀಸರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 50 ಮಂದಿಯನ್ನು ಬಂಧಿಸಿದ್ದಾರೆ. ಘಟನೆ ನಡೆದಿರುವ ಪಾದರಾಯನಪುರದಲ್ಲಿ ಬಿಗಿ ಪೊಲೀಸ್ ಭದ್ರತೆಯನ್ನು ಒಗಿಸಿದ್ದು, ಹೆಚ್ಚುವರಿ ಪೊಲೀಸ್ ಆಯುಕ್ತರಾದ ಸೌಮೇಂದು ಮುಖರ್ಜಿ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ.

ಬೆಂಗಳೂರು ನಗರದ ಪಾದರಾಯನಪುರದಲ್ಲಿ ಕೊರೊನಾ ಸೋಂಕಿತ ವ್ಯಕ್ತಿಯ ಜೊತೆಯಲ್ಲಿ ಪ್ರಾಥಮಿಕ ಸಂಪರ್ಕದಲ್ಲಿದ್ದ ಸುಮಾರು 58 ಮಂದಿಯನ್ನು ಕ್ವಾರಂಟೈನ್ ಗೆ ಒಳಪಡಿಸಲು ನಿನ್ನೆ ರಾತ್ರಿ ಬಿಬಿಎಂಪಿ, ಆರೋಗ್ಯ ಸಿಬ್ಬಂಧಿ ಹಾಗೂ ಪೊಲೀಸರು ಸ್ಥಳಕ್ಕೆ ತೆರಳಿದ್ದರು. ಸುಮಾರು 15 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಿದ್ದರು. ನಂತರ ರೊಚ್ಚಿಗೆದ್ದ ಸ್ಥಳೀಯರು ಆರೋಗ್ಯ ತಪಾಸಣೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.

ಸೀಲ್ ಡೌನ್ ಮಾಡೋ ಸಲುವಾಗಿ ಪೊಲೀಸರು ಅಳವಡಿಸಿದ್ದ ಬ್ಯಾರಿಕೇಡ್, ಪೆಂಡಾಲ್ ಕಿತ್ತೆಸೆದು ಪುಂಡರು ದರ್ಪ ಮೆರೆದಿದ್ದರು. ಮಾತ್ರವಲ್ಲ ಹಲ್ಲೆಗೂ ಮುಂದಾಗಿದ್ದಾರೆ. ಘಟನೆಯಿಂದಾಗಿ ಬಿಬಿಎಂಪಿ, ಆರೋಗ್ಯ ಸಿಬ್ಬಂಧಿ ಹಾಗೂ ಪೊಲೀಸರನ್ನು ಪುಂಡರು ಬೆನ್ನಟ್ಟಿದ್ದಾರೆ.

ಘಟನೆಯ ಬೆನ್ನಲ್ಲೇ ಪೊಲೀಸ್ ಇಲಾಖೆ ಪಾದರಾಯನಪುರದಲ್ಲಿ ಬಿಗಿ ಪೊಲೀಸ್ ಭದ್ರತೆಯನ್ನು ಒದಗಿಸಿದೆ. ಸುಮಾರು 50 ಮಂದಿಯನ್ನು ಬಂಧಿಸಿ ಆಡುಗೋಡಿ ಪೊಲೀಸ್ ಠಾಣೆಗೆ ಶಿಫ್ಟ್ ಮಾಡಲಾಗಿದೆ.

ಇನ್ನು ಪಾದರಾಯನಪುರದಲ್ಲಿ ಮುಂಜಾಗ್ರತಾ ಕ್ರಮವಾಗಿ 10 ಕೆಎಸ್ ಆರ್ ಪಿ ತುಕಡಿ ಹಾಗೂ 220 ಮಂದಿ ಪೊಲೀಸರನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ.

ಅಲ್ಲದೇ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿಯೇ ಮೊಕ್ಕಾಂ ಹೂಡಿದ್ದು, ಯಾರೂ ಕೂಡ ಮನೆಯಿಂದ ಹೊರಗೆ ಬಾರದಂತೆ ಕ್ರಮವಹಿಸಲಾಗಿದೆ.

ಪಾದರಾಯನಪುರದಲ್ಲಿ ಪುಂಡರ ಅಟ್ಟಹಾಸ ಹೇಗಿತ್ತು ನೀವೇ ನೋಡಿ.

https://youtu.be/3dYpjfAcMgw
https://youtu.be/SXQD5xG4OPU
Leave A Reply

Your email address will not be published.