ಕುಕ್ಕೆ ಸುಬ್ರಹ್ಮಣ್ಯದಲ್ಲಿ 560 ಸಿಬ್ಬಂದಿಗೆ ಕೊರೊನಾ ಟೆಸ್ಟ್

0

ಮಂಗಳೂರು : ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸುಮಾರು 560ಕ್ಕೂ ಅಧಿಕ ಸಿಬ್ಬಂದಿಗಳಿಗೆ ರಾಪಿಡ್ ಟೆಸ್ಟ್ ನಡೆಸಲಾಗಿದೆ.

Alvas1
ಕುಕ್ಕೆ ಸುಬ್ರಹ್ಮಣ್ಯದಲ್ಲಿ 560 ಸಿಬ್ಬಂದಿಗೆ ಕೊರೊನಾ ಟೆಸ್ಟ್ 3

ದಕ್ಷಿಣ ಕನ್ನಡ ಜಿಲ್ಲೆ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ರಾಜ್ಯದಲ್ಲಿಯೇ ಎರಡನೇ ಸ್ಥಾನದಲ್ಲಿದೆ. ಮಾತ್ರವಲ್ಲ ರಾಜ್ಯದ ಅತ್ಯಂತ ಶ್ರೀಮಂತ ದೇಗುಲವೆಂಬ ಖ್ಯಾತಿಗೆ ಪಾತ್ರವಾಗಿರುವ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಲಕ್ಷಾಂತರ ಮಂದಿ ಭಕ್ತರು ಆಗಮಿಸುತ್ತಾರೆ. ಕೊರೊನಾ ಸೋಂಕಿನ ನಡುವಲ್ಲೂ ಭಕ್ತರು ದೇವಸ್ಥಾನಕ್ಕೆ ಭೇಟಿಯನ್ನು ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ವತಿಯಿಂದ ರಾಪಿಡ್ ಆಂಟಿಜನ್ ಟೆಸ್ಟ್ ಕಿಟ್ ಬಳಸಿ ತಪಾಸಣೆಯನ್ನು ನಡೆಸಲಾಯಿತು.

Corona rapit test e1595939438527
ಕುಕ್ಕೆ ಸುಬ್ರಹ್ಮಣ್ಯದಲ್ಲಿ 560 ಸಿಬ್ಬಂದಿಗೆ ಕೊರೊನಾ ಟೆಸ್ಟ್ 4

ಆದರೆ ಕೊರೊನಾ ತಪಾಸಣಾ ಪರೀಕ್ಷೆಯಲ್ಲಿ ಯಾವುದೇ ಸಿಬ್ಬಂದಿಗಳಿಗೂ ಕೊರೊನಾ ಸೋಂಕು ಪತ್ತೆಯಾಗಿಲ್ಲ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಟ್ವೀಟ್ ಮಾಡಿದ್ದಾರೆ.

Leave A Reply

Your email address will not be published.