ನವದೆಹಲಿ : ದೇಶದಾದ್ಯಂತ ಕೊರೊನಾ ಸೋಂಕು ವ್ಯಾಪಿಸುತ್ತಿದೆ. ಕೊರೊನಾ ನಿಯಂತ್ರಣದ ಹಿನ್ನೆಲೆಯಲ್ಲಿ ಉಡುಪಿ ಮುಂಚೂಣಿಯಲ್ಲಿದ್ದು, ಕಳೆದ 19 ದಿನಗಳಿಂದಲೂ ಯಾವುದೇ ಪಾಸಿಟಿವ್ ಪ್ರಕರಣ ಪತ್ತೆಯಾಗಿಲ್ಲ. ಮಾತ್ರವಲ್ಲ ಕೊರೊನಾ ಟೆಸ್ಟಿಂಗ್ ವಿಚಾರದಲ್ಲಿ ಉಡುಪಿ ಜಿಲ್ಲೆ ರಾಜ್ಯದಲ್ಲಿಯೇ ನಂ.1 ಸ್ಥಾನ ಲಭಿಸಿದೆ.

ಕೊರೊನಾ ಸೋಂಕು ಹರಡುತ್ತಿರೋ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ದೇಶದಾದ್ಯಂತ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ. ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1007 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, 23 ಮಂದಿ ಡೆಡ್ಲಿ ಕೊರೊನಾ ಮಹಾಮಾರಿಗೆ ಬಲಿಯಾಗಿದ್ದಾರೆ.

ದೇಶದಲ್ಲಿ ಇದುವರೆಗೆ 13,387 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, 1,749 ಮಂದಿ ಈಗಾಗಲೇ ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ ಆಗಿದ್ದಾರೆ. ಆದರೆ ಉಡುಪಿ ಜಿಲ್ಲೆ ಕೊರೊನಾ ಟೆಸ್ಟಿಂಗ್ ನಲ್ಲಿ ಮುಂಚೂಣಿಯ ಸ್ಥಾನದಲ್ಲಿದೆ.

ಇದುವರೆಗ 403 ಮಂದಿಗೆ ಕೊರೊನಾ ಟೆಸ್ಟ್ ನಡೆಸಲಾಗಿದ್ದು, ಇದುವರೆಗೆ ಕೇವಲ 3 ಮಂದಿಗೆ ಮಾತ್ರ ಸೋಂಕು ಕಾಣಿಸಿಕೊಂಡಿದೆ. ಈ ಪೈಕಿ ಇಬ್ಬರು ಈಗಾಗಲೇ ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ದೇಶದಲ್ಲಿ ಕೊರೊನಾ ಸೋಂಕು ಮೂರನೇ ಹಂತಕ್ಕೆ ತಲುಪಿಲ್ಲ. ದೇಶದಲ್ಲಿ ಇದುವರೆಗೆ ಶೇ.13.06 ರಷ್ಟು ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. ರಾಜ್ಯಗಳಿಗೆ 5 ಲಕ್ಷ ರಾಪಿಡ್ ಕಿಟ್ ಗಳನ್ನು ಕಳುಹಿಸಲಾಗಿದ್ದು, 10 ಲಕ್ಷ ಕಿಟ್ ಗಳ ತಯಾರಿಕೆಯ ಉದ್ದೇಶ ಹೊಂದಲಾಗಿದೆ. ಮಾತ್ರವಲ್ಲ 1.73 ಲಕ್ಷ ಐಸೋಲೇಶನ್ ವಾರ್ಡ್ ಗಳನ್ನು ಸಿದ್ದಪಡಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಹೇಳಿದೆ.