ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಇಂದು ಒಂದೇ ದಿನ 25 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಅಲ್ಲದೇ ಎಪ್ರಿಲ್ 16ರಂದು 42 ವರ್ಷದ ವ್ಯಕ್ತಿ ಮೃತಪಟ್ಟಿದ್ದು, ಕೊರೊನಾ ಸೋಂಕಿನಿಂದಲೇ ಅಂತಾ ದೃಢಪಟ್ಟಿದೆ. ಹೀಗಾಗಿ ರಾಜ್ಯದಲ್ಲಿ ಕೊರೊನಾಕ್ಕೆ ಬಲಿಯಾದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ.

ಕರ್ನಾಟಕ ಕೂಡ ಕೊರೊನಾದ ಹಾಟ್ ಸ್ಪಾಟ್ ಆಗುತ್ತಿದೆ. ದಿನೇ ದಿನೇ ರಾಜ್ಯದಲ್ಲಿ ಕೊರೊನಾ ಪೀಡಿತರ ಸಂಖ್ಯೆ ಹೆಚ್ಚುತ್ತಲೇ ಇದೆ.

ಇಂದು ಒಂದೇ ದಿನ 25 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

ಮೈಸೂರಿನಲ್ಲಿ 7, ಬಾಗಲಕೋಟೆಯಲ್ಲಿ 7, ವಿಜಯಪುರದಲ್ಲಿ 2, ಕಲಬುರಗಿಯಲ್ಲಿ 2 ಹಾಗೂ ಬೆಂಗಳೂರಿನಲ್ಲಿ 3 ಹೊಸದಾಗಿ ಕೊರೊನಾ ಪ್ರಕರಣ ದಾಖಲಾಗಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಪೀಡಿತರ ಸಂಖ್ಯೆ ಇದೀಗ 384ಕ್ಕೆ ಏರಿಕೆಯಾಗಿದೆ.